ವಿಶ್ವಸಂಸ್ಥೆಯಲ್ಲಿ ಭಾರತದ ಕೀರ್ತಿ ಬೆಳಗಿಸಿ: ಡಾ.ಕೆ.ಪಿ.ಅಶ್ವಿನಿ ಅವರಿಗೆ ಸನ್ಮಾನ
Team Udayavani, Oct 31, 2022, 7:21 PM IST
ಬೆಂಗಳೂರು: ವಿಶ್ವಸಂಸ್ಥೆಯ ಮಾನವ ಹಕ್ಕು ಸಮಿತಿಗೆ ಏಷ್ಯಾದಿಂದಲೇ ಪ್ರಥಮ ಬಾರಿಗೆ ನೇಮಕಗೊಂಡಿರುವ ಕೋಲಾರದ ಡಾ.ಕೆ.ಪಿ.ಅಶ್ವಿನಿ ಅವರನ್ನು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ವಿಕಾಸಸೌಧದಲ್ಲಿ ಸೋಮವಾರ ಸನ್ಮಾನಿಸಿದರು.
ಶ್ರಮಜೀವಿಗಳು ಹಾಗೂ ಶೋಷಿತರ ಪರವಾದ ತಮ್ಮ ಅಧ್ಯಯನ ಮತ್ತು ನಿಲುವುಗಳು ಪ್ರಶಂಸನೀಯ. ಇದೀಗ ತಾವು ವಿಶ್ವ ಸಂಸ್ಥೆಯ ಮಾನವ ಹಕ್ಕು ಸಮಿತಿಗೆ ನೇಮಕಗೊಂಡಿರುವುದು ಇಡೀ ದೇಶವೇ ಹೆಮ್ಮೆ ಪಡುವ ಸಂಗತಿ. ತಾವು ವಿಶ್ವಸಂಸ್ಥೆಯಲ್ಲೂ ಭಾರತದ ಕೀರ್ತಿ ಬೆಳಗಿಸಿ ಎಂದು ಸಚಿವ ಕೋಟ ಆಶಯ ವ್ಯಕ್ತಪಡಿಸಿದರು.
ಸಚಿವರಿಂದ ಗೌರವ ಸ್ವೀಕರಿಸಿದ ಡಾ.ಕೆ.ಪಿ.ಅಶ್ವಿನಿ ಅವರು, ವರ್ಣಬೇಧ, ಜನಾಂಗೀಯ ಬೇಧ, ಅಸಹಿಷ್ಣತೆಗೆ ಸಂಬಂಧಿಸಿದ ವಿಷಯಗಳನ್ನು ವಿಶ್ವಸಂಸ್ಥೆಯಲ್ಲಿ ನಿರ್ವಹಿಸಬೇಕಿದೆ. ದಲಿತ ಮಹಿಳೆಯಾಗಿ, ಭಾರತೀಯ ಮಹಿಳೆಯಾಗಿ ಇದೊಂದು ಒಳ್ಳೆಯ ಅವಕಾಶವಾಗಿರುವುದು ಖುಷಿ ತಂದಿದೆ. ಇದನ್ನು ಸಮರ್ಪಕವಾಗಿ ನಿಭಾಯಿಸುವ ವಿಶ್ವಾಸ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗಡೆ, ಸಮಾಜ ಕಲ್ಯಾಣ ಇಲಾಖೆ ಸಲಹೆಗಾರ ಡಾ.ಇ.ವೆಂಕಟಯ್ಯ, ಸಮಾಜ ಕಲ್ಯಾಣ ಇಲಾಖೆ ಕಾರ್ಯದರ್ಶಿ ಮೇಜರ್ ಪಿ.ಮಣಿವಣ್ಣನ್, ಇಲಾಖೆ ಆಯುಕ್ತ ಡಾ.ಕೆ.ರಾಕೇಶ್ ಕುಮಾರ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕಾರ್ಯದರ್ಶಿ ತುಳಸಿ ಮದ್ದಿನೇನಿ, ಡಾ.ಕೆ.ಪಿ.ಅಶ್ವಿನಿ ಅವರ ಕುಟುಂಬಸ್ಥರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
MUST WATCH
ಹೊಸ ಸೇರ್ಪಡೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.