ಕುವೆಂಪು ಮಹಾಮಾನವತಾವಾದಿ; ಹೊಳಬಸು ಶೆಟ್ಟರ
ಪರಿಸರದ ಪರಿಪೂರ್ಣ ಅನುಭವ, ಅನುಭಾವ ಅವರ ಸಾಹಿತ್ಯ ಕೃತಿಗಳಲ್ಲಿದೆ
Team Udayavani, Oct 25, 2022, 3:45 PM IST
ಗುಳೆದಗುಡ್ಡ: ಕುವೆಂಪು ಕೇವಲ ಪದಗಳನ್ನು ಬಳಸಿ ಸಾಹಿತ್ಯ ರಚಿಸದೇ ಇಡೀ ಮನುಕುಲಕ್ಕೆ ಒಳಿತನ್ನು ಬಯಸುವ ಮಾನವತಾವಾದ ಅರಿವನ್ನು ಮೂಡಿಸಿದ ಮಹಾ ಮಾನವತಾವಾದಿ ಎಂದು ಇಲ್ಲಿನ ಹೊಳೆ ಹುಚ್ಚೇಶ್ವರ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಹೊಳಬಸು ಶೆಟ್ಟರ ಹೆಳಿದರು .
ಅವರು ಪಟ್ಟಣದ ಸೈಂಟ್ ಝೇವಿಯರ್ ಪ್ರೌಢಶಾಲಾ ಸಭಾ ಭವನದಲ್ಲಿ ನಡೆದ ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನ ಕುಪ್ಪಳ್ಳಿ ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ, ತಾಲೂಕು ಘಟಕ ಗುಳೇದಗುಡ್ಡ ಮತ್ತು ಸೈಂಟ್ ಝೇವಿಯರ್ ಸಂಸ್ಥೆಯ ಸಹಯೋಗದಲ್ಲಿ ರಾಷ್ಟ್ರಕವಿ ಕುವೆಂಪು ಸಾಹಿತ್ಯಾಧ್ಯಯನ ಕಮ್ಮಟ ಉದ್ಘಾಟಿಸಿ ಮಾತನಾಡಿ, ಕುವೆಂಪು ಅವರು ತಮ್ಮ ಇಡೀ ಸಾಹಿತ್ಯದ್ದುಕ್ಕೂ ಕನ್ನಡ ಭಾಷೆಯ ಶ್ರೀಮಂತಿಕೆಗಾಗಿ ಶ್ರಮಪಟ್ಟವರು.
ಈ ನಾಡಿನ ಶ್ರೇಷ್ಟ ಸಾಹಿತಿಯಾಗಿದ್ದೂ, ಕೃತಿಗಳಲ್ಲಿರುವಂತಹ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಅವರ ಸಂದೇಶಗಳ ಮಾರ್ಗದಲ್ಲಿ ನಡೆಯಬೇಕು ಎಂದರು. ಫಾದರ್ ಹ್ಯಾರಿ ರಾಬರ್ಟ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಕುವೆಂಪು ಅವರು ಮಲೆನಾಡಿನ ಪರಿಸರದಲ್ಲಿ ಜನಿಸಿದ್ದರಿಂದ ಆ ಪರಿಸರದ ಸೂಕ್ಷ್ಮತೆ ಅವರ ಸಾಹಿತ್ಯದಲ್ಲಿ ಕಾಣಬಹುದು. ರಾಮಾಯಣ ದರ್ಶನಂ ಕಾವ್ಯ, ಸಾಹಿತ್ಯದಲ್ಲಿ ಶ್ರೇಷ್ಟ ಕೃತಿಯಾಗಿದ್ದೂ, ಅದರಲ್ಲಿ ಜೀವನ ದರ್ಶನ ಇದೆ. ಪರಿಸರದ ಪರಿಪೂರ್ಣ ಅನುಭವ, ಅನುಭಾವ ಅವರ ಸಾಹಿತ್ಯ ಕೃತಿಗಳಲ್ಲಿದೆ ಎಂದರು.
ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನ ಕುಪ್ಪಳಿ ಸಮಕಾರ್ಯದರ್ಶಿಗಳಾದ ಕಡಿದಾಳ್ ಪ್ರಕಾಶ್ ಮಾತನಾಡಿ, ಕುವೆಂಪು ಪ್ರತಿಷ್ಠಾನದ ಕಾರ್ಯಚಟುವಟಿಕೆಗಳ ಬಗ್ಗೆ ತಿಳಿಸಿದರು. ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನ ಕುಪ್ಪಳಿ ಖಜಾಂಚಿ ದೇವಂಗಿ ಮನುದೇವ ಉಪಸ್ಥಿತರಿದ್ದರು. ಸಂಚಾಲಕರಾದ ಡಾ| ಗುರುಪಾದ ಮರಿಗುದ್ದಿ ಮಾತನಾಡಿದರು.
ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ಶಿವಾನಂದ ಶೆಲ್ಲಿಕೇರಿ. ಗೌರವ ಕಾರ್ಯದರ್ಶಿ ಡಾ| ಚಂದ್ರಶೇಖರ ಕಾಳನ್ನವರ, ಗೌರವ ಕೋಶಾಧ್ಯಕ್ಷ ಡಾ.ಸಿ.ಎಮ್. ಜೋಶಿ, ಕಸಾಪ ತಾಲೂಕ ಘಟಕದ ಅಧ್ಯಕ್ಷ ಡಾ. ಎಚ್.ಎಸ್. ಘಂಟಿ, ತಾಲೂಕ ಕಸಾಪ ಕಾರ್ಯದರ್ಶಿ ಈರಣ್ಣ ಅಲದಿ, ಯಲ್ಲಪ್ಪ ಮನ್ನಿಕಟ್ಟಿ, ವಿಠuಲ್‌ಸಾ ಬದಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್ ಬಾಟಲಿ ಸದ್ದು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.