ಕೈಬಿಟ್ಟಿದ್ದ ಪಠ್ಯ ಮರು ಸೇರ್ಪಡೆ : ಶಿಕ್ಷಣ ಇಲಾಖೆಯಿಂದ ನಿರ್ಧಾರ
Team Udayavani, Oct 30, 2022, 6:35 AM IST
ಬೆಂಗಳೂರು : ಪಠ್ಯಪುಸ್ತಕ ಪರಿಷ್ಕರಣೆ ವೇಳೆ ದೇವನೂರು ಮಹಾದೇವ, ಜಿ.ರಾಮಕೃಷ್ಣ ಸಹಿತ 7 ಲೇಖಕರ ಪಠ್ಯಗಳನ್ನು ಕೈಬಿಟ್ಟಿದ್ದ ಶಿಕ್ಷಣ ಇಲಾಖೆ, ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಪ್ರಸಕ್ತ ಸಾಲಿಗೆ (2022-23) ಮಾತ್ರ ಅನ್ವಯವಾಗುವಂತೆ ಬೋಧಿಸಲು ನಿರ್ಧರಿಸಿದೆ.
2022-23ನೇ ಸಾಲಿಗೆ 1ರಿಂದ 10ನೇ ತರಗತಿಯ ಕನ್ನಡ ಭಾಷಾ ಪಠ್ಯಪುಸ್ತಕಗಳನ್ನು ಪರಿಷ್ಕರಿಸಲಾಗಿತ್ತು. ಈ ಸಂಬಂಧ 7 ಲೇಖಕರು/ಕವಿಗಳು ತಮ್ಮ ಪಾಠ/ಪದ್ಯಗಳಿಗೆ ನೀಡಿದ್ದ ಅನುಮತಿಯನ್ನು ಹಿಂಪಡೆದ ಕಾರಣ ಅವುಗಳನ್ನು ಬೋಧನೆ-ಕಲಿಕೆ ಮತ್ತು ಮೌಲ್ಯಮಾಪನಕ್ಕೆ ಪರಿಗಣಿಸ ದಂತೆ ಸೂಚಿಸಲಾಗಿತ್ತು.
ಬಳಿಕ ಈ ಲೇಖಕರ ಗದ್ಯ/ಪದ್ಯಗಳ ಪಠ್ಯ ವಿಷಯಗಳನ್ನು ಮುಂದು ವರಿಸುವಂತೆ ಸಾರ್ವಜನಿಕರು, ಪೋಷಕರು ಮತ್ತು ಕೆಲವು ಗಣ್ಯರು ಆಗ್ರಹಿಸಿದ್ದರು. ಅಲ್ಲದೆ, ವಿದ್ಯಾರ್ಥಿಗಳು ಈಗಾಗಲೇ ಈ ಪಠ್ಯ ವಿಷಯ ಗಳನ್ನು ಕಲಿತಿರುವುದರಿಂದ ಶೈಕ್ಷಣಿಕ ವರ್ಷದ ಮಧ್ಯದಲ್ಲಿ ಪಠ್ಯ ಕೈಬಿಡುವುದು ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಸರಿಯಾದ ಕ್ರಮವಾಗಿರುವುದಿಲ್ಲ. ಈ ಹಿನ್ನೆಲೆಯಲ್ಲಿ ಶೈಕ್ಷಣಿಕ ವರ್ಷಕ್ಕೆ ಮಾತ್ರ ಈ ಪಠ್ಯ ವಿಷಯಗಳನ್ನು ಮುಂದುವರಿಸಲು ತಿಳಿಸಿದ್ದಾರೆ. ಹೀಗಾಗಿ, ಸೆ.23ರಂದು ಹೊರಡಿಸಿದ್ದ ಸುತ್ತೋಲೆಯನ್ನು ಹಿಂಪಡೆಯಲಾಗಿದೆ ಎಂದು ತಿಳಿಸಿದೆ.
ಪ್ರಸಕ್ತ ಸಾಲಿಗೆ ಮಾತ್ರ ಅನ್ವಯವಾಗುವಂತೆ ಬೋಧನೆ-ಕಲಿಕೆ ಮತ್ತು ಮೌಲ್ಯಮಾಪನಕ್ಕೆ ಪರಿಗಣಿಸುವಂತೆ ರಾಜ್ಯದ ಎಲ್ಲ ಶಾಲೆಗಳಿಗೆ ಕರ್ನಾಟಕ ಪಠ್ಯಪುಸ್ತಕ ಸಂಘದ ವ್ಯವಸ್ಥಾಪಕ ನಿರ್ದೇಶಕರು ಸೂಚಿಸಿದ್ದಾರೆ.
ಸೇರ್ಪಡೆಗೊಂಡ ಪಠ್ಯಗಳು: 10ನೇ ತರಗತಿ- ಎದೆಗೆ ಬಿದ್ದ ಅಕ್ಷರ, (ದೇವನೂರು ಮಹಾದೇವ), ಭಗತ್ ಸಿಂಗ್- (ಡಾ| ಜಿ.ರಾಮಕೃಷ್ಣ), ಹಿಗೊಂದು ಟಾಪ್ ಪ್ರಯಾಣ (ಈರಪ್ಪ ಎಂ.ಕಂಬಳಿ), ಕಟ್ಟತೇವ ನಾವು (ಸತೀಶ್ ಕುಲಕರ್ಣಿ), ಏಣಿ (ಸುಕನ್ಯಾ ಮಾರುತಿ), 9ನೇ ತರಗತಿ- ಅಮ್ಮನಾಗುವುದೆಂದರೆ (ರೂಪಾ ಹಾಸನ), 6ನೇ ತರಗತಿ- ಡಾ| ರಾಜ್‌ಕುಮಾರ್ (ದೊಡ್ಡ ಹುಲ್ಲೂರು ರುಕ್ಕೋಜಿ ರಾವ್).
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?
Year Ender: Horror movies-2024 ರ ಟಾಪ್ 5 ಹಾರರ್ ಚಲನಚಿತ್ರಗಳು
Udupi: ಗೀತೋತ್ಸವದಲ್ಲಿ ಹಾಸ್ಯೋತ್ಸವ; ನಕ್ಕು ನಲಿದ ಜನಸ್ತೋಮ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.