ಯು.ಕೆ.ಪಿ ಭೂಸ್ವಾಧೀನ ತ್ವರಿತ ವಿಲೇವಾರಿಗೆ ಕ್ರಮ: ಗೋವಿಂದ ಕಾರಜೋಳ
Team Udayavani, Oct 27, 2022, 5:51 PM IST
ಬೆಂಗಳೂರು: ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತದ ಭೂಸ್ವಾಧೀನ ಮತ್ತು ಪುನರ್ವಸತಿ ಹಾಗೂ ಪುನರ್ನಿರ್ಮಾಣ ಕಾಮಗಾರಿಗಳಿಗೆ ಡಿಸೆಂಬರ್ ಅಂತ್ಯದೊಳಗೆ 3000 ಕೋಟಿ ರೂ. ವೆಚ್ಚ ಮಾಡಲು ಮತ್ತು ಪ್ರಸಕ್ತ ಸಾಲಿನಲ್ಲಿಯೇ 11,000 ಎಕರೆ ಭೂಸ್ವಾಧೀನ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ರವರು ಇಂದು ನಡೆದ ಜಲಸಂಪನ್ಮೂಲ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಆಲಮಟ್ಟಿ ಅಣೆಕಟ್ಟೆಯ ಎತ್ತರವನ್ನು 524.256 ಮೀ. ಮಟ್ಟಕ್ಕೆ ನೀರು ನಿಲ್ಲಿಸಲು ಅಗತ್ಯವಿರುವ 76000 ಎಕರೆಗಳ ಪೈಕಿ 37000 ಎಕರೆ ಪ್ರದೇಶದ ಭೂಸ್ವಾಧೀನ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದಂತಾಗುತ್ತದೆ ಎಂದು ಮಾನ್ಯ ಸಚಿವರು ತಿಳಿಸಿದರು. ಅಣೆಕಟ್ಟೆಯ ಎತ್ತರವನ್ನು 524.256 ಮೀ. ಹೆಚ್ಚಿಸುವುದಕ್ಕಾಗಿ ಮುಳುಗಡೆಯಾಗುವ 20 ಹಳ್ಳಿಗಳ ಪೈಕಿ 4 ಹಳ್ಳಿಗಳ 3700 ಕಟ್ಟಡಗಳಿಗೂ ಪರಿಹಾರ ಧನವನ್ನು ಪಾವತಿ ಮಾಡಲು ಸಚಿವರು ಸೂಚಿಸಿದರು.
ಈಗಾಗಲೇ ಹಳೆಯ ಭೂಸ್ವಾಧೀನ ಕಾಯ್ದೆ 4(1) ಅಥವಾ ಪ್ರಸ್ತುತ ಭೂಸ್ವಾಧೀನ ಕಾಯ್ದೆ 11(1)ರಡಿಯಲ್ಲಿ ಅಧಿಸೂಚಿಸಲ್ಪಟ್ಟು ಕಾರಣಾಂತರದಿಂದ ನಿಷ್ಪರಿಣಾಮಕಾರಿಯಾಗಿ ನಿಷ್ಕ್ರಿಯಗೊಂಡಿರುವ ಅಧಿಸೂಚನೆಗಳ ಜಮೀನು ಮಾಲೀಕ ರೈತರು ನೇರ ಖರೀದಿ ಮತ್ತು ಸಮ್ಮತಿ ಐತೀರ್ಪಿಗೆ ಒಪ್ಪಿದಲ್ಲಿ ಅಂತಹವುಗಳನ್ನು ಕೂಡ ಜಿಲ್ಲಾಧಿಕಾರಿಗಳ ಮುಖಾಂತರ ಭೂಸ್ವಾಧೀನ ಕಾಯ್ದೆಯಡಿ ಪರಿಹಾರ ನೀಡಲು ಕ್ರಮ ಕೈಗೊಂಡು ತ್ವರಿತವಾಗಿ ಭೂಸ್ವಾಧೀನ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸೂಚಿಸಲಾಯಿತು.
20 ಬಾಧಿತ ಹಳ್ಳಿಗಳ ಪೂರ್ಣ ಪುನರ್ವಸತಿ ಕಾರ್ಯಕ್ರಮ ಪೂರ್ಣಗೊಳಿಸಿ ಪುನರ್ವಸತಿ ಕೇಂದ್ರಗಳನ್ನು ಸ್ಥಾಪಿಸಲಾಗುವುದು. ಈ ಪುನರ್ವಸತಿ ಕೇಂದ್ರಗಳ ಸ್ಥಾಪನೆಗೆ ಅಗತ್ಯವಿರುವ 6437 ಎಕರೆ ಪೈಕಿ 3278 ಎಕರೆ ಪ್ರದೇಶವನ್ನು ಈಗಾಗಲೇ ಭೂಸ್ವಾಧೀನಪಡಿಸಿಕೊಳ್ಳಲಾಗಿದೆ. ಪುನರ್ವಸತಿ ಕೇಂದ್ರಗಳಿಗೆ ಅಗತ್ಯವಿರುವ ವಿದ್ಯುತ್ ಪೂರೈಕೆಗೆ ಪ್ರತ್ಯೇಕ ಉಪ ಕೇಂದ್ರ ಅಗತ್ಯವಿಲ್ಲ ಎಂದು ಇಂಧನ ಇಲಾಖೆಯ ಅಧಿಕಾರಿಗಳಿಗೆ ಸಭೆಯಲ್ಲಿ ಸೂಚಿಸಲಾಯಿತು.
ಭೂಸ್ವಾಧೀನ ಪ್ರಕ್ರಿಯೆ ಸಂದರ್ಭದಲ್ಲಿ ಸಿಬ್ಬಂಧಿ ಕೊರತೆಯಾಗದಂತೆ ನಿವೃತ್ತ ಕಂದಾಯ ಅಧಿಕಾರಿಗಳನ್ನು ಭೂಸ್ವಾಧೀನ ಪ್ರಕ್ರಿಯೆಯಲ್ಲಿ ತೊಡಗಿಸಲು ಅನುಮೋದನೆ ನೀಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು
Encounter: ನಕ್ಸಲ್ ವಿಕ್ರಂ ಗೌಡ ತಂಡದ ಬೇಟೆಗೆ ಎಎನ್‌ಎಫ್ ‘ಆಪರೇಷನ್ ಮಾರುವೇಷ’!
Naxal Activity: ರಾಜ್ಯದಲ್ಲಿ ನಕ್ಸಲ್ ಚಳವಳಿ ಅಂತ್ಯಗೊಂಡೀತೇ?
Debt Reduction: ನಬಾರ್ಡ್ ಸಾಲ ಕಡಿತ: ಪ್ರಧಾನಿ ಮೋದಿ, ಶಾ ಭೇಟಿಗೆ ರಾಜ್ಯ ಸರಕಾರದ ನಿರ್ಧಾರ
Congress: ಸಂಪುಟದಲ್ಲಿ ನಮಗೂ ಅವಕಾಶ ಕೊಡಿ: ಇಬ್ಬರು ಕಾಂಗ್ರೆಸ್ ಶಾಸಕರ ಪಟ್ಟು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.