ಬೀದಿ ನಾಯಿ ಹಾವಳಿ; ದ್ವಿಚಕ್ರ ಸವಾರರಿಗೆ ಸಂಕಷ್ಟ
ಪಣಂಬೂರು, ತಣ್ಣೀರುಬಾವಿ, ಚಿತ್ರಾಪುರ ಬೀಚ್ ರಸ್ತೆ
Team Udayavani, Oct 31, 2022, 11:23 AM IST
ಪಣಂಬೂರು: ಪಣಂಬೂರು ಬಳಿಯ ತಣ್ಣೀರುಬಾವಿ ಸಮೀಪ ಹೆದ್ದಾರಿ ಮತ್ತು ಬೀಚಿಗೆ ತೆರಳು ಒಳ ರಸ್ತೆಗಳಲ್ಲಿ ಬೀದಿ ನಾಯಿ ಹಾವಳಿ ಹೆಚ್ಚುತ್ತಿದ್ದು, ದ್ವಿಚಕ್ರ ಸವಾರರು ಬಿದ್ದು ಕೈಕಾಲು ಕಳೆದುಕೊಳ್ಳುವ ಸ್ಥಿತಿ ಎದುರಾಗಿದೆ.
ತಣ್ಣೀರುಬಾವಿ ರಸ್ತೆಯಲ್ಲಿ ಕಳೆದ ವಾರದ ದ್ವಿಚಕ್ರ ಸವಾರರಿಗೆ ನಾಯಿ ಅಡ್ಡ ಬಂದು ಬೈಕ್ ಸಮೇತ ಬಿದ್ದು ಗಾಯಗೊಂಡ ಘಟನೆ ಸಂಭವಿಸಿದೆ.
ಬೀದಿ ನಾಯಿಗಳಿಗೆ ಸಂತಾನ ಹರಣ ಚಿಕಿತ್ಸೆ ನಡೆಸಿ ಅದೇ ಸ್ಥಳಕ್ಕೆ ತಂದು ಬಿಡಲಾಗುತ್ತಿದೆ. ಆದರೆ ನಾಯಿಗಳ ಸಂತಾನ ಮಾತ್ರ ನಿಯಂತ್ರಣಕ್ಕೆ ಬರುತ್ತಿಲ್ಲ.
ಪ್ರವಾಸಿಗರಿಗೆ ದೊಡ್ಡ ತಲೆನೋವು
ಪ್ರಾಣಿ ಪ್ರಿಯರು ನಿತ್ಯ ಬಿಸ್ಕತ್ತು, ಅನ್ನ ಮತ್ತಿತರ ತಂಡಿ ಹಾಕುವುದರಿಂದ ಕ್ಲಪ್ತ ಸಮಯಕ್ಕೆ ಎಲ್ಲ ಶ್ವಾನಗಳು ನಿಗದಿತ ಸ್ಥಳದಲ್ಲಿ ಹಾಜರಾಗುತ್ತವೆ. ಮಧ್ಯರಾತ್ರಿಯಾದರೆ ಒಂಟಿ ವಾಹನ, ಪಾದಚಾರಿಗಳನ್ನು ಓಡಿಸಿಕೊಂಡು ಹೋಗುವ ವೇಳೆ ವಾಹನಕ್ಕೆ ಅಡ್ಡ ಬಂದು ಸವಾರರು ಗಾಯಗೊಳ್ಳುತ್ತಿದ್ದಾರೆ.
ಬೀಚ್‌ನ ಮರಳು, ಮರದ ಕೆಳಗೆ ಎಲ್ಲೆಂದರಲ್ಲಿ ಶ್ವಾನಗಳ ಸಮೂಹವೇ ಕಂಡು ಬರುತ್ತಿದ್ದು, ಪ್ರವಾಸಿಗರಿಗೆ ದೊಡ್ಡ ತಲೆನೋವಾಗಿದೆ. ಚಿತ್ರಾಪುರ, ಪಣಂಬೂರು, ತಣ್ಣೀರು ಬಾವಿ ಬೀಚ್‌ಗಳಲ್ಲೂ ಬೀದಿ ನಾಯಿಗಳ ಕಾಟ ಹೆಚ್ಚಿದೆ. ಹಾಗಾಗಿ ಸುರಕ್ಷೆ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಇಲಾಖೆ ಅಗತ್ಯ ಕ್ರಮ ಕೈಗೊಳ್ಳಬೇಕಿದೆ.
ಈ ಪ್ರದೇಶದಲ್ಲಿ ಬೀದಿ ನಾಯಿಗಳ ಸಂಖ್ಯೆ ಹೆಚ್ಚಿರುವ ಕಾರಣ ಅವುಗಳಿಗೆ ರೇಬಿಸ್ ಲಸಿಕೆ ಹಾಕುವ ಅಭಿಯಾನ ಅಷ್ಟು ಸುಲಭವಲ್ಲ. ಹೀಗಾಗಿ ಶ್ವಾನಗಳ ನಿಯಂತ್ರಣಕ್ಕೆ ಪರ್ಯಾಯ ಕ್ರಮವೊಂದರ ಅಗತ್ಯವಿದೆ ಎಂಬುದು ಸಾರ್ವಜನಿಕರ ಆಗ್ರಹವಾಗಿದೆ.
ಚರ್ಚಿಸಿ ಕ್ರಮ: ಪಾಲಿಕೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳಿಂದ ವಾಕಿಂಗ್ ಹೋಗುವ ಮಂದಿಗೆ, ವಾಹನ ಸವಾರರಿಗೆ ಸಮಸ್ಯೆಯಾಗುತ್ತಿದೆ. ದನಕರುಗಳನ್ನು ಅಟ್ಟಿಸಿಕೊಂಡು ಹೋಗಿ ಕಚ್ಚುತ್ತಿವೆ ಎಂಬ ದೂರು ಕೇಳಿ ಬರುತ್ತಿದೆ. ಇವುಗಳ ನಿಯಂತ್ರಣಕ್ಕೆ ಕ್ರಮ ಹೇಗೆ ಜರಗಿಸಬಹುದು ಎಂಬುದರ ಬಗ್ಗೆ ಆರೋಗ್ಯ ಇಲಾಖೆಯ ಜತೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು. –ಜಯಾನಂದ ಅಂಚನ್, ಮೇಯರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ
Mangaluru: ಆನ್‌ಲೈನ್ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ
Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್ ಅಧ್ಯಕ್ಷನ ಬಂಧನ
Surathkal: ತಡಂಬೈಲ್‌ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ
Mangaluru: ಇನ್ನು ಯುಪಿಐ ಮೂಲಕವೂ ಟ್ರಾಫಿಕ್ ದಂಡ ಪಾವತಿ
MUST WATCH
ಹೊಸ ಸೇರ್ಪಡೆ
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.