ಓವೈಸಿ ಯಾವ ಸಂದೇಶ ನೀಡಲು ಬಯಸುತ್ತಾರೆ? : ಶಾಹನವಾಜ್ ಹುಸೈನ್ ಪ್ರಶ್ನೆ
ಭಾರತವು ಅಲ್ಪಸಂಖ್ಯಾತರಿಗೆ ಸುರಕ್ಷಿತ ದೇಶ...
Team Udayavani, Oct 26, 2022, 7:26 PM IST
ನವದೆಹಲಿ: ರಿಷಿ ಸುನಕ್ ಬ್ರಿಟನ್ ಪ್ರಧಾನಿಯಾದ ಬಳಿಕ ಭಾರತದಲ್ಲಿ ಹೊಸ ಚರ್ಚೆಗಳು ರಾಜಕೀಯ ಪಕ್ಷಗಳ ನಡುವೆ ತೀವ್ರವಾಗಿದ್ದು, ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಹೇಳಿಕೆಗೆ ಬಿಜೆಪಿಯ ಹಿರಿಯ ನಾಯಕ ಶಾಹನವಾಜ್ ಹುಸೈನ್ ತಿರುಗೇಟು ನೀಡಿದ್ದು, ಹೇಳಿಕೆಗಳಿಂದ ಹಿಂದೂ ಮತ್ತು ಮುಸ್ಲಿಮರ ನಡುವೆ ಭಿನ್ನಾಭಿಪ್ರಾಯಗಳನ್ನು ಸೃಷ್ಟಿಸಲು ಬಯಸಲಾಗಿದೆ ಎಂದಿದ್ದಾರೆ.
”ಹಿಜಾಬ್ ಧರಿಸಿರುವ ಮಹಿಳೆಯನ್ನು ಭಾರತದ ಪ್ರಧಾನಿಯಾಗಿ ನೋಡಲು ಬಯಸುತ್ತೇನೆ” ಎಂದು ಹೇಳಿದ್ದ ಓವೈಸಿ ಅವರಿಗೆ ತಿರುಗೇಟು ನೀಡಿ, ”ಓವೈಸಿಯಂತಹ ನಾಯಕರು ಅಲ್ಪಸಂಖ್ಯಾತ ಸಮುದಾಯಗಳ ವಿರುದ್ಧ ಎಂದು ಹೇಳುವ ಮೂಲಕ ಅವರು ಬಿಜೆಪಿಯನ್ನು ಗುರಿಯಾಗಿಸಿದ್ದಾರೆ. ಭಾರತವು ಅಲ್ಪಸಂಖ್ಯಾತರಿಗೆ ಸುರಕ್ಷಿತ ದೇಶವಾಗಿದೆ” ಎಂದಿದ್ದಾರೆ.
”ಓವೈಸಿ ವಿಚಿತ್ರ ಹೇಳಿಕೆಗಳನ್ನು ನೀಡುವುದರಲ್ಲಿ ನಿಪುಣರು. ಇಂಗ್ಲೆಂಡಿನಲ್ಲಿ ಅಲ್ಪಸಂಖ್ಯಾತ ಸಮುದಾಯದ ವ್ಯಕ್ತಿ ಪ್ರಧಾನಿಯಾದರೆ ಅವರಿಗೆ ಸಂತೋಷವಿಲ್ಲ. ಭಾರತದಲ್ಲಿ ಫಕ್ರುದ್ದೀನ್ ಅಲಿ ಅಹ್ಮದ್, ಜಾಕಿರ್ ಹುಸೇನ್, ಎಪಿಜೆ ಅಬ್ದುಲ್ ಕಲಾಂ ಮತ್ತು ಮನಮೋಹನ್ ಸಿಂಗ್ ಅವರು ರಾಷ್ಟ್ರಪತಿ ಅಥವಾ ಪ್ರಧಾನ ಮಂತ್ರಿ ಹುದ್ದೆಗಳನ್ನು ಹೊಂದಿದ್ದರು. ಓವೈಸಿ ಮಾತನಾಡುತ್ತಿರುವ ರೀತಿಯ ಭಾಷೆ ದುರದೃಷ್ಟಕರ. ಇಂತಹ ಹೇಳಿಕೆ ನೀಡುವ ಮೂಲಕ ಅವರು ಯಾವ ಸಂದೇಶವನ್ನು ನೀಡಲು ಬಯಸುತ್ತಾರೆ? ದೇಶದ ಜನರಿಂದ ಆಯ್ಕೆಯಾದ ವ್ಯಕ್ತಿ ಮಾತ್ರ ಪ್ರಧಾನಿಯಾಗುತ್ತಾರೆ’’ ಎಂದು ಶಾಹನವಾಜ್ ಹುಸೈನ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
America:ಭಾರತೀಯ ಮೂಲದ ವೈದ್ಯರಿಗೆ 17 ಕೋಟಿ ರೂ. ದಂಡ
UGC; ಪದವಿ ಕಲಿಕೆ ಅವಧಿ ನಿರ್ಧಾರ ಆಯ್ಕೆ ಶೀಘ್ರ: ಚೇರ್ಮನ್ ಹೇಳಿದ್ದೇನು?
Bangladesh; ಚಿನ್ಮಯಿ ಕೃಷ್ಣದಾಸ್‌ಗೂ ನಮಗೂ ಸಂಬಂಧವಿಲ್ಲ: ಇಸ್ಕಾನ್ ಸ್ಪಷ್ಟನೆ
Bullet train ದೇಶದಲ್ಲಿಯೇ ನಿರ್ಮಾಣ: ಸಂಸತ್ತಿಗೆ ಕೇಂದ್ರ ಮಾಹಿತಿ
Agriculture; ರಾಜ್ಯದ ರೈತರು, ಜನತೆಗೆ ಶುಭ ಸುದ್ದಿ: ಈ ಬಾರಿ ಬಂಪರ್ ಇಳುವರಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.