ಕೇಂದ್ರೀಕೃತ ಕೈಗಾರಿಕೆ ತಪಾಸಣ ವ್ಯವಸ್ಥೆ: ರಾಜ್ಯಕ್ಕೆ “ಚಿನ್ನ’
Team Udayavani, Oct 28, 2022, 6:35 AM IST
ಬೆಂಗಳೂರು: ಸುಲಲಿತ ವ್ಯವಹಾರಕ್ಕೆ ಆದ್ಯತೆ ನೀಡುವ ರಾಜ್ಯಗಳ ಸಾಲಿನಲ್ಲಿ ಅಗ್ರ ಸ್ಥಾನದಲ್ಲಿರುವ ಕರ್ನಾಟಕ, ಕೇಂದ್ರೀಕೃತ ಕೈಗಾರಿಕೆ ತಪಾಸಣ ವ್ಯವಸ್ಥೆ ಜಾರಿಗಾಗಿ ಸ್ಕಾಚ್ ಅವಾರ್ಡ್ಸ್ನಲ್ಲಿ ಚಿನ್ನ ಪಡೆದಿದೆ.
“ಸ್ಟೇಟ್ ಆಫ್ ಗವರ್ನನ್ಸ್’ ಪರಿಕಲ್ಪನೆಯಡಿ ನಡೆದ 83ನೇ ಸ್ಕಾಚ್ ಶೃಂಗಸಭೆಯಲ್ಲಿ ಸುಲಲಿತ ವ್ಯವಹಾರಗಳ ವಿಭಾಗದಲ್ಲಿ ಕರ್ನಾಟಕಕ್ಕೆ ಅಗ್ರಮಾನ್ಯ ಪ್ರಶಸ್ತಿ ಘೋಷಿಸಲಾಗಿದೆ. ಕಾರ್ಯಕ್ಷಮತೆಯ ಆಧಾರದ ಮೇಲೆ ರಾಜ್ಯಗಳು, ಇಲಾಖೆಗಳು, ಜಿಲ್ಲೆಗಳು ಮತ್ತು ಪುರಸಭೆಗಳನ್ನು ಶ್ರೇಣೀಕರಿಸಿ ಪ್ರತಿವರ್ಷ ಶ್ರೇಯಾಂಕವನ್ನು ಬಿಡುಗಡೆ ಮಾಡಲಾಗುತ್ತದೆ.
ಪ್ರಶಸ್ತಿ ಕುರಿತು ಸಂತಸ ವ್ಯಕ್ತಪಡಿಸಿರುವ ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಮುರುಗೇಶ್ ಆರ್. ನಿರಾಣಿ, ಕೈಗಾರಿಕೆಗಳ ಕಾರ್ಯ ನಿರ್ವಹಣೆ ನಿಯಮಗಳ ಪಾಲನೆಗಳ ತಪಾಸಣೆ, ಮೇಲ್ವಿಚಾರಣೆಗಾಗಿ ನಾನಾ ಇಲಾಖೆಗಳು ಪ್ರತ್ಯೇಕವಾಗಿ ಭೇಟಿ ನೀಡುವುದರಿಂದ ಉಂಟಾಗುವ ಅನಗತ್ಯ ಕಿರಿಕಿರಿ ತಪ್ಪಿಸಲು ಹಾಗೂ ಪಾರದರ್ಶಕ ಪರಿಶೀಲನೆಗಾಗಿ ವಾಣಿಜ್ಯ ಕೈಗಾರಿಕಾ ಇಲಾಖೆಯು ಕೇಂದ್ರೀಕೃತ ಪರಿವೀಕ್ಷಣ ವ್ಯವಸ್ಥೆ (ಸೆಂಟ್ರಲ್ ಇನ್ಸ್ಸ್ಟ್ರಕ್ಷನ್ ಸಿಸ್ಟೆಮ್) ಜಾರಿಗೊಳಿಸಿದೆ. ಈ ವ್ಯವಸ್ಥೆಗೆ “ಸ್ಕಾಚ್ ಅವಾರ್ಡ್ಸ್ʼನಲ್ಲಿ ಚಿನ್ನ ಪಡೆದಿರುವುದು ಸಂತಸದ ವಿಷಯವಾಗಿದೆ ಎಂದು ಹೇಳಿದ್ದಾರೆ.
ಕೇಂದ್ರ ಸರಕಾರ “ಈಸ್ ಆಫ್ ಡೂಯಿಂಗ್’ ವ್ಯವಸ್ಥೆಯಡಿ ಕೈಗಾರಿಕೆಗಳ ಸುಗಮ ಕಾರ್ಯ ನಿರ್ವಹಣೆಗೆ ಸೂಕ್ತ ಕ್ರಮ ವಹಿಸುವಂತೆ ನೀಡಿರುವ ನಿರ್ದೇಶದನ್ವಯ ಹೊಸ ಸಿಐಎಸ್ ತಂತ್ರಾಂಶ ರೂಪುಗೊಂಡಿದೆ. ಇದರ ಬಳಕೆಯಿಂದ ಕೈಗಾರಿಕೆಗಳ ತಪಾಸಣೆ, ನಿಯಮಗಳ ಪಾಲನೆ ಹಾಗೂ ಗುಣಮಟ್ಟದ ನಿರ್ವಹಣೆಗೆ ಸಹಕಾರಿಯಾಗಲಿದೆ ಎಂದು ಕೈಗಾರಿಕಾಭಿವೃದ್ಧಿ ಆಯುಕ್ತರಾದ ಗುಂಜನ್ ಕೃಷ್ಣ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್ ಬಾಟಲಿ ಸದ್ದು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.