ಕಾಪು : ಟಯರ್ ಸ್ಫೋಟಗೊಂಡು ಮರದ ದಿಮ್ಮಿ ಸಾಗಾಟದ ಲಾರಿಗೆ ಬೆಂಕಿ, ತಪ್ಪಿದ ಭಾರೀ ಅವಘಡ
ಅಗ್ನಿಶಾಮಕದಳ, ಪೊಲೀಸ್ ಇಲಾಖೆಯ ಜಂಟಿ ಕಾರ್ಯಾಚರಣೆಯಿಂದ ತಪ್ಪಿದ ಭಾರೀ ಹಾನಿ
Team Udayavani, Oct 28, 2022, 10:11 AM IST
ಕಾಪು : ತೀರ್ಥಹಳ್ಳಿಯಿಂದ ಕೇರಳಕ್ಕೆ ಮರದ ತುಂಡು ಸಾಗಿಸುತ್ತಿದ್ದ ಲಾರಿಯ ಟಯರ್ ಸ್ಪೋಟಗೊಂಡು ಬೆಂಕಿ ಹತ್ತಿದ ಘಟನೆ ಉಳಿಯಾರಗೋಳಿ ಕೋತಲಕಟ್ಟೆ ಬಳಿ ಶುಕ್ರವಾರ ಮುಂಜಾನೆ ಸಂಭವಿಸಿದೆ.
ರಾಷ್ಟ್ರೀಯ ಹೆದ್ದಾರಿ ೬೬ರ ಬಿಕ್ಕೋ ಕಂಪೆನಿ ಬಳಿಯಲ್ಲಿ ಘಟನೆ ಸಂಂಭವಿಸಿದ್ದು ಟಯರ್ ಸ್ಪೋಟಗೊಂಡು ಮರದ ದಿಮ್ಮಿಗೆ ಬೆಂಕಿ ಹತ್ತಿತ್ತು. ಬೆಂಕಿಯ ಕೆನ್ನಾಲಗೆ ಲಾರಿಯತ್ತ ಚಾಚುತ್ತಿದ್ದಂತೆಯೇ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಇತರ ವಾಹನ ಸವಾರರು ಪೊಲೀಸ್ ಠಾಣೆಗೆ ಸುದ್ಧಿ ಮುಟ್ಟಿಸಿದ್ದು ಪೊಲೀಸರು ಅಗ್ನಿಶಾಮಕದಳಕ್ಕೆ ಮಾಹಿತಿ ರವಾನಿಸಿದ್ದರು.
ಕೂಡಲೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕದಳದ ಸಿಬಂದಿಗಳು ಮತ್ತು ಪೊಲೀಸರು ಜೊತೆಗೂಡಿ ಬೆಂಕಿಯನ್ನು ನಂದಿಸಿದ್ದು ಭಾರೀ ಪ್ರಮಾಣದ ಅವಘಡವೊಂದು ತಪ್ಪಿದಂತಾಗಿದೆ. ಘಟನೆಯಿಂದಾಗಿ ಅರ್ಧದಷ್ಟು ಮರದ ದಿಮ್ಮಿಗಳು ಬೆಂಕಿಗಾಹುತಿಯಾಗಿದ್ದು ಲಾರಿ ಕೂಡಾ ಹಾನಿಗೊಳಗಾಗಿದೆ.
ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಇದನ್ನೂ ಓದಿ : ಪತ್ನಿ ಮೇಲೆ ಕಾರು ಹರಿಸಲು ಯತ್ನ: ಮುಂಬೈ ಪೊಲೀಸರಿಂದ ಚಿತ್ರ ನಿರ್ಮಾಪಕ ಕಮಲ್ ಕಿಶೋರ್ ಬಂಧನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್
Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ
Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ
Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್ ಗೋಯಲ್
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.