ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ವಾಹನದ ಮೇಲೆ ಗುಂಡಿನ ದಾಳಿ
Team Udayavani, Nov 3, 2022, 6:01 PM IST
ಇಸ್ಲಾಮಾಬಾದ್ : ಪಾಕಿಸ್ಥಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರು ಗುರುವಾರ ಪಾಕ್ ನ ಪಂಜಾಬ್ ಪ್ರಾಂತ್ಯದಲ್ಲಿ ತಮ್ಮ ಪ್ರತಿಭಟನಾ ಮೆರವಣಿಗೆಯ ಸಂದರ್ಭದಲ್ಲಿ ಅವರನ್ನು ಕರೆದೊಯ್ಯುತ್ತಿದ್ದ ಕಂಟೈನರ್-ಮೌಂಟೆಡ್-ಟ್ರಕ್ ಮೇಲೆ ಅಪರಿಚಿತ ದುಷ್ಕರ್ಮಿಗಳು ಗುಂಡು ಹಾರಿಸಿದ್ದರಿಂದ ಅವರಿಗೆ ಬುಲೆಟ್ ಗಾಯವಾಗಿದೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ.
ಪಂಜಾಬ್ನ ವಜೀರಾಬಾದ್ನ ಅಲ್ಲಾವಾಲಾ ಚೌಕ್ ಬಳಿ ಈ ಘಟನೆ ನಡೆದಿದೆ. ಜಿಯೋ ಟಿವಿ ಫೂಟೇಜ್ 70 ವರ್ಷದ ಖಾನ್ ಅವರ ಬಲಗಾಲಿಗೆ ಪೆಟ್ಟಾಗಿದೆ ಎಂದು ತೋರಿಸಿದೆ. ದಾಳಿಯ ವೇಳೆ ಅವರು ತೆರಳುತ್ತಿದ್ದ ಕಂಟೈನರ್ನಿಂದ ಬುಲೆಟ್ ಪ್ರೂಫ್ ವಾಹನಕ್ಕೆ ಪೊಲೀಸರು ಅವರನ್ನು ಸ್ಥಳಾಂತರಿಸಿದರು. ಸ್ಥಳದಿಂದ ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ ಮತ್ತು ಪೊಲೀಸರು ಅವರನ್ನು ಅಜ್ಞಾತ ಸ್ಥಳಕ್ಕೆ ಸ್ಥಳಾಂತರಿಸಿದ್ದಾರೆ ಎಂದು ಚಾನೆಲ್ ವರದಿ ಮಾಡಿದೆ.
ಆರಂಭದಲ್ಲಿ, ಖಾನ್ ಸುರಕ್ಷಿತವಾಗಿದ್ದಾರೆ ಮತ್ತು ಕೆಲವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿತ್ತು. ಆದರೆ, ಖಾನ್ ಕೂಡ ಗಾಯಗೊಂಡಿದ್ದಾರೆ ಎಂದು ನಂತರ ತಿಳಿದುಬಂದಿದೆ.
ದಾಳಿಯಲ್ಲಿ ಖಾನ್ ಅವರ ಆಪ್ತ ಸಹಾಯಕ ಸೆನೆಟರ್ ಫೈಸಲ್ ಜಾವೇದ್ ಕೂಡ ಗಾಯಗೊಂಡಿದ್ದಾರೆ ಎಂಬ ವರದಿಗಳಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan: ಪಾಕ್ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು
Adani; ಆಸೀಸ್ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ
London: ಶಂಕಾಸ್ಪದ ಲಗೇಜ್ ಪತ್ತೆ: ಲಂಡನ್ ಏರ್ಪೋರ್ಟ್ ಖಾಲಿ ಮಾಡಿಸಿ ತನಿಖೆ!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.