ಕೋಟಿ ಮೀರಿತು ಕನ್ನಡ ಗಾಯನಕ್ಕೆ ಕಂಠ ನೋಂದಣಿ
Team Udayavani, Oct 26, 2022, 12:24 PM IST
ಬೆಂಗಳೂರು: ಕನ್ನಡ ಸಂಸ್ಕೃತಿ ಇಲಾಖೆ ವತಿಯಿಂದ ಇದೇ ತಿಂಗಳು 28 ರಂದು ಆಯೋಜಿಸಿರುವ ” ಕೋಟಿ ಕಂಠ ಗಾಯನ” ಕಾರ್ಯಕ್ರಮದಲ್ಲಿ ಭಾಗವಹಿಸಲು ಬರೋಬ್ಬರಿ 1 ಕೋಟಿ 10 ಲಕ್ಷ ಜನರು ತಮ್ಮ ಹೆಸರು ನೋಂದಣಿ ಮಾಡಿಕೊಂಡಿದ್ದು, ನಿರೀಕ್ಷೆಗೂ ಮೀರಿ ಜನಸ್ಪಂದನೆ ವ್ಯಕ್ತವಾಗಿದೆ.
ದೇಶ- ವಿದೇಶಗಳಿಂದ ಈ ಗಾಯನ ಕಾರ್ಯಕ್ರಮದಲ್ಲಿ ಭಾಗವಹಿಸುವುದಕ್ಕೆ ಕನ್ನಡಿಗರು ಉತ್ಸಾಹದಿಂದ ಮುಂದೆ ಬಂದಿದ್ದು, ಅಕ್ಟೋಬರ್ 28 ರಂದು ಕೋಟಿ ಕಂಠ ಗಳಲ್ಲಿ ಕನ್ನಡದ ವೃಂದ ಗಾಯನ ಮೊಳಗಿ ದಾಖಲೆ ಸೃಷ್ಟಿಯಾಗಲಿದೆ.
ಈ ಕಾರ್ಯಕ್ರಮ ನಿಮಿತ್ತ ಇಲಾಖೆ ವತಿಯಿಂದ ಪ್ರತ್ಯೇಕ ಕ್ಯೂ ಆರ್ ಕೋಡ್ ಆರಂಭಿಸಲಾಗಿದ್ದು, ಇದರಲ್ಲಿ 29 ರಾಜ್ಯಗಳು ಹಾಗೂ 25 ರಾಷ್ಟ್ರಗಳಿಂದ ಕನ್ನಡ ಪ್ರೇಮಿಗಳು ತಮ್ಮ ಹೆಸರು ನೋಂದಣಿ ಮಾಡಿಕೊಂಡಿದ್ದರು. ಮಂಗಳವಾರ ರಾತ್ರಿ ಕ್ಯೂ ಆರ್ ಕೋಡ್ ನಲ್ಲಿ 1.1 ಕೋಟಿ ಹೆಸರು ನೋಂದಣಿಯಾಗಿತ್ತು. ಇದೀಗ ಈ ಸಂಖ್ಯೆ 1.10 ಕೋಟಿಗೆ ತಲುಪಿದೆ. ಮುಂದಿನ ಎರಡು ದಿನಗಳಲ್ಲಿ ಈ ಸಂಖ್ಯೆ 1.50 ಕೋಟಿ ಮೀರಲಿದೆ ಎಂದು ಕನ್ನಡ ಮತ್ತು ಸಂಸ್ಕ್ರತಿ ಸಚಿವ ವಿ ಸುನಿಲ್ ಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಸಭೆ : ಈ ಕಾರ್ಯಕ್ರಮದ ನಿಮಿತ್ತ ಸಚಿವ ಸುನಿಲ್ಕುಮಾರ್ ನೇತೃತ್ವದಲ್ಲಿ 50 ಕ್ಕೂ ಹೆಚ್ಚು ಸಭೆಗಳು ನಡೆದಿವೆ. ಆಟೊ ಚಾಲಕರ ಸಂಘ, ಮಹಿಳಾ ಸ್ವಸಹಾಯ ಸಂಘ, ಸಹಕಾರಿ ಬ್ಯಾಂಕ್, ಗ್ರಾಮ ಪಂಚಾಯಿತಿ, ಐಟಿಬಿಟಿ ಉದ್ಯೋಗಿಗಳು, ವಿಶ್ವವಿದ್ಯಾಲಯ, ಶಾಲಾ- ಕಾಲೇಜು, ಚಾಲಕ ಸಂಘ ಸೇರಿದಂತೆ ಹತ್ತು ಸಾವಿರಕ್ಕೂ ಹೆಚ್ಚು ಸಂಘಟನೆಗಳ ಜತೆಗೆ ಸಚಿವರು ಖುದ್ದು ಸಭೆ ನಡೆಸಿದ್ದಾರೆ.
ಆರು ಗೀತೆ :
ಅಕ್ಟೋಬರ್ ೨೮ರಂದು ಬೆಳಗ್ಗೆ ನಡೆಯುವ ಈ ಕಾರ್ಯಕ್ರಮದಲ್ಲಿ ರಾಷ್ಟ್ರಕವಿ ಕುವೆಂಪು ವಿರಚಿತ ನಾಡಗೀತೆ “ಜಯ ಭಾರತ ಜನನಿಯ ತನುಜಾತೆ” , ಹುಯಿಲಗೊಳ ನಾರಾಯಣರಾವ್ ವಿರಚಿತ ಉದಯವಾಗಲಿ ನಮ್ಮ ಚಲುವ ಕನ್ನಡನಾಡು, ಡಾ.ಚನ್ನವೀರ ಕಣವಿ ಅವರ “ವಿಶ್ವ ವಿನೂತನ ವಿದ್ಯಾ ಚೇತನ ಸರ್ವ ಹೃದಯ ಸಂಸ್ಕಾರಿ “, ಕುವೆಂಪು ಅವರ “ಬಾರಿಸು ಕನ್ನಡ ಡಿಂಡಿಮವಾ “ , ಡಾ.ಡಿ.ಎಸ್.ಕರ್ಕಿಯವರ “ಹಚ್ಚೇವು ಕನ್ನಡದ ದೀಪ “ ಹಾಗೂ ಡಾ. ಹಂಸಲೇಖ ಅವರ “ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು “ ಎಂಬ ಆರು ಗೀತೆಗಳನ್ನು ಕೋಟಿ ಕಂಠಗಳಲ್ಲಿ ಹಾಡಲಾಗುತ್ತದೆ.
ಎಲ್ಲೆಲ್ಲಿ:
ರಾಜ್ಯ, ಗಡಿನಾಡು, ಸಾಗರೋತ್ತರ ಹೊರತುಪಡಿಸಿ ರಾಜ್ಯದ ಹದಿನೈದು ಸ್ಥಳಗಳಲ್ಲಿ ವಿಶೇಷ ಕಾರ್ತಕ್ರಮ ಆಯೋಜಿಸಲಾಗಿದೆ. ವಿಧಾನಸೌಧದ ಮೆಟ್ಟಿಲು, ಗಾಂಧಿ ಪ್ರತಿಮೆ, ಹೈಕೋರ್ಟ್, ಕಂಠೀರವ ಕ್ರೀಡಾಂಗಣ, ವಿಮಾನ, ರೈಲು, ಚಿತ್ರದುರ್ಗದ ಕೋಟೆ, ಕಡಲ ತೀರಗಳಲ್ಲಿ ಕನ್ನಡದ ಗೀತೆ ಮೊಳಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka Govt. : ನಾಲ್ವರು ಡಿವೈಎಸ್ಪಿಗಳು ವಿವಿಧೆಡೆ ವರ್ಗಾವಣೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್ಗೆ ನೋಟಿಸ್
Madikeri: ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.