ಹಾವೇರಿ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕೊನೆಗೂ ಚಾಲನೆ : ಸಿದ್ಧತಾ ಸಭೆ ನಡೆಸಿದ ಸರ್ಕಾರ
Team Udayavani, Oct 29, 2022, 11:35 AM IST
ಬೆಂಗಳೂರು: ಹಾವೇರಿ ಜಿಲ್ಲೆಯಲ್ಲಿ ಜನವರಿ ತಿಂಗಳಲ್ಲಿ ನಡೆಯಲಿರುವ 86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸರ್ಕಾರ ಈಗ ಅಧಿಕೃತ ಚಾಲನೆ ಲಭಿಸಿದ್ದು ಹಾವೇರಿ ಜಿಲ್ಲೆ ಉಸ್ತುವಾರಿ ಸಚಿವ ಶಿವರಾಂ ಹೆಬ್ಬಾರ್, ಕನ್ನಡ ಮತ್ತು ಸಂಸ್ಕ್ರತಿ ಸಚಿವ ವಿ.ಸುನಿಲ್ ಕುಮಾರ್ ಶನಿವಾರ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.
ಸಮ್ಮೇಳನ ನಡೆಯುವ ಸ್ಥಳ ಪರಿಶೀಲನರ ಹಾಗೂ ಪೂರ್ವಭಾವಿ ಸಭೆ ನಡೆಸಿದ ಉಭಯ ಸಚಿವರು, ಹಿಂದಿನ ಎಲ್ಲ ಸಮ್ಮೇಳನಕ್ಕಿಂತಲೂ ಯಶಸ್ವಿಯಾಗಿ ಈ ಸಮ್ಮೇಳನ ನಡೆಯಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕೊರೊನಾ ಬಳಿಕ ನಡೆಯುವ ಸರ್ಕಾರದ ಮಹತ್ವದ ಸಮ್ಮೇಳನ ಇದಾಗಿದೆ. ಹೀಗಾಗಿ ಬಹಳ ಎಚ್ಚರಿಕೆಯಿಂದ ಕಾರ್ಯಕ್ರಮ ರೂಪಿಸಬೇಕು. ಮುಖ್ಯಮಂತ್ರಿಗಳ ತವರು ಜಿಲ್ಲೆಯೂ ಇದಾಗಿರುವುದರಿಂದ ಸಾಕಷ್ಟು ಎಚ್ಚರಿಕೆ ವಹಿಸಬೇಕು ಎಂದು ಸಚಿವ ಸುನಿಲ್ ಕುಮಾರ್ ಸೂಚನೆ ನೀಡಿದರು.
ಜನವರಿ 6, 7, 8 ರಂದು ಸಮ್ಮೇಳನ ನಡೆಯಲಿದ್ದು, ಇದಕ್ಕಾಗಿ 17 ಸಮಿತಿಗಳನ್ನು ರಚನೆ ಮಾಡಲಾಗಿದೆ. ಆಹಾರ, ವಸತಿ, ಮೆರವಣಿಗೆ ಕಾರ್ಯಕ್ರಮಗಳು ಸುಸಜ್ಜಿತವಾಗಿ, ವ್ಯವಸ್ಥಿತವಾಗಿ ನಡೆದರೆ ಸಮ್ಮೇಳನ ಅರ್ಧ ಯಶಸ್ವಿಯಾಗುತ್ತದೆ. ಇನ್ನಷ್ಟು ಸಮಿತಿ ರಚನದ ಮಾಡಬೇಕು ಎಂದು ಸೂಚನೆ ನೀಡಿದರು.
25 ಸಾವಿರ ಜನಕ್ಕೆ ವಸತಿ ವ್ಯವಸ್ಥೆ ಮಾಡಬೇಕಾಗುತ್ತದೆ ಎಂದು ಜಿಲ್ಲಾಡಳಿತ ಅಂದಾಜಿಸಿದ್ದು, ಎ, ಬಿ, ಸಿ ಎಂದು ವರ್ಗೀಕರಣ ಮಾಡಲಾಗಿದೆ. ಒಟ್ಟು 3160 ಕೊಠಡಿಗಳನ್ನು ಈಗಾಗಲೇ ಗುರುತಿಸಲಾಗಿದೆ. ಸರಕಾರದಿಂದ ಈ ಸಮ್ಮೇಳನಕ್ಕೆ 20 ಕೋಟಿ ರೂ. ಮಂಜೂರು ಮಾಡಲಾಗಿದೆ.
3 ಲಕ್ಷ ಜನ ನಿರೀಕ್ಷೆ : ಈ ಸಮ್ಮೇಳನಕ್ಕೆ 3 ಲಕ್ಷ ಜನರು ಸೇರುವ ನಿರೀಕ್ಷೆ ಇದ್ದು, ಯಾವುದೇ ಅನನಕೂಲವಾಗದಂತೆ ಸರ್ಕಾರ ಸೂಚನೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
MUST WATCH
ಹೊಸ ಸೇರ್ಪಡೆ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
Actor Darshan Bail Case: ಹತ್ಯೆ ಸ್ಥಳದಲ್ಲಿ ದರ್ಶನ್ ಇದ್ರು: ಫೋಟೋ ಸಾಕ್ಷ್ಯ ಲಭ್ಯ!
Dharmasthala: ನ.26-30: ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.