ಡಾ.ರಾಜ್ ಹಾಡಿಗೆ ಹೆಜ್ಜೆ ಹಾಕಿದ ತಹಶೀಲ್ದಾರ್
Team Udayavani, Oct 29, 2022, 3:36 PM IST
ಕನಕಪುರ: ಕನ್ನಡ ರಾಜ್ಯೋತ್ಸವದ ಅಂಗ ವಾಗಿ ನಡೆದ ಕೋಟಿ ಕಂಠಗಾಯನ ಕಾರ್ಯಕ್ರಮದಲ್ಲಿ ಸಾವಿರಾರು ಶಾಲಾ- ಕಾಲೇಜು ವಿದ್ಯಾರ್ಥಿಗಳು, ತಾಲೂಕು ಮಟ್ಟದ ಅಧಿಕಾರಿಗಳು ಸಂಘ-ಸಂಸ್ಥೆಯ ಮುಖಂಡರು ಕಲಾವಿದರ ಹಾಡಿಗೆ ರಾಗ ಬದ್ಧವಾಗಿ ಧ್ವನಿಗೂಡಿಸಿದರು.
ರಾಜ್ಯೋತ್ಸವದ ಅಂಗವಾಗಿ ತಾಲೂಕು ಕ್ರೀಡಾಂಗಣದಲ್ಲಿ ಕೋಟಿ ಕಂಠ ಗಾಯನ ಕಾರ್ಯಕ್ರಮ ಆಯೋ ಜಿಸಲಾಗಿತ್ತು. ಎಲ್ಲಾ ಪ್ರೌಢಶಾಲೆ ಮತ್ತು ಜೂನಿಯರ್ ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ 3, 000ಕ್ಕೂ ಹೆಚ್ಚು ವಿದ್ಯಾರ್ಥಿ ಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ದ್ದರು. ಕಾರ್ಯಕ್ರಮದಲ್ಲಿ ನಾಡಗೀತೆ, ಹಚ್ಚೇವು ಕನ್ನಡದ ದೀಪ, ಬಾರಿಸು ಕನ್ನಡ ಡಿಂಡಿಮವ. ವಿಶ್ವ ವಿನೂತನ ವಿದ್ಯಾ ಚೇತನ, ಹುಟ್ಟಿದರೆ ಕನ್ನಡ ನಾಡಿನಲ್ಲಿ ಹುಟ್ಟಬೇಕು ಗೀತೆಗಳನ್ನು ಕಲಾವಿದರ ತಂಡ ಪ್ರಸ್ತುತಪಡಿಸಿದರು. ಕಾರ್ಯಕ್ರಮ ದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು, ಅಧಿಕಾರಿಗಳು, ಸಂಘ-ಸಂಸ್ಥೆ ಮುಖಂ ಡರು ಏಕಕಾಲದಲ್ಲಿ ಕಲಾವಿದರ ತಂಡಕ್ಕೆ ಧ್ವನಿಗೂಡಿಸಿ ಹಾಡಿದರು.
ಡಾ. ರಾಜ್ ಹಾಡಿಗೆ ಹೆಜ್ಜೆ ಹಾಕಿದ ತಹಶೀಲ್ದಾರ್: ಕೊನೆಯದಾಗಿ ಪ್ರಸ್ತುತ ಪಡಿಸಿದ ಡಾ.ರಾಜ್ ನಟನೆಯ ಹುಟ್ಟಿದರೆ ಕನ್ನಡ ನಾಡಿನಲ್ಲಿ ಹುಟ್ಟಬೇಕು ಗೀತೆ ಪ್ರಾರಂಭವಾಗುತ್ತಿದ್ದಂತೆ. ಸಂಘ- ಸಂಸ್ಥೆಯ ಮುಖಂಡರು ಹಾಡಿಗೆ ಹೆಜ್ಜೆ ಹಾಕುತ್ತಿದ್ದರು. ಕನ್ನಡ ಭಾಷಾಭಿಮಾನ ತುಂಬಿ ಬಂದ ತಾಲೂಕು ದಂಡಾಧಿಕಾರಿ ವಿಶ್ವನಾಥ್ ಸಂಘ-ಸಂಸ್ಥೆ ಮುಖಂಡ ರೊಂದಿಗೆ ಹೆಜ್ಜೆ ಹಾಕಿದರು. ಈ ವಿಡಿಯೋ ಸಹ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Fraud: “ವಿಡಿಯೋಗೆ ಲೈಕ್ ನೀಡಿ’ 13.97 ಲಕ್ಷ ಕಳೆದುಕೊಂಡರು!
C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!
By Election: ದೇವೇಗೌಡರನ್ನು 1994ರಲ್ಲಿ ಮುಖ್ಯಮಂತ್ರಿ ಮಾಡಿದ್ದೇ ನಾನು: ಸಿಎಂ ಸಿದ್ದರಾಮಯ್ಯ
Ramanagara: ಆರು ಟ್ರಾನ್ಸ್ ಫಾರ್ಮರ್ ಗಳ ಕಳವು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.