ಅರಮನೆ ಮುಂದೆ ಮೊಳಗಿದ ಕೋಟಿ ಕಂಠ ಗಾಯನ
Team Udayavani, Oct 29, 2022, 4:58 PM IST
ಮೈಸೂರು: ಕನ್ನಡ ರಾಜ್ಯೋತ್ಸವ ನಿಮಿತ್ತ ಇಲ್ಲಿನ ಅರಮನೆ ಆವರಣದಲ್ಲಿ ಶುಕ್ರವಾರ ಕೋಟಿ ಕಂಠ ಗಾಯನ ಕಾರ್ಯಕ್ರಮ ನಡೆಯಿತು.
ಕೋಟಿ ಕಂಠ ಗಾಯನ ಕಾರ್ಯಕ್ರಮದಲ್ಲಿ ನಾಡಗೀತೆ ಜೊತೆಗೆ ಉದಯವಾಗಲಿ ನಮ್ಮ ಚೆಲುವ ನಾಡು, ಕನ್ನಡ ಡಿಂಡಿಮ, ಹಚ್ಚೆವು ಕನ್ನಡದ ದೀಪ, ವಿಶ್ವ ವಿನೂತನ, ಹುಟ್ಟಿದರೆ ಕನ್ನಡ ನಾಡಿನಲ್ಲಿ ಹುಟ್ಟಬೇಕು ಹಾಡುಗಳನ್ನು ಹಾಡಲಾಯಿತು. ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಶಾಸಕರು, ಸಂಸ ದರು, ಜನಪ್ರತಿನಿಧಿಗಳು, ಅಧಿಕಾರಿಗಳು, ನಗರದ ನಾನಾ ಭಾಗಗಳಿಂದ ಆಗಮಿಸಿದ್ದ ನಾನಾ ಕನ್ನಡ ಸಂಘಟನೆಗಳ ಕಾರ್ಯಕರ್ತರು, ಶಾಲಾ, ಕಾಲೇಜು ಗಳ ವಿದ್ಯಾರ್ಥಿಗಳು, ಸಹಸ್ರಾರು ಸಂಖ್ಯೆಯಲ್ಲಿದ್ದ ಸಾರ್ವಜನಿಕರು ಕೋಟಿ ಕಂಠ ಗಾಯನಕ್ಕೆ ದನಿಗೂಡಿಸಿದರು.
ಕಾರ್ಯಕ್ರಮದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಸಚಿವ ಸೋಮಶೇಖರ್ ಅವರು, ಕೋಟಿ ಕಂಠ ಗಾಯನ ಕಾರ್ಯಕ್ರಮಕ್ಕೆ ಸಾರ್ವ ಜನಿಕರಿಂದ ಅಭೂತಪೂರ್ವ ಸ್ಪಂದನೆ ವ್ಯಕ್ತವಾಗಿದೆ. ಕಾರ್ಯಕ್ರಮಕ್ಕೆ ಸಾಕಷ್ಟು ಸಂಖ್ಯೆಯಲ್ಲಿ ನೋಂದಣಿ ಮಾಡಿಕೊಂಡಿದ್ದರು. ವಿದ್ಯಾರ್ಥಿಗಳು, ಜನಪ್ರತಿ ನಿಧಿಗಳು, ಕನ್ನಡ ಸಂಘಟನೆಗಳ ಸದಸ್ಯರು ಗಾಯನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿದೆ ಎಂದು ಹೇಳಿದರು.
ಸಂಸದ ಪ್ರತಾಪ ಸಿಂಹ, ಮೇಯರ್ ಶಿವಕುಮಾರ್, ಜಿಲ್ಲಾಧಿಕಾರಿ ಡಾ. ಕೆ.ವಿ.ರಾಜೇಂದ್ರ, ಜಿಪಂ ಸಿಇಒ ಪೂರ್ಣಿಮಾ, ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಜಿ. ಹೇಮಂತ್ ಕುಮಾರ್, ನಾನಾ ನಿಗಮ- ಮಂಡಳಿಗಳ ಅಧ್ಯಕ್ಷರು, ಮುಖಂಡರು, ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ
MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?
Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Mysuru: ಜೆಡಿಎಸ್ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Congress: ದ.ಕ ಗ್ರಾಮ ಪಂಚಾಯತ್; 24ರಲ್ಲಿ 19 ಸ್ಥಾನ ಕಾಂಗ್ರೆಸ್ ಬೆಂಬಲಿತರಿಗೆ ಗೆಲುವು
Siddapura: ಬುಲೆಟ್ ಬೈಕಿಗೆ ಜೆಸಿಬಿ ಡಿಕ್ಕಿ; ಸವಾರರಿಗೆ ಗಾಯ
Moodabidri: ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಪಿ.ನೇಮಿರಾಜ ಹೆಗ್ಡೆ ನಿಧನ
Amparu: ಬೈಕ್ ಸ್ಕಿಡ್; ಸವಾರ ಚಿಕಿತ್ಸೆಗೆ ಸ್ಪಂದಿಸದೆ ಸಾವು
KAUP: ಧರ್ಮಗ್ರಂಥಗಳಷ್ಟೇ ಸಂವಿಧಾನವೂ ಪವಿತ್ರ: ನಿಕೇತ್ ರಾಜ್ ಮೌರ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.