ಹೆಡ್ ಬುಷ್ ಚಿತ್ರದಲ್ಲಿ ಭಾವನೆಗೆ ಧಕ್ಕೆ?; ವಿವಾದಕ್ಕೆ ಗುರಿಯಾದ ಚಿತ್ರ
ದೂಷಿಸುವವರು ದಯವಿಟ್ಟು ಸಿನಿಮಾ ನೋಡಿ: ನಾಯಕ ಡಾಲಿ ಧನಂಜಯ್ ಮನವಿ
Team Udayavani, Oct 26, 2022, 1:36 PM IST
ಬೆಂಗಳೂರು : ಬೆಂಗಳೂರು ಭೂಗತ ಜಗತ್ತಿನ ಕಥೆಯನ್ನಾಧರಿಸಿದ ‘ಹೆಡ್ ಬುಷ್’ ಚಿತ್ರದ ವಿರುದ್ಧ ಭಾವನೆಗಳಿಗೆ ಧಕ್ಕೆ ತಂದ ಆರೋಪದಲ್ಲಿ ಸಾಮಾಜಿಕ ತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.
ಚಿತ್ರದ ದೃಶ್ಯವೊಂದರಲ್ಲಿ ಜನಪದ ಕಲೆ ವೀರಗಾಸೆಗೆ ಅವಮಾನ ಮಾಡಿರುವ ಕುರಿತು ಆಕ್ರೋಶ ವ್ಯಕ್ತವಾಗಿದ್ದು, ಈ ಕುರಿತು ಚಿತ್ರ ತಂಡದ ವಿರುದ್ಧ ಸಾಮಾಜಿಕ ತಾಣಗಳಲ್ಲಿ ಹಲವಾರು ಮಂದಿ ತೀವ್ರ ಆಕ್ಷೇಪ ವ್ಯಕ್ತ ಪಡಿಸಿದ್ದಾರೆ. ಚಿತ್ರದಿಂದ ಈ ದೃಶ್ಯವನ್ನು ಕೈಬಿಡಬೇಕು ಎಂದು ಆಗ್ರಹಿಸಿದ್ದಾರೆ. ಬೆಂಗಳೂರು ಕರಗ ಉತ್ಸವದ ಸನ್ನಿವೇಶದ ವೇಳೆ ಈ ಸನ್ನಿವೇಶ ಬಂದಿದೆ ಎಂದು ಹೇಳಲಾಗಿದೆ.
ಈ ಕುರಿತು ಚಿತ್ರದ ನಾಯಕ ನಟ ಡಾಲಿ ಧನಂಜಯ್ ಅವರು ಟ್ವೀಟ್ ಮಾಡಿ ಪ್ರತಿಕ್ರಿಯಿಸಿದ್ದು, ”ನಾನು ಸ್ವತಃ ವೀರಭದ್ರಸ್ವಾಮಿಯ ಭಕ್ತನಾಗಿದ್ದು, ವೀರಗಾಸಗೆ ಅವಮಾನಿಸುವ ಯಾವ ಅಂಶವು ಇಲ್ಲದಂತೆ ನೋಡಿಕೆೊಂಡಿದ್ದೇನೆ. ದೂಷಿಸುವವರು ದಯವಿಟ್ಟು ಸಿನಿಮಾ ನೋಡಿ ಕೂಲಂಕಷವಾಗಿ ವಿಮರ್ಶಿಸಬೇಕಾಗಿ ಕೇಳಿಕೊಳ್ಳುತ್ತೇನೆ” ಎಂದು ಮನವಿ ಮಾಡಿದ್ದಾರೆ.
1970-80ರ ದಶಕದ ಬೆಂಗಳೂರು ಭೂಗತ ಜಗತ್ತಿನ ಕಥೆ,ಲೇಖಕ ಅಗ್ನಿ ಶ್ರೀಧರ್ ಅವರ “ದಾದಾಗಿರಿಯ ದಿನಗಳು’ ಪುಸ್ತಕವನ್ನು ಆಧರಿಸಿ ಚಿತ್ರವನ್ನು ಮಾಡಲಾಗಿದೆ. ನಟ ಡಾಲಿ ಧನಂಜಯ್ ಡಾನ್ ಜಯರಾಜ್ ಪಾತ್ರದಲ್ಲಿ ಕಾಣಿಸಿ ಕೊಂಡಿದ್ದಾರೆ. ಧನಂಜಯ್ ಅವರಿಗೆ ಪಾಯಲ್ ರಜಪೂತ್ ಜೋಡಿಯಾಗಿದ್ದು, ರವಿಚಂದ್ರನ್, ಲೂಸ್‌ಮಾದ ಯೋಗಿ, ವಸಿಷ್ಟ ಸಿಂಹ, ಶ್ರುತಿ ಹರಿಹರನ್, ಶೋಭರಾಜ್, ಬಾಲಾಜಿ ಮನೋಹರ್, ಅರವಿಂದ ರಾವ್ ಹೀಗೆ ಖ್ಯಾತನಾಮ ಕಲಾವಿದರು ಚಿತ್ರದಲ್ಲಿ ಮುಖ್ಯ ಪಾತ್ರಗಳಲ್ಲಿ ನಟಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Middle class; ಮಧ್ಯಮ ವರ್ಗದವರಿಗೆ ಪರಿಹಾರ: ಎಕ್ಸ್ ಬಳಕೆದಾರಗೆ ನಿರ್ಮಲಾ ಪ್ರತಿಕ್ರಿಯೆ
ಪಾಠ ಮಾಡಿದೆವು… ಸರಿ, ಬದುಕಲು ಕಲಿಸಿದೆವಾ?
Big Boss ಸ್ಪರ್ಧಿಯಾಗಿದ್ದ ನಟ-ಗಾಯಕ ಮಾದಕ ವಸ್ತು ಸಹಿತ ಬಂಧನ
Pushpa 2 trailer: ಪೈಸಾ ವಸೂಲ್ ಅವತಾರದಲ್ಲಿ ʼಪುಷ್ಪರಾಜ್ʼ; ಅಲ್ಲು ಭರ್ಜರಿ ಆ್ಯಕ್ಷನ್
Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.