ಶೀಘ್ರವೇ ಬರಲಿದೆ ಕುಲಾಂತರಿ ಸಾಸಿವೆ
Team Udayavani, Oct 28, 2022, 6:57 AM IST
ಹೊಸದಿಲ್ಲಿ: ಹದಿನೈದು ವರ್ಷಗಳ ಸಂಶೋಧನೆ ಬಳಿಕ ಕುಲಾಂತರಿ ಸಾಸಿವೆಗೆ ದೇಶದಲ್ಲಿ ಒಪ್ಪಿಗೆ ಸಿಗುವ ಸಾಧ್ಯತೆ ಅಧಿಕವಾಗಿದೆ.
ಇದರ ಸಂಶೋಧನೆ ಮತ್ತು ಅಭಿವೃದ್ಧಿಯ ಹೊಣೆ ಹೊತ್ತಿದ್ದ ಜೆನೆಟಿಕ್ ಅಪ್ರೈಸಲ್ ಸಮಿತಿ ವಾಣಿಜ್ಯಿಕವಾಗಿ ಕುಲಾಂತರಿ ಸಾಸಿವೆಯನ್ನು ಬೆಳೆಯಬಹುದು ಎಂದು ಶಿಫಾರಸು ಮಾಡಿದೆ. ಈ ಸಮಿತಿಯು ಕೇಂದ್ರ ಪರಿಸರ ಇಲಾಖೆಯ ಅಡಿಯಲ್ಲೇ ಬರುವುದರಿಂದ ಕುಲಾಂತರಿ ಸಾಸಿವೆ ಬೆಳೆಯಲು ಒಪ್ಪಿಗೆ ಸಿಗುವ ಸಂಭವವಿದೆ.
ಭಾರತ ಪ್ರತೀ ವರ್ಷವೂ ಅಡುಗೆ ಎಣ್ಣೆಗಾಗಿ ವಿವಿಧ ದೇಶಗಳನ್ನು ಅವಲಂಬಿಸಿದೆ. ಶೇ.70ರಷ್ಟು ಅಡುಗೆ ಎಣ್ಣೆ ಅರ್ಜೆಂಟೀನಾ, ಬ್ರೆಜಿಲ್, ಇಂಡೋನೇಷ್ಯಾ, ಮಲೇಷ್ಯಾ, ಉಕ್ರೇನ್ ಮತ್ತು ರಷ್ಯಾದಿಂದ ತರಿಸಿಕೊಳ್ಳುತ್ತಿದೆ. ಸದಾ ಒಂದಿಲ್ಲೊಂದು ಕಾರಣದಿಂದಾಗಿ ಈ ದೇಶಗಳಿಂದ ಪೂರೈಕೆಗೆ ಅಡ್ಡಿಯಾಗುತ್ತದೆ. ಇಂಥ ವೇಳೆಯಲ್ಲಿ ಅಡುಗೆ ಎಣ್ಣೆಯ ದರವೂ ಏರಿಕೆಯಾಗಿ ಹಣದುಬ್ಬರಕ್ಕೂ ಕಾರಣವಾಗುತ್ತಿದೆ. ಹೀಗಾಗಿ ದೇಶದಲ್ಲೇ ಸಾಸಿವೆಯನ್ನು ಹೆಚ್ಚಿನ ಪ್ರಮಾಣದಲ್ಲಿ ಬೆಳೆಯಲು ಈ ಸಂಶೋಧನೆ ನೆರವಾಗಲಿದೆ ಎಂದು ವಿಶ್ಲೇಷಿಸಲಾಗಿದೆ.
ಈ ಬಗ್ಗೆ ಮಾತನಾಡಿದ ಸಂಶೋಧಕ ದೀಪಕ್ ಪೆಂಟಲ್, ಇದೊಂದು ಐತಿಹಾಸಿಕ ವಿದ್ಯಮಾನ ಎಂದು ಬಣ್ಣಿಸಿದ್ದಾರೆ. ಕಡಿಮೆ ವೆಚ್ಚದಲ್ಲಿ ಹೆಚ್ಚು ಸಾಸಿವೆ ಬೆಳೆಯಬಹುದಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಇನ್ನು ಒಂದೆರಡು ವರ್ಷಗಳಲ್ಲಿ ವಾಣಿಜ್ಯಾತ್ಮಕವಾಗಿ ಸಾಸಿವೆ ಬೆಳೆಯಲು ಬೀಜಗಳನ್ನು ಪಡೆಯಬಹುದಾಗಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Mosque survey: ಸಂಭಲ್ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು
Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ
Assembly Election: ಮಹಾರಾಷ್ಟ್ರಕ್ಕೆ ಫಡ್ನವೀಸ್ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್ ವಿಚಾರವಾಗಿ ವಾಗ್ವಾದ
Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Sullia: ರಬ್ಬರ್ ಸ್ಮೋಕ್ ಹೌಸ್ಗೆ ಬೆಂಕಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.