ಪ್ರಕಾಶ ಕೋಳಿವಾಡ ದೂರದೃಷ್ಟಿ ಇತರರಿಗೆ ಮಾದರಿ

6 ಸಾವಿರಕ್ಕೂ ಅಧಿಕ ಯುವಕರಿಗೆ ಉದ್ಯೋಗ ಕೊಡಿಸುವಲ್ಲಿ ಸಫಲರಾಗಿದ್ದಾರೆ

Team Udayavani, Nov 2, 2022, 4:25 PM IST

ಪ್ರಕಾಶ ಕೋಳಿವಾಡ ದೂರದೃಷ್ಟಿ ಇತರರಿಗೆ ಮಾದರಿ

ರಾಣಿಬೆನ್ನೂರ: ಶೈಕ್ಷಣಿಕ ಪ್ರಗತಿ, ಆರೋಗ್ಯ ರಕ್ಷಣೆಯ ಜೊತೆಗೆ ತಾಲೂಕನ್ನು ನಿರುದ್ಯೋಗ ಮುಕ್ತ ಮಾಡುವ ಕನಸು ಕಂಡಿರುವ ಪಿಕೆಕೆ ಇನಿಷಿಯೇಟಿವ್‌ ಸಂಸ್ಥೆ ಅಧ್ಯಕ್ಷ ಹಾಗೂ ಕಾಂಗ್ರೆಸ್‌ ಯುವ ನಾಯಕ ಪ್ರಕಾಶ ಕೋಳಿವಾಡ ಅವರ ದೂರದೃಷ್ಟಿ ಇತರರಿಗೆ ಮಾದರಿಯಾಗಿದೆ ಎಂದು ಮಾಜಿ ಸಚಿವ ರುದ್ರಪ್ಪ ಲಮಾಣಿ ಹೇಳಿದರು.

ನಗರದ ಬಿ.ಕೆ. ಗುಪ್ತಾ ಹೈಸ್ಕೂಲ್‌ ಆವರಣದಲ್ಲಿ ಮಂಗಳವಾರ ವಿಧಾನಸಭೆ ಮಾಜಿ ಅಧ್ಯಕ್ಷ ಕೆ.ಬಿ. ಕೋಳಿವಾಡ ಅವರ 79ನೇ ಜನ್ಮದಿನದ ಅಂಗವಾಗಿ ಪಿಕೆಕೆ ಇನಿಷಿಯೇಟಿವ್‌ ಸಂಸ್ಥೆ ವತಿಯಿಂದ 79 ವಿವಿಧ ಸಂಸ್ಥೆಗಳಿಂದ ಏರ್ಪಡಿಸಿದ್ದ ಉದ್ಯೋಗ ಮೇಳ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಕೊರೊನಾ ಸಂಕಷ್ಟ ಸಮಯದಲ್ಲಿ ಪ್ರಾಣಾಪಾಯದಲ್ಲಿದ್ದ ರೋಗಿಗಳಿಗೆ ಆಕ್ಸಿಜನ್‌ ವಿತರಣೆ, ಗ್ರಾಮೀಣ ಭಾಗದ ಜನರ ಆರೋಗ್ಯ ರಕ್ಷಣೆಗೆ ಸಂಚಾರಿ ಆಸ್ಪತ್ರೆ, ನಿರುದ್ಯೋಗಿಗಳಿಗೆ ಕಳೆದ 10 ವರ್ಷಗಳಿಂದ ಉದ್ಯೋಗ ಮೇಳ, ಈ ಬಾರಿ ವಿಕಲಚೇತನರಿಗೂ ಅವಕಾಶ, ಪಶುಗಳ ಆರೋಗ್ಯ ರಕ್ಷಣೆಗಾಗಿ ವಿಜ್ಞಾನಿಗಳಿಂದ ಪಶು ವೈದ್ಯರಿಗೆ ತರಬೇತಿ, ಗ್ರಾಮೀಣ ಭಾಗದ ಕಲಾವಿದರನ್ನು ಗುರುತಿಸಲು ವೇದಿಕೆ ಸೃಷ್ಟಿಸಿ ತನ್ಮೂಲಕ ಚಲನಚಿತ್ರಗಳಲ್ಲಿ ಹಾಡುವ ಅವಕಾಶ ನೀಡಿದ ಹೆಗ್ಗಳಿಕೆ ಇವರದಾಗಿದೆ ಎಂದರು.

ಯುವ ನಾಯಕ ಪ್ರಕಾಶ ಕೋಳಿವಾಡ ಅವರು ಎಂದೂ ಸಹ ಸ್ವಾರ್ಥದ ರಾಜಕಾರಣ ಮಾಡಿಲ್ಲ. ಸಮಾಜದ ದೂರದೃಷ್ಟಿ ಇಟ್ಟುಕೊಂಡು ಬಡವರ, ನಿರ್ಗತಿಕರ, ಶ್ರೀಸಾಮಾನ್ಯರ, ರೈತರ ಹಾಗೂ ನಾಗರಿಕರ ಸೇವೆಯನ್ನು ವಿವಿಧ ಹಂತಗಳಲ್ಲಿ ಮಾಡುವುದರ ಮೂಲಕ ಸಾಮಾಜಿಕ ಕಳಕಳಿ ಹೊಂದಿದ್ದಾರೆ. ಅವರ ನಿಸ್ವಾರ್ಥ ಸೇವೆಯನ್ನು ತಾಲೂಕಿನ ಮಾಹಾಜನತೆ ಶ್ಲಾಘಿಸಿರುವುದು ಸ್ತುತ್ಯರ್ಹ ಎಂದರು. ಕಾಂಗ್ರೆಸ್‌ ನಾಯಕ ಸೋಮಣ್ಣ ಬೇವಿನಮರದ ಮಾತನಾಡಿ, ಪ್ರಧಾನಿ ಮೋದಿ 2014 ರಲ್ಲಿ ವರ್ಷಕ್ಕೆ 2 ಕೋಟಿ ಯುವಕರಿಗೆ ಉದ್ಯೋಗ ನೀಡಲಾಗುವುದು ಎಂದು ಸುಳ್ಳು ಹೇಳಿ ಅಧಿಕಾರಕ್ಕೆ ಬಂದವರು. ಆದರೆ, ಇಂದಿನವರೆಗೂ ಯಾವ ಯುವಕನಿಗೂ ಉದ್ಯೋಗ ನೀಡಿಲ್ಲ.

ಅವರ ಘೋಷಣೆಯಂತೆ ಇಲ್ಲಿಯವರೆಗೆ 16 ಕೋಟಿ ಉದ್ಯೋಗ ನೀಡಬೇಕಿತ್ತು. ಅದು ಆಯಿತೇ ಎಂದು ಪ್ರಶ್ನಿಸಿದರು. ಆದರೆ, ಪ್ರಕಾಶ ಕೋಳಿವಾಡ ಅವರು ಯಾರಿಗೂ ಮಾತು ಕೊಡದೆ ಸುಮಾರು 6 ಸಾವಿರಕ್ಕೂ ಅಧಿಕ ಯುವಕರಿಗೆ ಉದ್ಯೋಗ ಕೊಡಿಸುವಲ್ಲಿ ಸಫಲರಾಗಿದ್ದಾರೆ ಎಂದರು.

ಅಧ್ಯಕ್ಷತೆ ವಹಿಸಿದ್ದ ವಿಧಾನಸಭಾ ಮಾಜಿ ಅಧ್ಯಕ್ಷ ಕೆ.ಬಿ.ಕೋಳಿವಾಡ ಅವರು ಮಾತನಾಡಿ, ಕಳೆದ ದಶಕದಿಂದೀಚೆಗೆ ಯುವಪಡೆ ಕಟ್ಟಿಕೊಂಡು ಸಾಮಾಜಿಕ ಸೇವೆಯಲ್ಲಿ ತೊಡಗಿರುವ ಯುವ ನಾಯಕ ಪ್ರಕಾಶ ಕೋಳಿವಾಡ ಅವರು ಈ ಭಾಗದಲ್ಲಿ ಎಂದೂ ಸಹ ಬರಗಾಲ ಆವರಿಸದಂತೆ ಮೋಡ ಬಿತ್ತನೆಯ ಮೂಲಕ ಹಾವೇರಿ ಜಿಲ್ಲೆಯ ನಾಗರಿಕರಿಗೆ ಸಹಕಾರ ನೀಡಬೇಕು. ಮುಂದಿನ ದಿನಮಾನಗಳಲ್ಲೂ ಹೆಚ್ಚೆಚ್ಚು ಸಾಮಾಜಿಕ ಸೇವೆ ಮಾಡಲು ಪ್ರಕಾಶ ಅವರು ಮುಂದಾಗಬೇಕೆಂದರು.

ಮಾಜಿ ಶಾಸಕ ಅಜ್ಜಂಪೀರ ಖಾಜಿ, ಪಿಕೆಕೆ ಇನಿಷಿಯೇಟಿವ್ಸ್‌ ಅಧ್ಯಕ್ಷ ಪ್ರಕಾಶ ಕೋಳಿವಾಡ, ಗಂಗಾಧರ ಬಣಕಾರ ಮಾತನಾಡಿದರು. ಹಾವೇರಿ ನಗರಸಭಾ ಅಧ್ಯಕ್ಷ ಸಂಜೀವಕುಮಾರ ನೀರಲಗಿ, ಜಿಪಂ ಮಾಜಿ ಅಧ್ಯಕ್ಷರಾದ ಕೊಟ್ರೇಶಪ್ಪ ಬಸಗಣ್ಣಿ, ಏಕನಾಥ ಬಾನುವಳ್ಳಿ, ಎಂ.ಎಂ. ಹಿರೇಮಠ, ಎಚ್‌ಎಫ್‌ ಗಾಜಿಗೌಡ್ರ, ಶ್ರೀನಿವಾಸ ಸಾವುಕಾರ, ಇರ್ಫಾನ್‌ ದಿಂಡೂರ, ಸುಭಾಸ ಸಾವುಕಾರ, ಪುಟ್ಟಪ್ಪ ಮರಿಯಮ್ಮನವರ ಮತ್ತಿತರರು ಇದ್ದರು.ಇದೇ ಸಂದರ್ಭದಲ್ಲಿ ವಿವಿಧ ಕಂಪನಿಗಳ ಸಂದರ್ಶನದಲ್ಲಿ ಆಯ್ಕೆಯಾದ ಅಂಗವಿಕಲರು ಸೇರಿದಂತೆ ಅನೇಕ ಯುವಕರಿಗೆ ಆದೇಶ ಪತ್ರ ನೀಡಲಾಯಿತು.

ಟಾಪ್ ನ್ಯೂಸ್

Ola Scooter; ರಿಪೇರಿಗೆ 90000 ರೂ.ಬಿಲ್‌: ಸ್ಕೂಟರ್‌ ಒಡೆದು ಹಾಕಿದ ಗ್ರಾಹಕ

Ola Scooter; ರಿಪೇರಿಗೆ 90000 ರೂ.ಬಿಲ್‌: ಸ್ಕೂಟರ್‌ ಒಡೆದು ಹಾಕಿದ ಗ್ರಾಹಕ

Accident-logo

Kolluru: ಕಾಂತಾರ ಚಿತ್ರ ತಂಡದ ವಾಹನ ಅಪಘಾತ

1-reee

Chikkamagaluru: ದತ್ತಪೀಠದಲ್ಲಿ ಕುಂಕುಮ ಲೇಪಿಸಿ ಧಾರ್ಮಿಕ ಭಾವನೆಗೆ ಧಕ್ಕೆ: ಖಾದ್ರಿ

ಹವಾಮಾನ ಹಣಕಾಸು ಪ್ಯಾಕೇಜ್‌ ತಿರಸ್ಕರಿಸಿದ ಭಾರತ

ಹವಾಮಾನ ಹಣಕಾಸು ಪ್ಯಾಕೇಜ್‌ ತಿರಸ್ಕರಿಸಿದ ಭಾರತ

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್‌ ಗೆಲುವು: ಬೊಮ್ಮಾಯಿ ಆರೋಪ

Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ

Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ

1-bbb

Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ

ajjamper-Qadri

Adi Jambava Samavesha: ಅಂಬೇಡ್ಕರ್‌ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ

ಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Ola Scooter; ರಿಪೇರಿಗೆ 90000 ರೂ.ಬಿಲ್‌: ಸ್ಕೂಟರ್‌ ಒಡೆದು ಹಾಕಿದ ಗ್ರಾಹಕ

Ola Scooter; ರಿಪೇರಿಗೆ 90000 ರೂ.ಬಿಲ್‌: ಸ್ಕೂಟರ್‌ ಒಡೆದು ಹಾಕಿದ ಗ್ರಾಹಕ

Police

Karkala: ಎಸ್‌ಪಿ ಕಚೇರಿ ಮುತ್ತಿಗೆ ಹೇಳಿಕೆ ಆರೋಪ: ಪ್ರಕರಣ ದಾಖಲು

1-yadu

Hindutva; ಧರ್ಮದ ವಿರುದ್ಧ ಬಂದರೆ ಸುಮ್ಮನಿರೆವು: ಯದುವೀರ ಕೃಷ್ಣದತ್ತ ಒಡೆಯರ್‌

Accident-logo

Kolluru: ಕಾಂತಾರ ಚಿತ್ರ ತಂಡದ ವಾಹನ ಅಪಘಾತ

1-reee

Chikkamagaluru: ದತ್ತಪೀಠದಲ್ಲಿ ಕುಂಕುಮ ಲೇಪಿಸಿ ಧಾರ್ಮಿಕ ಭಾವನೆಗೆ ಧಕ್ಕೆ: ಖಾದ್ರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.