ಸೋಮವಾರದ ರಾಶಿ ಫಲ : ಅವಿವಾಹಿತರಿಗೆ ಯೋಗ್ಯ ಸಂಬಂಧ ಒದಗುವ ಸಮಯ
Team Udayavani, Oct 31, 2022, 7:22 AM IST
ಮೇಷ: ಸದಾ ಧನ ಸಂಚಯನ. ಉತ್ತಮ ವಾಕ್ ಚತುರತೆಯಿಂದ ಕೂಡಿದ ಕಾರ್ಯ ವೈಖರಿ. ದೇವತಾ ಸ್ಥಳ ಸಂದರ್ಶನ. ದಂಪತಿಗಳಲ್ಲಿ ಅನುರಾಗ ವೃದ್ಧಿ. ಅವಿವಾಹಿತರಿಗೆ ಯೋಗ್ಯ ಸಂಬಂಧ ಒದಗುವ ಸಮಯ.
ವೃಷಭ: ನಿರೀಕ್ಷಿತ ಸ್ಥಾನಮಾನ ಗೌರವಾದಿ ವೃದ್ಧಿ. ದಂಪತಿಗಳಲ್ಲಿ ಅನುರಾಗ ವೃದ್ಧಿ. ಅವಿವಾಹಿತರಿಗೆ ಉತ್ತಮ ನೆಂಟಸ್ಥಿಕೆ ಒದಗುವ ಕಾಲ. ಅನಿರೀಕ್ಷಿತ ಧನ ಸಂಪತ್ತು ಲಭ್ಯ. ಕೆಲಸ ಕಾರ್ಯಗಳಲ್ಲಿ ಶ್ಲಾಘನೆ ಇತ್ಯಾದಿ ಶುಭ ಫಲ.
ಮಿಥುನ: ದೂರ ಪ್ರಯಾಣ ಸಂಭವ. ಸಂಪತ್ತಿನ ಉಳಿತಾಯಕ್ಕೆ ಚಿಂತನೆ. ಮಾತೃ ಸಮಾನ ವರ್ಗದವರ ನಿಮಿತ್ತ ಖರ್ಚು. ಮಿತ್ರರೊಂದಿಗೆ ಜಾಗೃತೆಯಿಂದ ವ್ಯವಹರಿಸಿ. ಪಾಲುದಾರಿಕೆ ವ್ಯವಹಾರಗಳಲ್ಲಿ ಅಧಿಕ ಶ್ರಮದಿಂದ ಯಶಸ್ಸು ಲಭ್ಯ.
ಕರ್ಕ: ಉದ್ಯೋಗ ವ್ಯವಹಾರಗಳಲ್ಲಿ ನೇತೃತ್ವ ತಲ್ಲೀನತೆ. ನಿರೀಕ್ಷಿತ ಕೆಲಸಗಳಲ್ಲಿ ಸಫಲತೆ. ಪಿತೃ ಸಮಾನರಿಂದ ಅನುಕೂಲ. ಆರೋಗ್ಯದಲ್ಲಿ ಸುಧಾರಣೆ. ಸಾಂಸಾರಿಕ ಸುಖಕ್ಕೆ ಪರಿಶ್ರಮ ಅಗತ್ಯ. ಅನಗತ್ಯ ಖರ್ಚಿಗೆ ಆಸ್ಪದ ನೀಡದಿರಿ.
ಸಿಂಹ: ವಿದ್ಯಾರ್ಥಿಗಳಿಗೆ, ಜ್ಞಾನಿಗಳಿಗೆ ಅನುಕೂಲಕರ ಪರಿಸ್ಥಿತಿ. ತಿಳಿದಂತಹ ವಿದ್ಯೆಯನ್ನು ಪರರಿಗೆ ಹಂಚಿದ ಸಂತೋಷ. ನಿರೀಕ್ಷಿತ ಸ್ಥಾನ ಗೌರವಾದಿ ಪ್ರಾಪ್ತಿ. ಹಣ ಸಂಪತ್ತಿನ ವೃದ್ಧಿ. ದೇವತಾ ಕಾರ್ಯಗಳಲ್ಲಿ ಅಡಚಣೆ ಎದುರಾದೀತು.
ಕನ್ಯಾ: ದೇವತಾ ಕಾರ್ಯಗಳಲ್ಲಿ ಭಾಗಿ. ನೇತೃತ್ವ ವಹಿಸಿದ ನೆಮ್ಮದಿ. ದೀರ್ಘ ಪ್ರಯಾಣ ಸಂಭವ. ಗುರುಹಿರಿಯರ ಉತ್ತಮ ಮಾರ್ಗದರ್ಶನದ ಲಾಭ. ಗೃಹದಲ್ಲಿ ಸಂತಸದ ವಾತಾವರಣ. ಆರೋಗ್ಯದ ಬಗ್ಗೆ ಗಮನಹರಿಸಿ.
ತುಲಾ: ದೇವತಾ ಕಾರ್ಯಗಳಲ್ಲಿ ತತ್ಪರತೆ. ಭಾಗ್ಯವೃದ್ಧಿ. ಉತ್ತಮ ವಾಕ್ ಚತುರತೆಯಿಂದ ಕೂಡಿದ ಕಾರ್ಯ ವೈಖರಿ. ಕೀರ್ತಿ ಸ್ಥಾನ ಸುಖಾದಿ ಪ್ರಾಪ್ತಿ. ಸಾಂಸಾರಿಕ ಸುಖ ವೃದ್ಧಿ. ಆಸ್ತಿ ವಿಚಾರದಲ್ಲಿ ಮುನ್ನಡೆ. ನೂತನ ಬಂಧುಮಿತ್ರರ ಸಹಕಾರ.
ವೃಶ್ಚಿಕ: ಬಹು ಐಶ್ವರ್ಯ ಸಿಗುವ ಸಂಭವ. ರಾಜಕೀಯ ಸರಕಾರೀ ಕಾರ್ಯಗಳಲ್ಲಿ ಮುನ್ನಡೆ. ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು ಸಾಧಿಸಿದರಿಂದ ತೃಪ್ತಿ. ದೀರ್ಘ ಸಂಚಾರ ಸಂಭವ. ಉದ್ಯೋಗ ವ್ಯವಹಾರಗಳಲ್ಲಿ ಮೇಲಧಿಕಾರಿಗಳ ಸಹಕಾರ ಪ್ರೋತ್ಸಾಹ ಲಭ್ಯ.
ಧನು: ಉತ್ತಮ ಆರೋಗ್ಯ. ತಾಳ್ಮೆ ಸಹನೆಯಿಂದ ನಿರ್ವಹಿಸಿದ ಕಾರ್ಯದಿಂದ ಕೀರ್ತಿ ಯಶಸ್ಸು ಲಭಿಸಿದ್ದರಿಂದ ಸಂತೋಷ. ನಿರಂತರ ಧನಾರ್ಜನೆ. ಗುರುಹಿರಿಯರ ಸಹಕಾರ ಪ್ರೋತ್ಸಾಹದಿಂದ ಹೆಚ್ಚಿದ ಸ್ಥಾನಮಾನ. ದಾಂಪತ್ಯ ತೃಪ್ತಿಕರ.
ಮಕರ: ತಂದೆ ತಾಯಿಯಿಂದ ಸುಖ ಪ್ರಾಪ್ತಿ. ಬಂಧುಮಿತ್ರರ ಆಗಮನದಿಂದ ಗೃಹದಲ್ಲಿ ಸಂತಸದ ವಾತಾವರಣ. ಭೋಜನಾದಿ ಸಂಭ್ರಮ. ಆಸ್ತಿ ವಿಚಾರದಲ್ಲಿ ಮುನ್ನಡೆ. ದಾಂಪತ್ಯ ತೃಪ್ತಿಕರ. ಪಾಲುದಾರಿಕಾ ವ್ಯವಹಾರಗಳಲ್ಲಿ ಹೆಚ್ಚಿದ ಪ್ರಗತಿ.
ಕುಂಭ: ನೂತನ ಮಿತ್ರರ ಭೇಟಿ. ಧಾರ್ಮಿಕ ಚಟುವಟಿಕೆಗಳಿಗಾಗಿ ಪ್ರಯಾಣ. ದೂರದ ವ್ಯವಹಾರದಲ್ಲಿ ಹೆಚ್ಚಿದ ವರಮಾನ. ಪಾಲುದಾರಿಕಾ ಕ್ಷೇತ್ರದಲ್ಲಿ ಗೌರವ ವೃದ್ಧಿ. ಆರೋಗ್ಯದಲ್ಲಿ ಉತ್ತಮ ಬದಲಾವಣೆ.
ಮೀನ: ದೂರ ಪ್ರಯಾಣ. ಜನಪದದ ಸಹಕಾರ ಸಹಾಯದಿಂದ ನಿರೀಕ್ಷಿತ ಸ್ಥಾನ ಗೌರವಾದಿ ಲಭ್ಯ. ಉದ್ಯೋಗ ವ್ಯವಹಾರದಲ್ಲಿ ಪ್ರಗತಿ. ಅನಿರೀಕ್ಷಿತ ಧನಾಗಮನ. ಅವಿವಾಹಿತರಿಗೆ ವಿವಾಹ ಭಾಗ್ಯ. ವಿದ್ಯಾರ್ಥಿಗಳಿಗೆ ಸರ್ವ ಸೌಲಭ್ಯ ಪ್ರಾಪ್ತಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ
Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ
Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ
Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.