ಕಾಪು ಪಿಲಿಕೋಲದ ದೈವ ನರ್ತಕ ಗುಡ್ಡ ಪಾಣಾರರಿಗೆ ರಾಜ್ಯೋತ್ಸವ ಗೌರವ
Team Udayavani, Oct 31, 2022, 12:44 PM IST
ಕಾಪು: ತುಳುನಾಡಿನ ಸಪ್ತ ಜಾತ್ರೆಗಳಲ್ಲಿ ಒಂದಾದ ಕಾಪುವಿನ ದ್ವೈ ವಾರ್ಷಿಕ ಪಿಲಿಕೋಲ ದೈವದ ನರ್ತಕರಾಗಿ ಸೇವೆ ಸಲ್ಲಿಸುತ್ತಿರುವ ಮೂಳೂರಿನ ಗುಡ್ಡ ಪಾಣಾರ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ಒಲಿದು ಬಂದಿದೆ.
ಗುಡ್ಡ ಪಾಣಾರ ಅವರು ಅವಿದ್ಯಾವಂತರಾಗಿದ್ದರೂ ಹಿರಿಯರಿಂದ ಬಳುವಳಿಯಾಗಿ ಬಂದಿರುವ ದೈವಾರಾಧನೆ ಮತ್ತು ಜಾನಪದ ಕಲೆಗಳನ್ನು ಪೋಷಿಸಿ, ಮುಂದಿನ ತಲೆಮಾರಿನವರೆಗೂ ಉಳಿಸಿ ಬೆಳೆಸುವ ಕಾಯಕದಲ್ಲಿ ತೊಡಗಿಸಿಕೊಂಡು ಬಂದಿದ್ದಾರೆ.
48 ವರ್ಷಗಳಿಂದ ದೈವಾರಾಧನೆ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಅವರು 38 ವರ್ಷಗಳಿಂದ ಪಿಲಿಕೋಲ ದೈವ ನರ್ತಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕಾಪು ಸಾವಿರ ಸೀಮೆಯ ವಿವಿಧೆಡೆ ಪಂಜುರ್ಲಿ, ವರ್ತೆ, ಗುಳಿಗ, ಬಬ್ಬರ್ಯ, ತನ್ನಿಮಾನಿಗ ಸಹಿತ ಇತರ ದೈವಗಳ ನರ್ತನ ಸೇವೆ ನಡೆಸುತ್ತಿದ್ದು ಅವರು ಪಿಲಿ ಕೋಲ ನರ್ತನ ಸೇವೆ ಆರಂಭಿಸಿದ ಬಳಿಕ ಇತರ ದೈವಗಳ ನರ್ತನ ಸೇವೆಯನ್ನು ಸ್ಥಗಿತಗೊಳಿಸಿದ್ದಾರೆ.
ಇದನ್ನೂ ಓದಿ:ಮೊರ್ಬಿ ಸೇತುವೆ ಕುಸಿತ ದುರಂತ: ರಕ್ಷಣಾ, ಪರಿಹಾರ ಕಾರ್ಯದಲ್ಲಿ ಅಸಡ್ಡೆ ಇಲ್ಲ: ಪ್ರಧಾನಿ ಮೋದಿ
ರಾಜ್ಯೋತ್ಸವ ಪ್ರಶಸ್ತಿಯ ಬಗ್ಗೆ ಮಾತನಾಡಿದ ಗುಡ್ಡ ಪಾಣಾರ ಅವರು, 20ನೇ ವರ್ಷದಿಂದಲೇ ದೈವಗಳ ನರ್ತಕನಾಗಿ ತಂದೆಯಿಂದ ಬಳುವಳಿಯಾಗಿ ಬಂದ ಸೇವೆಯನ್ನು ನಡೆಸಿಕೊಂಡು ಬಂದಿದ್ದೇನೆ. ಪ್ರಾಮಾಣಿಕ ಸೇವೆಗೆ ದೈವ ಕೃಪೆ ರೂಪದಲ್ಲಿ ಪ್ರಶಸ್ತಿ ಲಭಿಸಿದೆ ಎನ್ನುತ್ತಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಆದಿ ಉಡುಪಿ: ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ
Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Udupi:ಗೀತಾರ್ಥ ಚಿಂತನೆ 103: ಪಂಡಿತರೆಂದರೇನು?ಅಥವ ಪಂಡಿತರೆಂದರೆ ಯಾರು?
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
BBK11: ಧರ್ಮ ಬಿಗ್ ಬಾಸ್ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್ ಹೀರೋʼ ಎಡವಿದ್ದೆಲ್ಲಿ?
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.