ಛತ್ ಪೂಜೆ ವೇಳೆ ಬೆಂಕಿ ಅವಘಡ : 25ಕ್ಕೂ ಹೆಚ್ಚು ಮಂದಿಗೆ ಗಾಯ, ಹಲವರ ಸ್ಥಿತಿ ಗಂಭೀರ
Team Udayavani, Oct 29, 2022, 3:29 PM IST
ಔರಂಗಾಬಾದ್ : ಮನೆಯೊಂದರಲ್ಲಿ ಭಾರೀ ಬೆಂಕಿ ಅವಘಡ ಸಂಭವಿಸಿ 25ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಬಿಹಾರದ ಔರಂಗಾಬಾದ್ ಜಿಲ್ಲೆಯಲ್ಲಿ ಶನಿವಾರ ಮುಂಜಾನೆ ಸಂಭವಿಸಿದೆ.
ಮನೆಯ ಮಾಲೀಕ ಅನಿಲ್ ಗೋಸ್ವಾಮಿ ಅವರ ಕುಟುಂಬವು 2.30 ರ ಸುಮಾರಿಗೆ ಛತ್ ಪೂಜೆಗಾಗಿ ಅಡುಗೆ ಮಾಡುತ್ತಿದ್ದಾಗ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಈ ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ.
ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿದೆ ಘಟನೆ ನಡೆದ ಕೂಡಲೇ ಅಗ್ನಿಶಾಮಕ ಸಿಬ್ಬಂದಿಗೆ ಕರೆ ಮಾಡಲಾಗಿದೆ ವಿಷಯ ತಿಳಿದ ಕೂಡಲೇ ಕಾರ್ಯಪ್ರವೃತ್ತರಾದ ಅಗ್ನಿಶಾಮ ಸಿಬ್ಬಂದಿಗಳು ಹಾಗೂ ಪೊಲೀಸರು ಘಟನಾ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ ಈ ವೇಳೆ ಅಲ್ಲಿದ್ದ ಅಡುಗೆ ಸಿಲಿಂಡರ್ ಗೆ ಬೆಂಕಿ ಹೊತ್ತಿಕೊಂಡು ಸಿಲಿಂಡರ್ ಸ್ಫೋಟಗೊಂಡಿದೆ ಪರಿಣಾಮ ಪೊಲೀಸ್ ಸಿಬ್ಬಂದಿಗಳು ಸೇರಿದಂತೆ ಮನೆಯಲ್ಲಿದ್ದ ಹಲವು ಮಂದಿಗೆ ಗಂಭೀರ ಗಾಯಗಳಾಗಿವೆ ಕೂಡಲೇ ಗಾಯಗೊಂಡವರನ್ನು ಔರಂಗಾಬಾದ್ ನಲ್ಲಿರುವ ಬೇರೆ ಬೇರೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಕಿಯ ತೀವ್ರತೆ ಹೆಚ್ಚಾದ ಪರಿಣಾಮ ಬೆಂಕಿ ನಂದಿಸಲು ಸಿಬ್ಬಂದಿಗಳು ಹರಸಾಹಸ ಪಡಬೇಕಾಯಿತು, ಸಿಲಿಂಡರ್ ಸ್ಪೋಟಗೊಂಡ ಪರಿಣಾಮ ಗಾಯಾಳುಗಳ ಸಂಖ್ಯೆ ಹೆಚ್ಚಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.
ಇದನ್ನೂ ಓದಿ : ಮತ್ತೆ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಅವಘಡ: ಗೂಳಿಗೆ ಢಿಕ್ಕಿ ಹೊಡೆದು ರೈಲಿನ ಮುಂಭಾಗ ಜಖಂ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
Hydarabad: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಏನೇನಿದೆ ಮಾರ್ಗಸೂಚಿಯಲ್ಲಿ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ
MUST WATCH
ಹೊಸ ಸೇರ್ಪಡೆ
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
Hydarabad: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಏನೇನಿದೆ ಮಾರ್ಗಸೂಚಿಯಲ್ಲಿ
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.