ಬಾಡಿಗೆ ಬೈಕ್‌ ಅಡ್ಡಾದಿಡ್ಡಿ ನಿಲುಗಡೆಗೆ ಆಕ್ಷೇಪ

ಸಾರಿಗೆ-ಪೊಲೀಸ್‌ ಇಲಾಖೆ ಜಂಟಿ ಕಾರ್ಯಾಚರಣೆ ನಡೆಸಿ ಅಗತ್ಯ ಕ್ರಮ ವಹಿಸಲಿ: ದಿನಕರ ಶೆಟ್ಟಿ

Team Udayavani, Oct 30, 2022, 7:51 PM IST

14

ಕುಮಟಾ: ಪಟ್ಟಣದ ತಾ.ಪಂ ಸಭಾಭವನದಲ್ಲಿ ಶಾಸಕ ದಿನಕರ ಶೆಟ್ಟಿ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ ನಡೆಯಿತು.

ಗೋಕರ್ಣ ಮುಖ್ಯ ರಸ್ತೆಯಲ್ಲಿ ಬಾಡಿಗೆ ಬೈಕ್‌ ಗಳನ್ನು ಎಲ್ಲೆಂದರಲ್ಲಿ ನಿಲ್ಲಿಸಲಾಗುತ್ತಿದ್ದು ಇದರಿಂದ ಸಾರ್ವಜನಿಕರಿಗೆ ಹಾಗೂ ಇತರ ವಾಹನ ಸವಾರರಿಗೆ ತೀವ್ರ ತೊಂದರೆಯಾಗುತ್ತಿರುವ ಕುರಿತು ದೂರು ಕೇಳಿ ಬಂದಿದೆ. ಈ ನಿಟ್ಟಿನಲ್ಲಿ ಪೊಲೀಸ್‌ ಮತ್ತು ಸಾರಿಗೆ ಇಲಾಖಾ ಅಧಿಕಾರಿಗಳು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದರು.

ಬಾಡಿಗೆ ಬೈಕ್‌ ನಡೆಸುವವರು ಸೂಕ್ತ ದಾಖಲೆ ಪಡೆದು ನಡೆಸುತ್ತಿದ್ದಾರೆಯೇ ಅನ ಧಿಕೃತವೋ ಎಂಬುದನ್ನು ಎಆರ್‌ಟಿಒ ಖುದ್ದು ಪರಿಶೀಲನೆ ನಡೆಸಬೇಕು. ಗೋಕರ್ಣದಲ್ಲಿಯೇ ಸುಮಾರು 4 ಸಾವಿರ ಬಾಡಿಗೆ ಬೈಕ್‌ಗಳಿವೆ. ಬಹುತೇಕ ಎಲ್ಲವೂ ಬೆಂಗಳೂರು ಸಾರಿಗೆ ನೋಂದಣಿ ಹೊಂದಿವೆ. ಪ್ರತಿ ಬೈಕ್‌ಗೆ ಪ್ರವಾಸಿಗರಿಂದ 1 ರಿಂದ 2 ಸಾವಿರ ಹಣ ಪಡೆದು ಒಂದು ದಿನ ಬಾಡಿಗೆ ನೀಡುತ್ತಿದ್ದಾರೆ. ಜತೆಗೆ ನಿಲುಗಡೆಗೆ ಗ್ರಾಪಂನಿಂದ ಅನುಮತಿ ಪತ್ರ ಪಡೆದಿಲ್ಲ. ಕಂಡ ಕಂಡಲ್ಲಿ ರಸ್ತೆ ಮೇಲೆ ಪಾರ್ಕಿಂಗ್‌ ಮಾಡುತ್ತಿದ್ದಾರೆ. ಇದರಿಂದ ತೀವ್ರ ಸಮಸ್ಯೆಯಾಗುತ್ತಿದೆ. ಈ ಬಗ್ಗೆ ಗೋಕರ್ಣದಲ್ಲಿ ಸಾರಿಗೆ ಹಾಗೂ ಪೊಲೀಸ್‌ ಇಲಾಖೆ ಜಂಟಿ ಕಾರ್ಯಾಚರಣೆ ನಡೆಸಿ, ಅಗತ್ಯ ಕ್ರಮ ವಹಿಸಿ, 15 ದಿನದ ಒಳಗಡೆ ಸಮರ್ಪಕ ಉತ್ತರ ನೀಡಬೇಕು ಎಂದರು.

ಕೆಡಿಸಿಸಿ ಬ್ಯಾಂಕ್‌ ನಿರ್ದೇಶಕ ಹಾಗೂ ಜಿ.ಪಂ ಮಾಜಿ ಸದಸ್ಯ ಗಜಾನನ ಪೈ ಮಾತನಾಡಿ, ತಾಲೂಕಿನ ಲುಕ್ಕೇರಿ ಭಾಗದಲ್ಲಿ ಕಗ್ಗ ಭತ್ತ ಹೆಚ್ಚಿನ ಪ್ರಮಾಣದಲ್ಲಿ ಬೆಳೆಯುತ್ತಾರೆ. ಆದರೆ ರೈತರ ಜಮೀನು ನಕಾಶೆಯಲ್ಲಿ ಕರ್ನಾಟಕ ಸರ್ಕಾರ ಎಂದು ನಮೂದಾಗಿದ್ದು, ಇದರಿಂದ ರೈತರಿಗೆ ಬೆಳೆ ಸಾಲ ಪಡೆಯಲು ಸಾಧ್ಯವಾಗುತ್ತಿಲ್ಲ. ರೈತರ ಹೆಸರಿನಲ್ಲಿ ಜಮೀನು ನೋಂದಣಿ ಮಾಡಿಸಲು ಕೃಷಿ ಇಲಾಖೆ ಮುತುವರ್ಜಿ ವಹಿಸಬೇಕು ಎಂದರು.

ಕೃಷಿ ಇಲಾಖೆ ಸಹಾಯಕ ನಿರ್ದೇಶಕಿ ರಶ್ಮಿ ಶಹಾಪೂರಮಠ ಮಾತನಾಡಿ, ಲುಕ್ಕೇರಿ ಭಾಗದ ಕಗ್ಗ ಭತ್ತ ಬೆಳೆಯುವ ಪ್ರದೇಶ ಕರ್ನಾಟಕ ಸರ್ಕಾರ ಎಂದು ನಮೂದಾಗಿರುವ ಬಗ್ಗೆ ಶಾಸಕ ದಿನಕರ ಶೆಟ್ಟಿ ಮುಖ್ಯಮಂತ್ರಿ ಗಮನಕ್ಕೆ ತಂದಿದ್ದಾರೆ. ಆಗ ಮುಖ್ಯಮಂತ್ರಿ ಜಿಲ್ಲಾಧಿಕಾರಿಗೆ ಪರಿಶೀಲಿಸಲು ಆದೇಶ ನೀಡಿದ್ದರು. ಡಿಸಿ ಸೂಚನೆಯಂತೆ ಜಂಟಿ ನಿರ್ದೇಶಕರ ಹಾಗೂ ಕಂದಾಯ, ಕೃಷಿ ಇಲಾಖೆ ವತಿಯಿಂದ ಸರ್ವೇ ನಡೆಸಿ ವರದಿ ಕಳುಹಿಸಿದ್ದೇವೆ ಎಂದರು.

ವಿವಿಧ ಇಲಾಖಾ ಅಧಿಕಾರಿಗಳು ವರದಿ ಸಲ್ಲಿಸಿದರು. ತಹಶೀಲ್ದಾರ್‌ ವಿವೇಕ ಶೇಣ್ವಿ, ತಾಪಂ ಇಒ ನಾಗರತ್ನಾ ನಾಯಕ, ಆಡಳಿತಾಧಿಕಾರಿ ಎನ್‌.ಜಿ. ನಾಯಕ, ತೋಟಗಾರಿಕಾ ಇಲಾಖೆ ಸಹಾಯಕ ನಿರ್ದೇಶಕ ಚೇತನ ನಾಯ್ಕ, ಪಿಎಸ್‌ಐ ರವಿ ಗುಡ್ಡಿ, ಸಣ್ಣ ನೀರಾವರಿ ಇಲಾಖೆಯ ಅಮಿತಾ ತಳೇಕರ, ಆರ್‌ಎಫ್‌ಒಗಳಾದ ಪ್ರವೀಣ ನಾಯಕ, ಸುಧಾಕರ ಪಟಗಾರ ಸೇರಿದಂತೆ ವಿವಿಧ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

2-biggboss

BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-honey

Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ‌,ಮಗಳು

5-dandeli

Dandeli: ವಿದ್ಯುತ್ ಕಂಬದ ಜಿಓಎಸ್ ಕಳವು‌ ಮಾಡಿದ್ದ ಆರೋಪಿ;ಮಾಲು ಸಹಿತ ವಶಕ್ಕೆ ಪಡೆದ ಪೊಲೀಸರು

10

Gujjar Kere: ಕೆರೆ ಪರಿಸರದ ರಕ್ಷಣೆಗೆ ಆದ್ಯತೆ ಅಗತ್ಯ; ತಹಶೀಲ್ದಾರ್‌ಗೆ ಮರು ಮನವಿ

10-dandeli

Dandeli:ತುಂಡಾಗಿ ಬಿದ್ದಿದ್ದ ಕೇಬಲ್ ವೈರ್ ಸುತ್ತಿ ದ್ವಿಚಕ್ರ ವಾಹನ ಸ್ಕಿಡ್: ಸವಾರನಿಗೆ ಗಾಯ

1-dandeli

Dandeli; ಆತ್ಮಹ*ತ್ಯೆಗೆ ಯತ್ನಿಸಿದ ವೃದ್ಧನ ರಕ್ಷಣೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

2-biggboss

BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.