ಕೇಂದ್ರದಿಂದ ರಾಜ್ಯಕ್ಕೆ ಹೆಚ್ಚುವರಿ 30 ಲಕ್ಷ ಲೀಟರ್ ಸೀಮೆ ಎಣ್ಣೆ ಬಿಡುಗಡೆ
Team Udayavani, Nov 3, 2022, 9:10 AM IST
ಉಡುಪಿ: ಕರಾವಳಿ ಪ್ರದೇಶದ ಸಾಂಪ್ರದಾಯಿಕ ನಾಡದೋಣಿ ಮೀನುಗಾರರ ಮನವಿಗೆ ಸ್ಪಂದಿಸಿ ರಾಜ್ಯಕ್ಕೆ ಹೆಚ್ಚುವರಿಯಾಗಿ 30 ಲಕ್ಷ ಲೀಟರ್ ಸೀಮೆ ಎಣ್ಣೆಯನ್ನು ಕೇಂದ್ರ ಸರಕಾರ ಬಿಡುಗಡೆ ಮಾಡಿದೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.
ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಸಾಂಪ್ರದಾಯಿಕವಾಗಿ ನಡೆಸಿಕೊಂಡು ಬರುತ್ತಿರುವ ನಾಡದೋಣಿ ಮೀನುಗಾರಿಕೆಗೆ ಹಂಚಿಕೆಯಾಗಿದ್ದ ಸೀಮೆ ಎಣ್ಣೆ ಸಕಾಲದಲ್ಲಿ ಸಿಗುತ್ತಿಲ್ಲ, ಈ ಕುರಿತು ಕೇಂದ್ರ ಸರಕಾರದ ಗಮನವನ್ನು ಸೆಳೆದು ಹಂಚಿಕೆಯಾಗಿರುವ ಸೀಮೆ ಎಣ್ಣೆಯನ್ನು ತ್ವರಿತವಾಗಿ ಬಿಡುಗಡೆಗೊಳಿಸಬೇಕು. ಈ ಮೂಲಕ ಕರಾವಳಿಯ ಮೀನುಗಾರರ ಹಿತವನ್ನು ಕಾಯಬೇಕು ಎಂದು ಉಡುಪಿಯ ಮೀನುಗಾರರ ನಿಯೋಗ ಸಚಿವರಿಗೆ ಮನವಿ ಸಲ್ಲಿಸಿತ್ತು. ಈ ಮನವಿಯನ್ನು ಕೇಂದ್ರ ಪೆಟ್ರೋಲಿಯಂ ಖಾತೆ ಸಚಿವರ ಗಮನಕ್ಕೆ ತಂದು ಅತೀ ಶೀಘ್ರದಲ್ಲಿ ಹೆಚ್ಚುವರಿ ಸೀಮೆ ಎಣ್ಣೆಯನ್ನು ಕರ್ನಾಟಕ ರಾಜ್ಯಕ್ಕೆ ಬಿಡುಗಡೆಗೊಳಿಸಿ ಕರಾವಳಿ ಮೀನುಗಾರರ ಹಿತ ಕಾಯುವಂತೆ ಕೇಳಿಕೊಂಡಿದ್ದರು. ಮನವಿಯನ್ನು ಪುರಸ್ಕರಿಸಿದ ಕೇಂದ್ರ ಪೆಟ್ರೋಲಿಯಂ ಸಚಿವಾಲಯ ಬುಧವಾರ ರಾಜ್ಯ ಸರಕಾರಕ್ಕೆ 2022-23ನೇ ಸಾಲಿನ 3000ಕೆಎಲ್(30 ಲಕ್ಷ ಲೀ.) ಹೆಚ್ಚುವರಿ ಸೀಮೆ ಎಣ್ಣೆಯನ್ನು ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ.
ಹೆಚ್ಚುವರಿಯಾಗಿ ದೊರೆತಿರುವ ಸೀಮೆ ಎಣ್ಣೆಯನ್ನು ಮೀನುಗಾರಿಕೆ ಉದ್ದೇಶಕ್ಕೆ ರಾಜ್ಯದ ವಿತರಣೆ ವ್ಯವಸ್ಥೆಯು ವಿತರಿಸಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
Naxal ಎನ್ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
MUST WATCH
ಹೊಸ ಸೇರ್ಪಡೆ
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Mangaluru Airport; ಕೆ 9 ಹೀರೋ ಜಾಕ್ ಇನ್ನಿಲ್ಲ: ಭಾವನಾತ್ಮಕ ವಿದಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.