ಮಾಲೀಕನ ಕಪ್ಪುಹಣ ಎಂದು ಕದ್ದು ಸಿಕ್ಕಿಬಿದ್ದ !

Team Udayavani, Oct 29, 2022, 3:02 PM IST

tdy-4

ಬೆಂಗಳೂರು: ಮಾಲೀಕನ 75 ಲಕ್ಷ ರೂ. ಹಾಗೂ ಕಾರಿನೊಂದಿಗೆ ಪರಾರಿಯಾಗಿದ್ದ ಚಾಲಕ ಕೊನೆಗೂ ಬ್ಯಾಟರಾಯನಪುರ ಠಾಣೆ ಪೊಲೀಸರ ಬಲೆಗೆ ಬಿದ್ದಿದ್ದಾನೆ.

ಹೊಸಕೋಟೆಯ ಸಂತೋಷ್‌ ಕುಮಾರ್‌ (28) ಬಂಧಿತ. ಈತನಿಂದ 72 ಲಕ್ಷ ರೂ. ನಗದು ಹಾಗೂ ಫೋರ್ಡ್‌ ಎಂಡೋವರ್‌ ಕಾರನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

ಈ ಹಣ ಕಪ್ಪು ಹಣವಾಗಿದ್ದು, ಇದನ್ನು ಕದ್ದರೆ ಮಾಲೀಕರು ದೂರು ನೀಡುವುದಿಲ್ಲ ಎಂದು ಭಾವಿಸಿ ಈ ಕೃತ್ಯ ಎಸಗಿದ್ದಾನೆ. ಹುಸ್ಕೂರು ನಿವಾಸಿ ಉದ್ಯಮಿ ಹರೀಶ್‌ (29) ಅವರು 8 ತಿಂಗಳ ಹಿಂದೆ ಆರೋಪಿ ಸಂತೋಷ್‌ ಕುಮಾರ್‌ನನ್ನು ತಮ್ಮ ಕಾರಿನ ಚಾಲಕನನ್ನಾಗಿ ನೇಮಿಸಿಕೊಂಡಿದ್ದರು. ಅ.19ರಂದು ರಾತ್ರಿ 9 ಗಂಟೆಗೆ ಮನೆಯಿಂದ ಮೈಸೂರು ರಸ್ತೆಯ ಕುಂಬಳಗೋಡು ಬಳಿಯಿರುವ ರೆಸಾರ್ಟ್‌ಗೆ ಕಾರಿನಲ್ಲಿ ಚಾಲಕ ಸಂತೋಷ್‌ ಜತೆಗೆ ಹೋಗಿ ಪಾರ್ಟಿ ಮಾಡಿದ್ದರು. ಕೆಲ ದಿನಗಳ ಹಿಂದೆ ಹೈದರಾಬಾದ್‌ನಲ್ಲಿ ಪ್ಲ್ರಾಟ್‌ ಮಾರಾಟ ಮಾಡಿ ಬಂದ 75 ಲಕ್ಷ ರೂ. ಅನ್ನು ಕಾರಿನಲ್ಲಿ ಇಟ್ಟಿದ್ದರು. ಈ ವಿಚಾರ ಸಂತೋಷ್‌ ಗಮನಕ್ಕೆ ಬಂದಿತ್ತು. ನಂತರ ರಾತ್ರಿ 12 ಗಂಟೆಗೆ ಪಾರ್ಟಿ ಮುಗಿಸಿ ಮನೆಗೆ ವಾಪಸ್‌ ಆಗುತ್ತಿದ್ದಾಗ ಮಾರ್ಗ ಮಧ್ಯೆ ಸೆಟಲೈಟ್‌ ಬಸ್‌ ನಿಲ್ದಾಣದ ಬಳಿ ಕಾರು ನಿಲ್ಲಿಸುವಂತೆ ಸೂಚಿಸಿ ಸಿಗರೆಟ್‌ ತೆಗೆದುಕೊಂಡು ಬರಲು ಅಂಗಡಿಗೆ ಹೋಗಿದ್ದರು. ಹರೀಶ್‌ ಸಿಗರೆಟ್‌ ತೆಗೆದುಕೊಂಡು ವಾಪಸ್‌ ಬಂದಾಗ ಕಾರು ಇರಲಿಲ್ಲ. ಚಾಲಕ ಸಂತೋಷ್‌ಗೆ ಕರೆ ಮಾಡಿದಾಗ ಆತನ ಮೊಬೈಲ್‌ ಸ್ವಿಚ್ಡ್ ಆಫ್ ಆಗಿತ್ತು. ಆಗ ಸಂತೋಷ್‌ 75 ಲಕ್ಷ ರೂ. ಹಣ ಲಪಟಾಯಿಸಿರುವುದು ಹರೀಶ್‌ ಗಮನಕ್ಕೆ ಬಂದಿತ್ತು.

ಕಪ್ಪುಹಣ ಎಂದು ಭಾವಿಸಿದ್ದ ಆರೋಪಿ: ಹರೀಶ್‌ ಕಾರಿನಲ್ಲಿ 75 ಲಕ್ಷ ರೂ. ನಗದು ಇಟ್ಟಿರುವುದನ್ನು ಗಮನಿಸಿದ್ದೆ. ಇದು ಕಪ್ಪು ಹಣ ಇರಬಹುದು ಎಂದು ಭಾವಿಸಿ ಕಳ್ಳತನ ಮಾಡಿದ್ದೆ. ಹೀಗಾಗಿ ನನ್ನ ವಿರುದ್ಧ ಪೊಲೀಸರಿಗೆ ದೂರು ಕೊಡುವುದಿಲ್ಲ ಎಂದು ಭಾವಿಸಿದ್ದೆ. ಮೊದಲೇ ಸಂಚು ರೂಪಿಸಿ ಕೃತ್ಯ ಎಸಗಿರುವುದಾಗಿ ಆರೋಪಿ ಸಂತೋಷ್‌ ವಿಚಾರಣೆ ವೇಳೆ ಪೊಲೀಸರ ಮುಂದೆ ಬಾಯ್ಬಿಟ್ಟಿದ್ದಾನೆ.

ಆರೋಪಿ ಸಿಕ್ಕಿ ಬಿದ್ದಿದ್ದು ಹೇಗೆ?: ಉದ್ಯಮಿ ಹರೀಶ್‌ ಅ.20ರಂದು ಬ್ಯಾಟರಾಯನಪುರ ಪೊಲೀಸ್‌ ಠಾಣೆಯಲ್ಲಿ ಈ ಕುರಿತು ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಾಗಿ ಎಲ್ಲೆಡೆ ಶೋಧ ನಡೆಸಿದ್ದರು. ಸಂತೋಷ್‌ ಕುಟುಂಬಸ್ಥರಿಗೆ ಬರುವ ಮೊಬೈಲ್‌ ಕರೆಗಳ ಮೇಲೆ ನಿಗಾ ಇಟ್ಟಿದ್ದರು. ಸಂತೋಷ್‌ ಬೇರೆ ನಂಬರ್‌ನಿಂದ ಕುಟುಂಬಸ್ಥರಿಗೆ ವಾಟ್ಸ್‌ಆ್ಯಪ್‌ ಕರೆ ಮಾಡಿರುವ ಬಗ್ಗೆ ಪೊಲೀಸರಿಗೆ ಸುಳಿವು ಸಿಕ್ಕಿತ್ತು. ಈ ಮಾಹಿತಿ ಆಧರಿಸಿ ತಾಂತ್ರಿಕ ಕಾರ್ಯಾಚರಣೆ ನಡೆಸಿದಾಗ ಆರೋಪಿ ಹೊಸಕೋಟೆಯಲ್ಲಿ ತಲೆಮರೆಸಿಕೊಂಡಿರುವುದು ಪತ್ತೆಯಾಗಿತ್ತು. ಕೂಡಲೇ ಆತನನ್ನು ಬಂಧಿಸಿದ್ದಾರೆ.

ಟಾಪ್ ನ್ಯೂಸ್

ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌

Firing; ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌

‌INDvsBAN; ಬಸವಳಿದ ಬಾಂಗ್ಲಾ ಎದುರು ಪಂತ್-ಗಿಲ್‌ ಸೂಪರ್‌ ಶತಕ; ಡಿಕ್ಲೇರ್ ಘೋಷಿಸಿದ ಭಾರತ

‌INDvsBAN; ಬಸವಳಿದ ಬಾಂಗ್ಲಾ ಎದುರು ಪಂತ್-ಗಿಲ್‌ ಸೂಪರ್‌ ಶತಕ; ಡಿಕ್ಲೇರ್ ಘೋಷಿಸಿದ ಭಾರತ

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Parvin Dabas: ಬಾಲಿವುಡ್ ನಟ ಪರ್ವಿನ್ ದಾಬಾಸ್ ಕಾರು ಅಪಘಾತ… ಐಸಿಯುನಲ್ಲಿ ಚಿಕಿತ್ಸೆ

Parvin Dabas: ಬಾಲಿವುಡ್ ನಟ ಪರ್ವಿನ್ ದಾಬಾಸ್ ಕಾರು ಅಪಘಾತ… ಐಸಿಯುನಲ್ಲಿ ಚಿಕಿತ್ಸೆ

Upendra: ‘ಭಗವಂತನೇ ಈ ಸಿನಿಮಾ ಮಾಡ್ಸಿದಾನೆ..’: ‘ಉಪೇಂದ್ರ’ ನೋಡಿ ಉಪೇಂದ್ರ ಭಾವುಕ

Upendra: ‘ಭಗವಂತನೇ ಈ ಸಿನಿಮಾ ಮಾಡ್ಸಿದಾನೆ..’: ‘ಉಪೇಂದ್ರ’ ನೋಡಿ ಉಪೇಂದ್ರ ಭಾವುಕ

Artificial Intelligence: ಕೃತಕ ಬುದ್ಧಿಮತ್ತೆ ಕ್ರಾಂತಿ- ಹೊಸ ಸಂಗಾತಿ ಹೊಸ ಅವಕಾಶ!

Artificial Intelligence: ಕೃತಕ ಬುದ್ಧಿಮತ್ತೆ ಕ್ರಾಂತಿ- ಹೊಸ ಸಂಗಾತಿ ಹೊಸ ಅವಕಾಶ!

Mangaluru: ಶೋಷಣೆ ಎಲ್ಲ ರಂಗದಲ್ಲೂ ಇದೆ: ಡಾ| ಗುರುಕಿರಣ್‌

Mangaluru: ಶೋಷಣೆ ಎಲ್ಲ ರಂಗದಲ್ಲೂ ಇದೆ: ಡಾ| ಗುರುಕಿರಣ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

parappana agrahara prison

Bengaluru: ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್‌ ಫೋನ್‌ ಅಂಗಡಿ!

Alert Cop Averts Mishap After Bmtc Bus Driver  got chest pain

Bengaluru; ಬಸ್‌ ಡ್ರೈವರ್‌ಗೆ ಎದೆನೋವು: ಬ್ರೇಕ್‌ ಹಾಕಿ ಅಪಾಯ ತಪಿಸಿದ ಎಎಸ್‌ಐ

16-flipkart

Flipkart Big Billion Day ಸೆ. 27 ರಿಂದ ಆರಂಭ

13-bng

Bengaluru: ನಮ್ಮ ಕ್ಲಿನಿಕ್‌ಗೆ ಸೀಮಿತವಾದ ತಾಯಿ-ಮಗು ಆಸ್ಪತ್ರೆ

10-bng

Bengaluru:ಟಿವಿ ರಿಪೇರಿಗೆ ಸ್ಪಂದಿಸದ ಎಲೆಕ್ಟ್ರಾನಿಕ್‌ಸರ್ವೀಸ್‌ ಸೆಂಟರ್‌ಗೆ 12 ಸಾವಿರ ದಂಡ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌

Firing; ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌

‌INDvsBAN; ಬಸವಳಿದ ಬಾಂಗ್ಲಾ ಎದುರು ಪಂತ್-ಗಿಲ್‌ ಸೂಪರ್‌ ಶತಕ; ಡಿಕ್ಲೇರ್ ಘೋಷಿಸಿದ ಭಾರತ

‌INDvsBAN; ಬಸವಳಿದ ಬಾಂಗ್ಲಾ ಎದುರು ಪಂತ್-ಗಿಲ್‌ ಸೂಪರ್‌ ಶತಕ; ಡಿಕ್ಲೇರ್ ಘೋಷಿಸಿದ ಭಾರತ

Mahalingapura: ಗಮನ ಸೆಳೆದ ಮಹಾಲಿಂಗೇಶ್ವರ ಜಾತ್ರೆಯ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿ…

Mahalingapura: ಗಮನ ಸೆಳೆದ ಮಹಾಲಿಂಗೇಶ್ವರ ಜಾತ್ರೆಯ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿ…

Desi Swara: ಮೊಂತಿ ಆಚರಣೆ- ವರ್ಷದ ಮೊದಲ ಸುಗ್ಗಿ ಸಂಭ್ರಮ

Desi Swara: ಮೊಂತಿ ಆಚರಣೆ- ವರ್ಷದ ಮೊದಲ ಸುಗ್ಗಿ ಸಂಭ್ರಮ

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.