ಎಸ್ಸೆಸ್ಸೆಲ್ಸಿ: ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ
Team Udayavani, Oct 29, 2022, 8:28 PM IST
ಬೆಂಗಳೂರು: ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು 2023ನೇ ಸಾಲಿನ ಎಸ್ಎಸ್ಎಲ್ಸಿ ಮುಖ್ಯ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಿದ್ದು, ಏ.1ರಿಂದ 15ರ ವರೆಗೆ ಪರೀಕ್ಷೆ ನಡೆಸಲು ತೀರ್ಮಾನಿಸಿದೆ.
ಎಲ್ಲ ಪರೀಕ್ಷೆಗಳು ಬೆಳಗ್ಗೆ 10.30ರಿಂದ ಮಧ್ಯಾಹ್ನ 1.45ರ ವರೆಗೆ ನಡೆಯಲಿವೆ. ಹಿಂದೂಸ್ಥಾನಿ ಮತ್ತು ಕರ್ನಾಟಕ ಸಂಗೀತದ ತಾತ್ವಿಕ ಪರೀಕ್ಷೆಗಳು ಮಧ್ಯಾಹ್ನ 2ರಿಂದ 3.45ರ ವರೆಗೆ ಮತ್ತು ಪ್ರಾಯೋಗಿಕ ಪರೀಕ್ಷೆಗಳು ಮಧ್ಯಾಹ್ನ 3.45ರಿಂದ ಸಂಜೆ 5.15ರ ವರೆಗೆ ನಡೆಯಲಿವೆ.
ಈ ವೇಳಾಪಟ್ಟಿಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು/ಪೋಷಕರು ಆಕ್ಷೇಪಣೆ ಸಲ್ಲಿಸಲು ನ.28ರ ವರೆಗೆ ಅವಕಾಶ ನೀಡಿದೆ. ಆಕ್ಷೇಪಣೆಗಳನ್ನು ಇ- ಮೇಲ್ [email protected] ಅಥವಾ [email protected] ಅಥವಾ ನಿರ್ದೇಶಕರು (ಪರೀಕ್ಷೆಗಳು), ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ, 6ನೇ ಅಡ್ಡ ರಸ್ತೆ, ಮಲ್ಲೇಶ್ವರ, ಬೆಂಗಳೂರು- 560 003 ವಿಳಾಸಕ್ಕೆ ಅಂಚೆ ಮೂಲಕ ಸಲ್ಲಿಸಬಹುದು.
ವೇಳಾಪಟ್ಟಿ: ಏ.1-ಪ್ರಥಮ ಭಾಷೆ ಕನ್ನಡ, ಏ.4- ಗಣಿತ, ಸಮಾಜಶಾಸ್ತ್ರ, ಏ.6-ದ್ವಿತೀಯ ಭಾಷೆ ಇಂಗ್ಲಿಷ್, ಏ.8- ಎಲಿಮೆಂಟ್ಸ್ ಆಫ್ ಎಲೆಕ್ಟ್ರಿಕಲ್ ಎಂಜಿನಿಯರಿಂಗ್-4, ಮೆಕಾನಿಕಲ್ ಆ್ಯಂಡ್ ಎಲೆಕ್ಟ್ರಿಕಲ್ ಎಂಜಿನಿಯರಿಂಗ್-2, ಮೆಕಾನಿಕಲ್ ಎಂಜಿನಿಯರಿಂಗ್-4, ಎಂಜಿನಿಯರಿಂಗ್ ಗ್ರಾಫಿಕ್ಸ್-2, ಕಂಪ್ಯೂಟರ್ ಸೈನ್ಸ್, ಅರ್ಥಶಾಸ್ತ್ರ, ಏ.10- ವಿಜ್ಞಾನ, ರಾಜ್ಯಶಾಸ್ತ್ರ, ಹಿಂದೂಸ್ಥಾನಿ ಸಂಗೀತ, ಕರ್ನಾಟಕ ಸಂಗೀತ, ಏ.12- ತೃತೀಯ ಭಾಷೆ ಹಿಂದಿ, ಎನ್ಎಸ್ಕ್ಯುಎಫ್ ವಿಷಯಗಳು, ಏ.15- ಸಮಾಜ ವಿಜ್ಞಾನ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ
Karnataka Govt,.: ಸಂಪುಟ ಹುತ್ತಕ್ಕೆ ಈಗಲೇ ಕೈಹಾಕಲು ಸಿಎಂ ನಿರಾಸಕ್ತಿ?
Karnataka Govt.,: ದಿಲ್ಲಿಯಲ್ಲಿ ಸಂಪುಟ ರಹಸ್ಯ; ಹೈಕಮಾಂಡ್ ಭೇಟಿ ಸಾಧ್ಯತೆ
DA Hike: ಸರಕಾರಿ ನೌಕರರಿಗೆ ಶೇ. 2 ತುಟ್ಟಿ ಭತ್ಯೆ ಹೆಚ್ಚಳ… ಸಿಎಂಗೆ ಅಭಿನಂದನೆ
DK Shivakumar: ಮಹದಾಯಿ, ಮೇಕೆದಾಟು ಯೋಜನೆ ಅನುಮತಿಗೆ ದಿಲ್ಲಿಯಲ್ಲಿ ಡಿಕೆಶಿ ಲಾಬಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ICC ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ
Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ
ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ
Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್ ಅಮಾನತು
Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.