ಟಿಪ್ಪರ್ ಚಾಲಕನ ಕೊಲೆ: ಆರೋಪಿಗೆ ಜೀವಾವಧಿ ಶಿಕ್ಷೆ
Team Udayavani, Nov 1, 2022, 8:51 AM IST
ಮಂಗಳೂರು : ಬೆಳ್ತಂಗಡಿಯ ಕಳಿಯ ಗ್ರಾಮದಲ್ಲಿ 2017ರಲ್ಲಿ ನಡೆದಿದ್ದ ಟಿಪ್ಪರ್ ಚಾಲಕ ಗುರುವಾಯನಕೆರೆ ಕುವೆಟ್ಟು ಗ್ರಾಮ ಶಿವಾಜಿನಗರದ ಪ್ರದೀಪ್ (36) ಕೊಲೆ ಪ್ರಕರಣದ ಆರೋಪಿ ಮೊಡಂತ್ಯಡ್ಕ ನ್ಯಾಯತರ್ಪು ನಿವಾಸಿ ದಿನೇಶ್ (32)ನಿಗೆ ಮಂಗಳೂರಿನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.
ದಿನೇಶ್ ಕೆಲಸದ ವಿಚಾರಕ್ಕೆ ಸಂಬಂಧಿಸಿ ಪ್ರದೀಪ್ ಅವರಿಗೆ ಬೈದು ಬಳಿಕ ರಾಡ್‌ನಿಂದ ಹೊಡೆದಿದ್ದ. ಗಂಭೀರ ಗಾಯಗೊಂಡಿದ್ದ ಪ್ರದೀಪ್ ಮೃತಪಟ್ಟಿದ್ದರು. ಪ್ರಕರಣದ ವಿಚಾರಣೆ ನಡೆಸಿದ್ದ ನ್ಯಾಯಾಧೀಶ ಮಲ್ಲಿಕಾರ್ಜುನ ಸ್ವಾಮಿ ಎಚ್.ಎಸ್. ಅವರು ಶನಿವಾರ ಆರೋಪ ಸಾಬೀತಾಗಿರುವುದಾಗಿ ತೀರ್ಪು ನೀಡಿದ್ದರು. ಸೋಮವಾರ ಆರೋಪಿ ದಿನೇಶ್‌ನಿಗೆ ನ್ಯಾಯಾ ಧೀಶರು ಜೀವಾವಧಿ ಶಿಕ್ಷೆ ಮತ್ತು 10,000 ರೂ. ದಂಡ, ಒಂದು ವೇಳೆ ದಂಡ ಪಾವತಿಸಲು ತಪ್ಪಿದರೆ 1 ವರ್ಷ ಹೆಚ್ಚುವರಿ ಸಜೆ ವಿಧಿಸಿ ತೀರ್ಪು ನೀಡಿದ್ದಾರೆ. ಅಲ್ಲದೆ ಕೊಲೆಯಾದ ಪ್ರದೀಪ್ ಅವರ ತಾಯಿಗೆ ಪರಿಹಾರ ನೀಡುವಂತೆಯೂ ಆದೇಶಿಸಿದ್ದಾರೆ.
ಈ ಹಿಂದೆ ಸರಕಾರಿ ಅಭಿಯೋಜಕ ರಾಗಿದ್ದ ಶೇಖರ ಶೆಟ್ಟಿ ಅವರು ಸಾಕ್ಷಿಗಳ ವಿಚಾರಣೆ ನಡೆಸಿದ್ದರು. ಪ್ರಸ್ತುತ ಸರಕಾರಿ ಅಭಿಯೋಜಕಿ ಜುಡಿತ್ ಒ.ಎಂ. ಕ್ರಾಸ್ತ ಅವರು ವಾದ ಮಂಡಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangalore: ಪ್ರಯಾಣಿಕರಿಗಾಗಿ ಸಿಗ್ನಲ್‌ಗಳಲ್ಲೇ ಬಸ್ ನಿಲುಗಡೆ; ಅನಾಹುತಕ್ಕೆ ಎಡೆ
Mangaluru: ನಿಷ್ಪ್ರಯೋಜಕವಾಗಿದೆ ಸ್ಥಳ ಸೂಚನ ಫಲಕಗಳು
Baikampady: ಇಲ್ಲಿ ಅಜ್ಜಿಯರೂ ರೈಲಿನಡಿ ನುಸುಳಿಯೇ ಹಳಿ ದಾಟಬೇಕು!
Mangaluru: ಬೆಳ್ಳಂಬೆಳಗ್ಗೆ ವಿಮಾನ ನಿಲ್ದಾಣದ ಪರಿಸರದಲ್ಲಿ ಚಿರತೆ ಓಡಾಟ… ಪರಿಶೀಲನೆ
Niveus Mangalore Marathon 2024: ನ.10: ನೀವಿಯಸ್ ಮಂಗಳೂರು ಮ್ಯಾರಥಾನ್
MUST WATCH
ಹೊಸ ಸೇರ್ಪಡೆ
Our beautiful blessing..; ಚೊಚ್ಚಲ ಮಗುವಿನ ಖುಷಿ ಹಂಚಿಕೊಂಡ ರಾಹುಲ್ – ಅಥಿಯಾ ಶೆಟ್ಟಿ
ಬೆಳಗಾವಿಯ ಶ್ರೀನಿವಾಸ ಠಾಣೇದಾರ ಅಮೆರಿಕ ಸಂಸತ್‌ಗೆ ಆಯ್ಕೆ
Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Waqf Property: ಸಚಿವ ಜಮೀರ್ ಅಶ್ವಮೇಧ ಕುದುರೆ ತಡೆದಿದ್ದೇನೆ: ಶಾಸಕ ಯತ್ನಾಳ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.