ಯಾದಗಿರಿ : ಕಲುಷಿತ ನೀರಿಗೆ ಇಬ್ಬರು ಬಲಿ; 40ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ

Team Udayavani, Oct 26, 2022, 7:05 PM IST

death

ಯಾದಗಿರಿ: ಜಿಲ್ಲೆಯ ಶಹಾಪುರ ತಾಲೂಕಿನ ಹೊತ್‌ಪೇಟ್ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಕನಿಷ್ಠ ಇಬ್ಬರು ಸಾವನ್ನಪ್ಪಿದ್ದು, 40ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಸೋಮವಾರದಿಂದ ಗ್ರಾಮದ ಜನರು ನಿರಂತರವಾಗಿ ಅನಾರೋಗ್ಯಕ್ಕೆ ಒಳಗಾಗುತ್ತಿದ್ದಾರೆ ಎಂದು ಬುಧವಾರ ಅಧಿಕಾರಿಗಳ ವರದಿ ತಿಳಿಸಿದೆ.

ಇಡೀ ಗ್ರಾಮದಲ್ಲಿ ಭಯ ಆವರಿಸಿದ್ದು, ಸ್ಥಳೀಯರಲ್ಲಿ ಹೆಚ್ಚಿನವರು ವಾಂತಿ ಮತ್ತು ಬೇಧಿ ಲಕ್ಷಣಗಳನ್ನು ಹೊಂದಿದ್ದಾರೆ. ಆರೋಗ್ಯ ಅಧಿಕಾರಿಗಳು ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲು ಶಿಬಿರವನ್ನು ಸ್ಥಾಪಿಸಿದ್ದಾರೆ.

ಕಾಲರಾ ಹರಡುವ ಭೀತಿ ಸ್ಥಳೀಯರಲ್ಲಿದೆ. ಹಳೆ ಬಾವಿಯ ನೀರನ್ನು ನಲ್ಲಿಯ ಸಂಪರ್ಕದ ಮೂಲಕ ಮನೆಗಳಿಗೆ ಸರಬರಾಜು ಮಾಡಿದ ನಂತರ ಈ ದುರಂತ ಸಂಭವಿಸಿದೆ. ಬಾವಿಯಲ್ಲಿನ ನೀರು ಕಲುಷಿತವಾಗಿರುವ ಶಂಕೆ ವ್ಯಕ್ತವಾಗಿದೆ.

ಮೃತರನ್ನು ಹೊನ್ನಪ್ಪ ಗೌಡ ಮತ್ತು ಈರಮ್ಮ ಎಂದು ಗುರುತಿಸಲಾಗಿದೆ. ಹಳೆ ಬಾವಿಯಿಂದ ಕುಡಿಯುವ ನೀರು ಪೂರೈಕೆಗೆ ಸಂಬಂಧಿಸಿದಂತೆ ಸ್ಥಳೀಯರು ಹಲವು ಬಾರಿ ದೂರು ಸಲ್ಲಿಸಿದ್ದರೂ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ನೀರಿನ ಮಾದರಿ ಪಡೆದು ಪ್ರಯೋಗಾಲಯದಲ್ಲಿ ಪರೀಕ್ಷೆ ನಡೆಸಲಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ನೀರನ್ನು ಕುಡಿಯುವ ಉದ್ದೇಶಕ್ಕೆ ಬಳಸುವಂತಿಲ್ಲ ಎಂದು ವರದಿಗಳು ತಿಳಿಸಿವೆ. ಕೊಳವೆಬಾವಿ ನೀರು ಹಾಗೂ ಓವರ್‌ಹೆಡ್‌ ಟ್ಯಾಂಕ್‌ನ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಇವುಗಳನ್ನು ಕುಡಿಯುವ ಉದ್ದೇಶಕ್ಕೆ ಬಳಸಬಹುದೆಂದು ಫಲಿತಾಂಶ ಬಂದಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ರಮೇಶ ಗುತ್ತೇದಾರ ಶಹಾಪುರ ತಿಳಿಸಿದ್ದಾರೆ.

ಟಾಪ್ ನ್ಯೂಸ್

ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

Education: ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

1-robo-kidnap

Shanghai: ಎಐ ಆಧಾರಿತ ರೋಬೋಟ್‌ನಿಂದ 12 ರೋಬೋಗಳ ಕಿಡ್ನಾಪ್‌!

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

Education: ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

1-robo-kidnap

Shanghai: ಎಐ ಆಧಾರಿತ ರೋಬೋಟ್‌ನಿಂದ 12 ರೋಬೋಗಳ ಕಿಡ್ನಾಪ್‌!

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.