
ಎಜ್ಯುಟೆಕ್ ಕಂಪನಿಗಳ ಆನ್‌ಲೈನ್ ಪಿಎಚ್.ಡಿಗೆ ಮಾನ್ಯತೆ ಇಲ್ಲ
ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ ಯುಜಿಸಿ, ಎಐಸಿಟಿಐ ಎಚ್ಚರಿಕೆ
Team Udayavani, Oct 28, 2022, 7:30 PM IST

ನವದೆಹಲಿ: ವಿದೇಶಿ ವಿವಿಗಳ ಸಹಭಾಗಿತ್ವದಲ್ಲಿ ಆನ್‌ಲೈನ್ ಮೂಲಕ ಎಜ್ಯುಟೆಕ್ ಕಂಪನಿಗಳು ನೀಡುವಂಥ ಪಿಎಚ್.ಡಿಗೆ ಮಾನ್ಯತೆ ಇಲ್ಲ. ಹೀಗೆಂದು ಅಖಿಲ ಭಾರತ ತಾಂತ್ರಿಕ ಶಿಕ್ಷಣ ಸಮಿತಿ (ಎಐಸಿಟಿಇ) ಹಾಗೂ ಯುಜಿಸಿ ಶುಕ್ರವಾರ ಸ್ಪಷ್ಟಪಡಿಸಿವೆ. ಇದು ಪ್ರಸಕ್ತ ವರ್ಷ ಇವುಗಳು ಎರಡನೇ ಬಾರಿಗೆ ನೀಡುತ್ತಿರುವ ಎಚ್ಚರಿಕೆಯಾಗಿದೆ.
ಪಿಎಚ್.ಡಿ, ಎಂ.ಫಿಲ್ ಪದವಿಗೆ ಸಂಬಂಧಿಸಿದಂತೆ 2016ರಲ್ಲಿ ಹೊರಡಿಸಲಾಗಿರುವ ನಿಯಮಗಳ ಪ್ರಕಾರ, ನಿರ್ದಿಷ್ಟ ಮಾನದಂಡಗಳು ಇವೆ. ಅದನ್ನು ಎಲ್ಲಾ ಉನ್ನತ ಶಿಕ್ಷಣ ಸಂಸ್ಥೆಗಳು ಪಾಲಿಸಲೇಬೇಕು ಎಂದು ಯುಜಿಸಿ ಮತ್ತು ಎಐಸಿಟಿಇ ಹೇಳಿವೆ.
ಎಜ್ಯುಟೆಕ್ ಕಂಪನಿಗಳು ಆನ್‌ಲೈನ್ ಮೂಲಕ ಪಿಎಚ್.ಡಿ ನೀಡುತ್ತೇವೆ ಎಂದು ಹೇಳುವ ಜಾಹೀರಾತುಗಳಿಂದ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳು ದೂರ ಇರಬೇಕು. ಅಂಥ ಸಂಸ್ಥೆಗಳು ನೀಡುವ ಮಾಹಿತಿಯನ್ನು ಖಚಿತಪಡಿಸಿಕೊಂಡ ಬಳಿಕವೇ ಪ್ರವೇಶ ಪಡೆದುಕೊಳ್ಳುವುದು ಉತ್ತಮ ಎಂದು ಸಲಹೆ ನೀಡಿವೆ.
ಕೇಂದ್ರ ಸರ್ಕಾರ ಇಂತಹ ಸೇವೆ ನೀಡುವ ಕಂಪನಿಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿಯೂ ಕ್ರಮಗಳನ್ನು ಕೈಗೊಳ್ಳಲು ಚಿಂತನೆ ನಡೆಸುತ್ತಿದೆ. ಅದಕ್ಕಾಗಿ ಕೇಂದ್ರ ಶಿಕ್ಷಣ ಸಚಿವಾಲಯ, ಕಾನೂನು ಸಚಿವಾಲಯದ ಜತೆಗೆ ಚರ್ಚೆಗಳನ್ನು ನಡೆಸುತ್ತಿದೆ.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ

ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು

Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
MUST WATCH
ಹೊಸ ಸೇರ್ಪಡೆ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ

ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ

Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.