15 ಸಾವಿರಕ್ಕೂ ಅಧಿಕ ಪೌಷ್ಟಿಕ ತೋಟ : ಪೌಷ್ಟಿಕ ತೋಟದಲ್ಲಿ ಏನೇನು ಇರಲಿದೆ?

Team Udayavani, Oct 31, 2022, 9:16 AM IST

15 ಸಾವಿರಕ್ಕೂ ಅಧಿಕ ಪೌಷ್ಟಿಕ ತೋಟ : ಪೌಷ್ಟಿಕ ತೋಟದಲ್ಲಿ ಏನೇನು ಇರಲಿದೆ?

ಉಡುಪಿ : ಪೋಷಣ್‌ ಅಭಿಯಾನದ ಮುಂದುವರಿದ ಭಾಗವಾಗಿ ಜಿ.ಪಂ., ತೋಟಗಾರಿಕೆ ಇಲಾಖೆ ಹಾಗೂ ನ್ಯಾಶನಲ್‌ ರೂರಲ್‌ ಲೈವ್ಲಿಹುಡ್‌ ಮಿಷನ್‌ (ಎನ್‌ಆರ್‌ಎಲ್‌ಎಂ) ಒಟ್ಟಾಗಿ ಗ್ರಾ.ಪಂ.ಗಳಲ್ಲಿರುವ ಸಂಜೀವಿನಿ ಸಂಘಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಂಡು ನರೇಗಾ ಯೋಜನೆಯಡಿಯಲ್ಲಿ ಪೌಷ್ಟಿಕ ತೋಟಗಳ ನಿರ್ಮಾಣಕ್ಕೆ ರೂಪರೇಖೆ ಸಿದ್ಧಪಡಿಸಲಾಗಿದೆ.
ಎಲ್ಲರ ಆರೋಗ್ಯ ವರ್ಧನೆಗೆ ಕೇಂದ್ರ ಸರಕಾರ 2022-23ರ ಅಂತ್ಯಕ್ಕೆ ಅಪೌಷ್ಟಿಕತೆ ಮುಕ್ತ ಭಾರತವೆಂದು ಘೋಷಿಸಲು ಪೂರಕವಾಗಿ ರಾಷ್ಟ್ರೀಯ ಪೋಷಣ್‌ ಅಭಿಯಾನ ಜಾರಿಗೊಳಿಸಿದೆ. ಇದರಡಿಯಲ್ಲಿ ಹಲವು ಕಾರ್ಯಕ್ರಮಗಳು ನಡೆಯುತ್ತಿವೆ. ಕುಟುಂಬದ ಪೌಷ್ಟಿಕ ಹೊರೆಯನ್ನು ಪೂರ್ತಿಗೊಳಿಸುವಲ್ಲಿ ಮಹಿಳೆಯರ ಪಾತ್ರ ಪ್ರಮುಖವಾಗಿದೆ. ಆದ್ದರಿಂದ ಸಂಜೀವಿನಿ ಸ್ವ-ಸಹಾಯ ಮಹಿಳಾ ಗುಂಪುಗಳ ಮೂಲಕ ಜಿ.ಪಂ., ತೋಟಗಾರಿಕೆ ಇಲಾಖೆಯ ಸಹಭಾಗಿತ್ವದಲ್ಲಿ ಮನೆಗೊಂದು ಪೌಷ್ಟಿಕ ತೋಟದ ಅಡಿಯಲ್ಲಿ ಕಾರ್ಯಕ್ರಮ ಅನುಷ್ಠಾನ ಮಾಡಲಾಗುತ್ತಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

ಜಿಲ್ಲೆಯ ಗುರಿ
ಜಿಲ್ಲೆಯ 155 ಗ್ರಾ.ಪಂ.ಗಳಲ್ಲಿ ತಲಾ 101 ಪೌಷ್ಟಿಕ ತೋಟದಂತೆ ಒಟ್ಟು 15,500ಕ್ಕೂ ಮನೆಯಂಗಳದಲ್ಲಿ ಪೌಷ್ಟಿಕ ತೋಟ ನಿರ್ಮಾಣಕ್ಕೆ ಯೋಜನೆ ರೂಪಿಸ ಲಾಗಿದೆ. ಪೌಷ್ಟಿಕ ತೋಟ ನಿರ್ಮಾಣಕ್ಕೆ ನರೇಗಾದಡಿಯಲ್ಲಿ ವೈಯಕ್ತಿಕ ಕಾಮಗಾರಿ ಹೆಸರಿನಡಿ ಕೂಲಿ ಹಾಗೂ ಸಾಮಗ್ರಿ ವೆಚ್ಚ ಸೇರಿ ಒಟ್ಟು 4,503 ರೂ. ಸಿಗಲಿದೆ. ಆರಂಭದಲ್ಲಿ ಪೌಷ್ಟಿಕ ತೋಟ ನಿರ್ಮಾಣ ಮಾಡುವವರೇ ತಮ್ಮ ಖರ್ಚಿನಲ್ಲಿ ಇದನ್ನು ಮಾಡಿಕೊಳ್ಳಬೇಕು. ಅನಂತರದಲ್ಲಿ ನರೇಗಾ ಯೋಜನೆಯಡಿ ಅವರ ಖಾತೆಗೆ ಹಣ ಬೀಳಲಿದೆ ಎಂದು ಮೂಲಗಳು ತಿಳಿಸಿವೆ.

ಪೌಷ್ಟಿಕ ತೋಟದಲ್ಲಿ ಏನೇನು ಇರಲಿದೆ?
ಜಿಲ್ಲೆಯ ಭೌಗೋಳಿಕ ಪರಿಸರಕ್ಕೆ ಪೂರಕವಾಗುವಂತೆ ಯಾವೆಲ್ಲ ಗಿಡಗಳನ್ನು ನಡೆಬಹುದು ಎಂಬುದನ್ನು ತೋಟಗಾರಿಕೆ ಇಲಾಖೆ ಹಾಗೂ ಜಿ.ಪಂ. ಒಟ್ಟಾಗಿ ತಜ್ಞರ ಮೂಲಕ ಚರ್ಚಿಸಿ ತೀರ್ಮಾನಿಸಲಾಗಿದೆ. ಪೌಷ್ಟಿಕ ತೋಟದಲ್ಲಿ ತಲಾ ಎರಡೆರೆಡು ತೆಂಗು, ಸೀಬೆ, ನೆಲ್ಲಿ, ಕರಿಬೇವು, ನಿಂಬೆ, ನುಗ್ಗೆ ಹಾಗೂ ಪಪಾಯ ಗಿಡ ಇರಲಿದೆ. ಕನಿಷ್ಠ ತಲಾ ಒಂದರಂತೆ ಎಂಟು ಗಿಡಗಳು ಇರಬೇಕು. ಗರಿಷ್ಠ 14 ಗಿಡ ಹೊಂದಲು ಅವಕಾಶವಿದೆ.

ಇದನ್ನೂ ಓದಿ : ಚಿಂಚೋಳಿ ಪುರಸಭೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಬಿಜೆಪಿಗೆ ಮುಖಬಂಗ

ಗಿಡದ ಲಭ್ಯತೆ ಮತ್ತು ದರ
ಒಂದು ತೆಂಗಿನ ಗಿಡಕ್ಕೆ 70 ರೂ., ಸೀಬೆ 85 ರೂ., ನೆಲ್ಲಿ 40 ರೂ., ಕರಿಬೇವು 12 ರೂ., ನಿಂಬೆ 15 ರೂ., ನುಗ್ಗೆ 10 ರೂ. ಹಾಗೂ ಪಪಾಯಕ್ಕೆ 10 ರೂ. ನಿಗದಿ ಮಾಡಲಾಗಿದೆ. ಒಬ್ಬರಿಗೆ ಗರಿಷ್ಠ ಎಲ್ಲ ಬಗೆಯ ಎರಡೆರೆಡು ಗಿಡಗಳನ್ನು ನೀಡಲಾಗುತ್ತದೆ. ತೋಟಗಾರಿಕೆ ಇಲಾಖೆಯ ಅಧಿಕೃತ ನರ್ಸರಿ, ಜಿ.ಪಂ.ಗಳಿಂದ ರಚಿಸಲ್ಪಟ್ಟಿರುವ ಸಂಜೀವಿನಿ ಸಂಘಗಳ ನರ್ಸರಿಗಳಲ್ಲಿ ನಿರ್ದಿಷ್ಟ ದರ ನೀಡಿ ಗಿಡ ಖರೀದಿ ಮಾಡಬಹುದಾಗಿದೆ. ನರೇಗಾದಡಿ ಈಗಾಗಲೇ 10 ಸಾವಿರಕ್ಕೂ ಅಧಿಕ ಅರ್ಜಿಗಳು ಬಂದಿವೆ ಎಂದು ಅಧಿಕಾರಿಯೊಬ್ಬರು ವಿವರ ನೀಡಿದರು.

ಪೌಷ್ಟಿಕ ತೋಟಕ್ಕೆ ಪೂರಕವಾದ ಗಿಡಗಳು ತೋಟಗಾರಿಕೆ ಇಲಾಖೆಯ ಅಧಿಕೃತ ನರ್ಸರಿ ಹಾಗೂ ಗ್ರಾ.ಪಂ. ಸಂಜೀವಿನಿ ಸಂಘಗಳ ನರ್ಸರಿಗಳಲ್ಲಿ ಲಭ್ಯವಿರುವಂತೆ ನೋಡಿಕೊಳ್ಳಲಿದ್ದೇವೆ. ಪ್ರತೀ ಗ್ರಾ.ಪಂ.ನಲ್ಲಿ 101 ಪೌಷ್ಟಿಕ ತೋಟ ನಿರ್ಮಾಣದ ಗುರಿಯಿದೆ.
– ಭುವನೇಶ್ವರಿ, ಉಪನಿರ್ದೇಶಕಿ, ತೋಟಗಾರಿಕೆ ಇಲಾಖೆ

ಪೌಷ್ಟಿಕ ತೋಟ ನಿರ್ಮಾಣ ಸಂಬಂಧ ನರೇಗಾದಡಿ ಕಾರ್ಯಕ್ರಮ ಅನುಷ್ಠಾನಕ್ಕೆ ಈಗಾಗಲೇ ಪಿಡಿಒಗಳಿಗೆ ನಿರ್ದೇಶನ ನೀಡಿದ್ದೇವೆ. ಎಲ್ಲ ಗ್ರಾ.ಪಂ.ಗಳಲ್ಲಿ ಅರ್ಜಿ ಸ್ವೀಕರಿಸಲಾಗುತ್ತದೆ. ಸಂಜೀವಿನಿ ಸಂಘಗಳನ್ನು ಇದರಲ್ಲಿ ಪರಿಣಾಮಕಾರಿಯಾಗಿ ಬಳಸಿಕೊಳ್ಳಲಾಗುವುದು.
-ಪ್ರಸನ್ನ ಎಚ್‌., ಜಿ.ಪಂ. ಸಿಇಒ ಉಡುಪಿ

ಟಾಪ್ ನ್ಯೂಸ್

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

dw

Malpe: ಕಲ್ಮಾಡಿ; ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.