ಕಲುಷಿತ ನೀರು ಸೇವಿಸಿ ವೃದ್ಧ ಸಾವು: ಮೃತರ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ ಘೋಷಣೆ
Team Udayavani, Oct 27, 2022, 10:05 PM IST
ರಾಮದುರ್ಗ: ಕಲುಷಿತ ನೀರು ಸೇವಿಸಿ ವ್ಯಕ್ತಿಯೊಬ್ಬರು ಮೃತಪಟ್ಟು, ನೂರಕ್ಕೂ ಹೆಚ್ಚು ಮಂದಿ ವಾಂತಿಭೇದಿಯಿಂದ ಅಸ್ವಸ್ಥರಾದ ಘಟನೆ ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಮುದೇನೂರ ಗ್ರಾಮದಲ್ಲಿ ಬುಧವಾರ ನಡೆದಿದೆ.
ಮುದೇನೂರ ಗ್ರಾಮದ ಶಿವಪ್ಪ ಯಂಡಿಗೇರಿ (75) ಮೃತಪಟ್ಟವರು. ಇನ್ನೂ ಐವರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರು ಮೃತರ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.
ಮುದೇನೂರ ಗ್ರಾಮದಲ್ಲಿ ಗ್ರಾ.ಪಂ. ನಿಂದ ಸರಬರಾಜು ಮಾಡಲಾಗುವ ಕೊಳವೆ ಬಾವಿಯ ಪೈಪ್‌ಲೈನ್ ಒಡೆದು ಚರಂಡಿ ಹಾಗೂ ತಿಪ್ಪೆಗುಂಡಿಗಳ ಕಲುಷಿತ ನೀರಿತ್ತು. ಗ್ರಾಮಸ್ಥರು ಮೂರ್‍ನಾಲ್ಕು ದಿನಗಳಿಂದ ಅದೇ ನೀರನ್ನು ಕುಡಿದು ನೂರಾರು ಮಂದಿ ಅಸ್ವಸ್ಥರಾಗಿದ್ದಾರೆ. ಈ ಪೈಕಿ ಅಸ್ವಸ್ಥರಾಗಿದ್ದ 35ಕ್ಕೂ ಅ ಧಿಕ ಜನರನ್ನು ರಾಮದುರ್ಗ ಪಟ್ಟಣದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಹಲವರು ಖಾಸಗಿ ಆಸ್ಪತ್ರೆಗಳಿಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅದರಲ್ಲಿ ಹಲವರ ಸ್ಥಿತಿ ಗಂಭೀರವಾಗಿದ್ದರಿಂದ ಬೆಳಗಾವಿ-ಬಾಗಲಕೋಟೆ ಜಿಲ್ಲಾಸ್ಪತ್ರೆಗಳಿಗೆ ರವಾನಿಸಲಾಗಿದೆ.
ಒಂದು ವಾರದ ಹಿಂದೆ ಪೈಪ್ ಒಡೆದು ಕಲುಷಿತ ನೀರು ಬರುತ್ತಿರುವ ಕುರಿತು ಗ್ರಾ.ಪಂ.ಗೆ ತಿಳಿಸಲಾಗಿದ್ದರೂ ಗಮನಹರಿಸದ ಅ ಧಿಕಾರಿಗಳು, ಈ ಘಟನೆ ನಡೆದ ಬಳಿಕ ದುರಸ್ತಿ ಕಾರ್ಯ ಆರಂಭಿಸಿದ್ದಾರೆ. ಆಗಲೇ ದುರಸ್ತಿ ಮಾಡಿದ್ದರೆ ಈ ಘಟನೆ ನಡೆಯುತ್ತಿರಲಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ರಾಜ್ಯೋತ್ಸವ ಮೆರವಣಿಗೆ ವೇಳೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ
Belagavi: ಎಂಇಎಸ್ ಕಾರ್ಯಕರ್ತರ ಪುಂಡಾಟ
Rajyotsava Celebration: ಬೆಳಗಾವಿಯಲ್ಲಿ ವೈಭವದ ಕರ್ನಾಟಕ ರಾಜ್ಯೋತ್ಸವ
Belagavi; ಎಂಇಎಸ್ ನಿಷೇಧಕ್ಕಿಂತ ನಿರ್ಲಕ್ಷ್ಯ ಮಾಡುವುದು ಉತ್ತಮ: ಸತೀಶ್ ಜಾರಕಿಹೊಳಿ
ಬೆಳಗಾವಿ: ಆರ್ಥಿಕ ಮುಗ್ಗಟ್ಟು ಮಧ್ಯೆಯೇ ದುಂದುವೆಚ್ಚ: ಪಾಲಿಕೆಯಿಂದ ಲಕ್ಷ, ಲಕ್ಷ ವೆಚ್ಚ!
MUST WATCH
ಹೊಸ ಸೇರ್ಪಡೆ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು
Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ
Shivaji Satam: ಕ್ಯಾಷಿಯರ್ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.