ಪುತ್ತೂರು: ಸಾಮಾಜಿಕ ಜಾಲತಾಣದಲ್ಲಿ ಮಾನಹಾನಿಕಾರಕ ಸಂದೇಶ, ವ್ಯಕ್ತಿ ಪೊಲೀಸ್ ವಶಕ್ಕೆ
Team Udayavani, Oct 29, 2022, 7:28 PM IST
ಪುತ್ತೂರು : ಕೆಪಿಸಿಸಿ ಮಹಿಳಾ ಪ್ರಧಾನ ಕಾರ್ಯದರ್ಶಿ ವೀಣಾ ಪಿ. ಭಟ್ ಅವರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮಾನಹಾನಿಕಾರಕ ಸಂದೇಶ ರವಾನಿಸಿದ ವ್ಯಕ್ತಿಯನ್ನು ಪೊಲಿಸರು ವಶಕ್ಕೆ ಪಡೆದಿದ್ದಾರೆ.
ಫೇಸ್ಬುಕ್ನಲ್ಲಿ ಮಾನಹಾನಿಕರ ಪೋಸ್ಟ್ ಹಾಕಿದ ವ್ಯಕ್ತಿಯ ಕುರಿತು ವೀಣಾ ಪಿ. ಭಟ್ ಅವರು ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಭಾಸ್ಕರ ಮಣಿಯಾಣಿ ಎಂಬಾತ ವೀಣಾ ಭಟ್ ಅವರ ಬಗ್ಗೆ ಆಕ್ಷೇಪಾರ್ಹ ಅಶ್ಲೀಲ ಮತ್ತು ಮಾನಹಾನಿಕರ ಕಾಮೆಂಟ್ ಅನ್ನು ಫೇಸ್ಬುಕ್ನಲ್ಲಿ ಹಾಕಿದ್ದ. ಈ ಬಗ್ಗೆ ಪೊಲಿಸರಿಗೆ ದೂರು ನೀಡಿದ್ದು, ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ಎಚ್ಚರಿಕೆ ನೀಡಿ ಫೇಸ್ಬುಕ್ನಲ್ಲಿ ಹಾಕಿರುವ ಕಾಮೆಂಟ್ ಅನ್ನು ಅಳಿಸಿ ಹಾಕಿಸಿದ್ದಾರೆ.
ಬಳಿಕ ಆರೋಪಿಯನ್ನು ದೂರುದಾರರ ಸಮಕ್ಷಮ ವಿಚಾರಣೆ ನಡೆಸಿದಾಗ ಆರೋಪಿ ತಪ್ಪೊಪ್ಪಿಕೊಂಡಿದ್ದು, ಕ್ಷಮೆ ಕೇಳಿದ ಬಳಿಕ ಪ್ರಕರಣವನ್ನು ಇತ್ಯರ್ಥಪಡಿಸಲಾಗಿದೆ.
ಇದನ್ನೂ ಓದಿ : ತುಂಗಭದ್ರಾ ಎಡದಂಡೆ ಕಾಲುವೆಯ ಕೆರೆ ಕಟ್ಟೆ ಗೆ ಕಾರು ಢಿಕ್ಕಿ: ಅಭದ್ರತೆಯಲ್ಲಿ ಮಿನಿಡ್ಯಾಂ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್ ಟೂರಿಸಂ ಹಬ್ಬ!
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.