ಕೋಲಾರದಿಂದ ಸಿದ್ದು ಸ್ಪರ್ಧಿಸುವ ವಿಚಾರ ಗೊತ್ತಿಲ್ಲ : ಸಚಿವ ಕೆ.ಎಚ್.ಮುನಿಯಪ್ಪ
Team Udayavani, Oct 29, 2022, 9:20 PM IST
ಕೋಲಾರ: ಸಿದ್ದರಾಮಯ್ಯ ಅವರು ಕೋಲಾರ ವಿಧಾನ ಸಭಾಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುವ ವಿಚಾರ ತಮಗೇನು ಗೊತ್ತಿಲ್ಲ. ಪಕ್ಷವು ಈ ಕುರಿತು ತಮ್ಮೊಂದಿಗೆ ಚರ್ಚೆ ನಡೆಸಿಲ್ಲ ಎಂದು ಕೇಂದ್ರ ಮಾಜಿ ಸಚಿವ ಕೆ.ಎಚ್.ಮುನಿಯಪ್ಪ ಸ್ಪಷ್ಟಪಡಿಸಿದರು.
ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಿದ್ದರಾಮಯ್ಯ ಕೋಲಾರಕ್ಕೆ ಬರುವ ಪ್ರಶ್ನೆಗೆ ಪ್ರತಿಕ್ರಿಯಿಸಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೋಲಾರ ಕ್ಷೇತ್ರದಲ್ಲಿ ಸ್ಪರ್ಧಿಸಿದರೆ ಸ್ವಾಗತಿಸುತ್ತೇನೆ. ನಾವೇ ಮುಂದೆ ನಿಂತು ಅವರ ಪರ ಪ್ರಚಾರ ಮಾಡುತ್ತೇವೆ. ಅವರು ರಾಜ್ಯದ 36 ಮೀಸಲು ಕ್ಷೇತ್ರ ಹೊರತುಪಡಿಸಿ, ಯಾವುದೇ ಕ್ಷೇತ್ರದಲ್ಲಿ ಸ್ಪರ್ಧಿಸಲು ಸ್ಪತಂತ್ರರು. ಮುಂದಿನ ಚುನಾವಣೆಯಲ್ಲಿ ಪಕ್ಷ ಅಧಿಕಾರಕ್ಕೆ ಬರಬೇಕು. ಆ ನಿಟ್ಟಿನಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡುತ್ತೇವೆ ಎಂದರು.
ಅಸಮಾಧಾನವಾಗಿತ್ತು, ಎಲ್ಲವನ್ನೂ ಮರೆತಿದ್ದೇನೆ:
ಪಕ್ಷದಲ್ಲಿನ ಕೆಲವು ನಾಯಕರ ಧೋರಣೆಯಿಂದಾಗಿ ನನಗೆ ಅಸಮಾಧಾನ ಆಗಿದ್ದು ನಿಜ. ರಾಹುಲ್ ಗಾಂಧಿ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಮಾತುಕತೆ ನಡೆಸಿ, ಎಲ್ಲ ಗೊಂದಲಗಳನ್ನೂ ಬಗೆಹರಿಸಿದ್ದಾರೆ. ನೀವು ಹೈಕಮಾಂಡ್‌ಗೆ ಹತ್ತಿರವಾಗಿರುವವರು. ಸಣ್ಣಪುಟ್ಟ ಸಮಸ್ಯೆಗಳಿಗೆ ಮುನಿಸಿಕೊಳ್ಳಬೇಡಿ ಎಂದು ಕಿವಿಮಾತು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಪಕ್ಷದ ಹಿತದೃಷ್ಟಿಯಿಂದ ಪಕ್ಷವನ್ನು ಬಲಪಡಿಸುವ ಉದ್ದೇಶದಿಂದ ಹಿಂದಿನದೆಲ್ಲವನ್ನೂ ಮರೆತಿದ್ದೇನೆಂದು ತಿಳಿಸಿದರು.
ಇದನ್ನೂ ಓದಿ : ಮೀಸಲಾತಿ ವಿಚಾರಕ್ಕೆ ಹೋರಾಟದ ಅಗತ್ಯವಿಲ್ಲ : ಸಚಿವ ಕೆ.ಸಿ.ನಾರಾಯಣಗೌಡ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
ಕಸ್ತೂರಿಂಗನ್ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.