ಸ್ವಾತಂತ್ರ್ಯ ಸಿಕ್ಕಿ 75 ವರ್ಷಗಳ ನಂತರ ಸಿಕ್ಕಿತು ವಿದ್ಯುತ್ ಭಾಗ್ಯ
Team Udayavani, Oct 24, 2022, 8:30 PM IST
ಲಕ್ನೋ: ಉತ್ತರ ಪ್ರದೇಶದ ಎತಾಹ್ ಜಿಲ್ಲೆಯ ತುಲೈ ಕಾ ನಾಗ್ಲಾ ಗ್ರಾಮಕ್ಕೆ ಈ ವರ್ಷದ ದೀಪಾವಳಿ ನಿಜಕ್ಕೂ ಸಂತಸ ತಂದಿದೆ. ಸ್ವಾತಂತ್ರ್ಯ ಸಿಕ್ಕಿ 75 ವರ್ಷಗಳು ಕಳೆದರೂ ವಿದ್ಯುತ್ ಸಂಪರ್ಕ ಕಂಡಿರದ ಗ್ರಾಮಕ್ಕೆ ಇದೀಗ ವಿದ್ಯುತ್ ಸಂಪರ್ಕ ಕಲ್ಪಿಸಿಕೊಡಲಾಗಿದೆ.
ಇತ್ತೀಚೆಗೆ ಈ ಗ್ರಾಮದ ಬಗ್ಗೆ ಮಾಧ್ಯಮಗಳು “ಕತ್ತಲಿನ ಗ್ರಾಮ’ ಎಂದು ವರದಿ ಮಾಡಿದ್ದವು. ಅದರ ಬೆನ್ನಲ್ಲೇ ಎಚ್ಚೆತ್ತುಕೊಂಡ ಮಾಜಿ ವಿದ್ಯುತ್ ಸಚಿವ ಶ್ರೀಕಾಂತ್ ಶರ್ಮಾ ಅವರು ಕೂಡಲೇ ಗ್ರಾಮಕ್ಕೆ ವಿದ್ಯುತ್ಛಕ್ತಿ ಕಲ್ಪಿಸುವಂತೆ ಸೂಚಿಸಿದ್ದರು. ಅಲ್ಲಿನ ಅಲಿಗಂಜ್ ಕ್ಷೇತ್ರದ ಶಾಸಕರು ಈ ಯೋಜನೆಗೆಂದೇ 10 ಲಕ್ಷ ರೂ. ಕೊಟ್ಟಿದ್ದಾರೆ ಎಂದೂ ವರದಿಯಾಗಿದೆ.
“ವಿದ್ಯುತ್ ಬೇಕೆಂದು ಹಲವಾರು ಅಧಿಕಾರಿಗಳ ಬಳಿ ಬೇಡಿಕೆ ಇಟ್ಟಿದ್ದೇವೆ. ಸರ್ಕಾರಗಳು ಬದಲಾದವೇ ಹೊರತು ನಮಗೆ ಬೆಳಕು ಬಂದಿರಲಿಲ್ಲ. ಈಗ ನಮ್ಮೂರಿಗೆ ವಿದ್ಯುತ್ ಸಂಪರ್ಕ ಸಿಕ್ಕಿರುವುದರ ಬಗ್ಗೆ ಸಂತೋಷವಿದೆ’ ಎನ್ನುತ್ತಾರೆ ಗ್ರಾಮಸ್ಥರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!
Super App: ರೈಲು ಬುಕಿಂಗ್, ಟ್ರ್ಯಾಕ್ಗೆ ‘’ಸೂಪರ್ಆ್ಯಪ್’: ಮುಂದಿನ ತಿಂಗಳು ಬಿಡುಗಡೆ
Jharkhand; ಇಂಡಿಯಾ ಒಕ್ಕೂಟದ “ಸಪ್ತ ಗ್ಯಾರಂಟಿ’!: ಮಹಿಳೆಯರಿಗೆ ಮಾಸಿಕ 2,500 ರೂ.
T-Shirt: ಫ್ಲಿಪ್ಕಾರ್ಟ್, ಮೀಶೋದಲ್ಲಿ ಲಾರೆನ್ಸ್ ಬಿಷ್ಣೋಯ್ ಟೀಶರ್ಟ್ ಮಾರಾಟ: ಆಕ್ರೋಶ
Supreme Court: ಬೇಕಾಬಿಟ್ಟಿ ಖಾಸಗಿ ಆಸ್ತಿ ಸ್ವಾಧೀನ ಸಲ್ಲ;ವಿಶೇಷ ಪ್ರಕರಣದಲ್ಲಷ್ಟೇ ಸ್ವಾಧೀನ
MUST WATCH
ಹೊಸ ಸೇರ್ಪಡೆ
Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!
By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್.ಡಿ.ದೇವೇಗೌಡ ಗುಡುಗು
Super App: ರೈಲು ಬುಕಿಂಗ್, ಟ್ರ್ಯಾಕ್ಗೆ ‘’ಸೂಪರ್ಆ್ಯಪ್’: ಮುಂದಿನ ತಿಂಗಳು ಬಿಡುಗಡೆ
Kambala: ಪೆಟಾ ಪಿಐಎಲ್; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್
MUDA Case: ಕೇವಲ 14 ಸೈಟ್ಗಾಗಿ ನಾನು ರಾಜಕಾರಣ ಮಾಡಬೇಕಾ?: ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.