ಬಂಟ್ವಾಳ: ಬಸ್ಸಿನಿಂದ ಹಾರಿ ಓಡಿದ ಆರೋಪಿ; ಬೆನ್ನಟ್ಟಿ ಹಿಡಿಯುವಲ್ಲಿ ಪೊಲೀಸರು ಯಶಸ್ವಿ
Team Udayavani, Nov 3, 2022, 6:55 AM IST
ಬಂಟ್ವಾಳ: ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೋರ್ವನನ್ನು ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಬಿ.ಸಿ.ರೋಡಿನಿಂದ ಮಂಗಳೂರು ಜಿಲ್ಲಾ ಕಾರಾಗೃಹಕ್ಕೆ ಕರೆದುಕೊಂಡು ಹೋಗುವಾಗ ಆತ ತಪ್ಪಿಸಿಕೊಂಡು ಓಡಲು ಯತ್ನಿಸಿ, ಬಳಿಕ ಆತನನ್ನು ಪೊಲೀಸರು ಸಾರ್ವಜನಿಕರ ಸಹಕಾರದಿಂದ ವಶಕ್ಕೆ ಪಡೆದ ಘಟನೆ ಬುಧವಾರ ಬಿ.ಸಿ.ರೋಡು ಸಮೀಪದ ಬ್ರಹ್ಮರಕೂಟ್ಲುನಲ್ಲಿ ನಡೆದಿದೆ.
ಕಳ್ಳಿಗೆ ಗ್ರಾಮದ ಪೆರಿಯೋಡು ಬೀಡು ಮನೆ ನಿವಾಸಿ ಗಿರೀಶ್ ಯಾನೆ ಗಿರಿಧರ್‌ತಪ್ಪಿಕೊಂಡು ಓಡಲು ಯತ್ನಿಸಿದ ಆರೋಪಿ. 2003ರಲ್ಲಿ ನಡೆದ ಕಳ್ಳತನ ಪ್ರಕರಣ ಆರೋಪಿಯಾಗಿರುವ ಗಿರೀಶ್ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಆತನನ್ನು ಪೊಲೀಸರು ಬುಧವಾರ ಪತ್ತೆ ಹಚ್ಚಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿತ್ತು.
ಅದರಂತೆ ಆರೋಪಿಯನ್ನು ಬಸ್ಸಿನಲ್ಲಿ ಕಾರಾಗೃಹಕ್ಕೆ ಕರೆದುಕೊಂಡು ಹೋಗುವ ವೇಳೆ ಬಸ್ಸಿನ ಹೊರಗೆ ಹಾರಿ ತಪ್ಪಿಸಿಕೊಳ್ಳಲು ಯತ್ನಿಸಿದ. ಈ ವೇಳೆ ಬಸ್ಸನ್ನು ನಿಲ್ಲಿಸಿ ಸಾರ್ವಜನಿಕರ ಸಹಕಾರದಿಂದ ಆತನನ್ನು ಬೆನ್ನಟ್ಟಿ ಹಿಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Snuff: ನಶ್ಯ ತಂದಿಟ್ಟ ಸಮಸ್ಯೆ
Nagavalli Bangale Movie: ಸೆನ್ಸಾರ್ ಪಾಸಾದ ನಾಗವಲ್ಲಿ
Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್ʼ ಟ್ರೇಲರ್ ಔಟ್- ಮಿಂಚಿದ ಅಕ್ಷಯ್
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.