ಉದ್ಯಮಿ ಎಲಾನ್ ಮಸ್ಕ್ ಸುಪರ್ದಿಗೆ ಟ್ವಿಟರ್ : ಸಿಇಒ ಪರಾಗ್ ಅಗರ್ವಾಲ್ ಸೇರಿ ಹಲವರು ವಜಾ
Team Udayavani, Oct 28, 2022, 8:35 AM IST
ವಾಷಿಂಗ್ಟನ್ : 44 ಶತಕೋಟಿ ಡಾಲರ್ ಗೆ ಟ್ವಿಟರ್ ಅನ್ನು ಖರೀದಿಸುವ ಪ್ರಕ್ರಿಯೆ ಪೂರ್ಣಗೊಳಿಸುವ ಮೂಲಕ ಉದ್ಯಮಿ ಎಲಾನ್ ಮಸ್ಕ್ ಟ್ವಿಟರ್ ಅನ್ನು ತನ್ನ ಸುಪರ್ತಿಗೆ ತೆಗೆದುಕೊಂಡಿದ್ದಾರೆ.
ಇದರೊಂದಿಗೆ ಟೆಸ್ಲಾ ಸಿಇಒ ಎಲೋನ್ ಮಸ್ಕ್ ಟ್ವಿಟರ್ನ ಹೊಸ ಮಾಲೀಕರಾಗಿದ್ದಾರೆ. ರಾಯಿಟರ್ಸ್ ವರದಿಯ ಪ್ರಕಾರ, ಎಲೋನ್ ಮಸ್ಕ್ ಮಾಲೀಕರಾದ ಬೆನ್ನಲ್ಲೇ ಟ್ವಿಟರ್ ಸಿಇಒ ಪರಾಗ್ ಅಗರ್ವಾಲ್ ಮತ್ತು ಸಿಎಫ್ಒ ನೆಡ್ ಸೆಗಲ್ ಅವರನ್ನು ಕಂಪನಿಯಿಂದ ವಜಾಗೊಳಿಸಲಾಗಿದೆ. ಅಷ್ಟೇ ಅಲ್ಲ, ಕಂಪನಿಯ ಪ್ರಧಾನ ಕಚೇರಿಯಿಂದಲೂ ಅವರನ್ನು ಹೊರಹಾಕಲಾಗಿದೆ ಎನ್ನಲಾಗಿದೆ.
ಮಸ್ಕ್ ಅವರು ಟ್ವಿಟರ್ ಖರೀದಿ ಪ್ರಸ್ತಾವದಿಂದ ಹಿಂದೆ ಸರಿಯಲು ಯತ್ನಿಸಿದಾಗ ಅಗರ್ವಾಲ್ ಅವರು ನ್ಯಾಯಾಲಯದ ಮೊರೆ ಹೋಗಿದ್ದರು. ನ್ಯಾಯಾಲಯದಲ್ಲಿ ಹಿನ್ನಡೆಯಾಗಬಹುದು ಎಂಬ ಭೀತಿಯಿಂದ ಮಸ್ಕ್ ಟ್ವಿಟರ್ ಖರೀದಿ ಪ್ರಕ್ರಿಯೆ ಪೂರ್ಣಗೊಳಿಸಿದರು. ಟ್ವಿಟರ್ ಖರೀದಿ ಪ್ರಕ್ರಿಯೆಗೆ ನ್ಯಾಯಾಲಯವು ವಿಧಿಸಿದ್ದ ಗಡುವು ಪೂರ್ಣಗೊಳ್ಳಲು ಕೆಲವೇ ಗಂಟೆಗಳು ಬಾಕಿ ಇರುವಾಗ ಈ ಮಹತ್ವದ ಬೆಳವಣಿಗೆ ನಡೆದಿದೆ.
ಟ್ವಿಟರ್ನಲ್ಲಿ ನಕಲಿ ಖಾತೆಗಳಿಗೆ ಕಡಿವಾಣ ಹಾಕಬೇಕಿದೆ. ಸಾರ್ವಜನಿಕವಾಗಿ ಯಾವುದೇ ಪೋಸ್ಟ್ಗಳು ಹೇಗೆ ಕಾಣಿಸುತ್ತವೆ’ ಎಂಬದನ್ನು ಪತ್ತೆ ಮಾಡಲು ಟ್ವಿಟರ್ನ ವ್ಯವಸ್ಥೆಗಳನ್ನು ಮಾರ್ಪಡಿಸಬೇಕು ಎಂದು ಮಸ್ಕ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
Chrome Browser: ಗೂಗಲ್ ಸರ್ಚ್ ಎಂಜಿನ್ ಕ್ರೋಮ್ ಮಾರಾಟ?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.