ಪಾಲಿಕೆ ಚುನಾವಣೆ : ಕುಟುಂಬ ಸಮೇತ ಬಂದು ಹಕ್ಕು ಚಲಾಯಿಸಿದ ಶಾಸಕ ಯತ್ನಾಳ
Team Udayavani, Oct 28, 2022, 2:05 PM IST
ವಿಜಯಪುರ: ಮಹಾನಗರ ಪಾಲಿಕೆ ಚುನಾವಣೆ ಹಿನ್ನೆಲೆಯಲ್ಲಿ ಅ.28 ರಂದು ಮತದಾನ ನಡೆಯುತ್ತಿದ್ದು, ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಕುಟುಂಬ ಸದಸ್ಯರೊಂದಿಗೆ ಮತಗಟ್ಟೆಗೆ ಆಗಮಿಸಿ ಮತದಾನ ಮಾಡಿದರು.
ನಗರದ ವಾರ್ಡ್ ನಂಬರ್ 11ರ 95ನೇ ಮತಗಟ್ಟೆಯಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಮತದಾನ ಮಾಡಿದರು. ಶಾಸಕ ಯತ್ನಾಳ ಜೊತೆ ಮತಗಟ್ಟೆಗೆ ಆಗಮಿಸಿದ ಯತ್ನಾಳ ಪತ್ನಿ ಶೈಲಜಾ ಪಾಟಿಲ, ಪುತ್ರರಾದ ರಾಮನಗೌಡ ಪಾಟೀಲ, ಆದರ್ಶ ಪಾಟಿಲ ಕೂಡ ಮತದಾನ ಮಾಡಿಸರು.
ಮತದಾನದ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿ ಯತ್ನಾಳ, ಮೂರು ವರ್ಷಗಳ ಬಳಿಕ ವಿಜಯಪುರ ಮಹಾನಗರ ಪಾಲಿಕೆಗೆ ಚುನಾವಣೆ ನಡೆಯುತ್ತಿದೆ. ಮಹಾನಗರದ ಮತದಾರ ಅತ್ಯಂತ ಉತ್ಸುಕರಾಗಿ ಮತದಾನದಲ್ಲಿ ಪಾಲ್ಗೊಂಡಿದ್ದಾರೆ ಎಂದರು.
ಇದನ್ನೂ ಓದಿ:ರಾಜಧಾನಿಯಲ್ಲಿ ಹಾವುಗಳ ಸಂಚಾರ ಹೆಚ್ಚಳ; ಅಪಾಯಕ್ಕೆ ಸಿಲುಕಿದ ಪಕ್ಷಿಗಳು
ಹಿಂದುತ್ವ ಹಾಗೂ ಅಭಿವೃದ್ಧಿಗಾಗಿ ಮಹಾನಗರದ ಜನರು ಬಿಜೆಪಿ ಪರ ಮತಚಲಾಯಿಸಲಿದ್ದು, ಈ ಬಾರಿ ಪೂರ್ಣ ಬಹುಮತದಿಂದ ಬಿಜೆಪಿ ಮಾಲಿಕೆಯಲ್ಲಿ ಅಧಿಕಾರದ ಗದ್ದುಗೆ ಏರಲಿದೆ ಎಂದರು.
ಕೆಲವು ಕಡೆಗಳಲ್ಲಿ ಮತದಾರರ ಪಟ್ಟಿಯಲ್ಲಿ ಮತದಾರರ ಹೆಸರು ಯಾವ ಕೋರಿಕೆ ಇಲ್ಲದಿದ್ದರೂ ರದ್ದಾಗಿರುವ ದೂರು ಕೇಳಿ ಬಂದಿದೆ. ಈ ಬಗ್ಗೆ ಜಿಲ್ಲಾಡಳಿತದ ಚುನಾವಣಾ ವಿಭಾಗ ಸೂಕ್ತ ಕ್ರಮಕೈಗೊಂಡು ಸಮಸ್ಯೆ ಬಗೆಹರಿಸಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Property: ಸಚಿವ ಜಮೀರ್ ಅಶ್ವಮೇಧ ಕುದುರೆ ತಡೆದಿದ್ದೇನೆ: ಶಾಸಕ ಯತ್ನಾಳ್
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
Waqf Property: ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ರಾಜ್ಯ ಭೇಟಿ: ಕಾಂಗ್ರೆಸ್ ಕೆಂಡ
Muddebihal: ಅತ್ಯಾಚಾರ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಲು ಆಗ್ರಹಿಸಿ ಪ್ರತಿಭಟನೆ
Waqf ಜೆಪಿಸಿ ಅಧ್ಯಕ್ಷ ಭೇಟಿ ಹಿನ್ನೆಲೆ: ವಿಜಯಪುರಕ್ಕೆ ಬಂದ ಜೊಲ್ಲೆ ದಂಪತಿ, ಜಾರಕಿಹೊಳಿ
MUST WATCH
ಹೊಸ ಸೇರ್ಪಡೆ
Puttur: ಕೆರೆಗೆ ಬಿದ್ದು ವ್ಯಕ್ತಿ ಸಾವು
Proposes: ಪುರುಷ ಟೈಲರ್ ಮಹಿಳೆಯರ ಬಟ್ಟೆ ಅಳತೆ ತೆಗೆದುಕೊಳ್ಳುವಂತಿಲ್ಲ: ಮಹಿಳಾ ಆಯೋಗ
Lucky car; ಅದೃಷ್ಟ ತಂದ ಕಾರಿನ ಸಮಾಧಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ 1,500 ಜನರು!!
TV Actor; 35 ನೇ ವಯಸ್ಸಿನಲ್ಲೆ ಜನಪ್ರಿಯ ಕಿರುತೆರೆ ನಟ ನಿತಿನ್ ಚೌಹಾಣ್ ನಿಧ*ನ
Social Media: ಈ ದೇಶದಲ್ಲಿ 16 ವರ್ಷದೊಳಗಿನವರು ಇನ್ಸ್ಟಾಗ್ರಾಮ್, ಫೇಸ್‌ಬುಕ್ ಬಳಸುವಂತಿಲ್ಲ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.