ಹುಣಸೂರು: ಹಳೇ ವೈಷಮ್ಯ; ವ್ಯಕ್ತಿ ಮೇಲೆ ಮಾರಾಣಾಂತಿಕ ಹಲ್ಲೆ
Team Udayavani, Nov 3, 2022, 9:48 PM IST
ಹುಣಸೂರು: ಹಳೇ ವೈಷಮ್ಯದಿಂದ ವ್ಯಕ್ತಿಯೋರ್ವನ ಮೇಲೆ ಹಾಡುಹಗಲೇ ಹೆದ್ದಾರಿ ಬದಿಯಲ್ಲಿ ಮಾರಾಣಾಂತಿಕ ಹಲ್ಲೆ ನಡೆಸಿರುವ ಘಟನೆ ಸೋಮನಹಳ್ಳಿ ಬಳಿ ನಡೆದಿದೆ.
ಹುಣಸೂರು ತಾಲ್ಲೂಕಿನ ಬಿಳಿಕೆರೆ ಹೋಬಳಿ ದೊಂಬಿದಾಸರ ಕಾಲೋನಿ(ಕುಪ್ಪೆ ಗೇಟ್)ಯ ಲಕ್ಷö್ಮಯ್ಯರ ಪುತ್ರ ವೆಂಕಟೇಶ್ (50) ಎಂಬುವವರು ತೀವ್ರ ಗಾಯಗೊಂಡು ಮೈಸೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ.
ದೊಂಬಿದಾಸರ ಕಾಲೋನಿಯ ಸುನಿಲ್, ಸಂಜೀವ ಇತರರಿಗೆ ಗ್ರಾಮದಲ್ಲಿರುವ ಜಮೀನು ಸಂಬಂಧ ವ್ಯಾಜ್ಯವಿದ್ದು, ನ.೩ರ ಬೆಳಿಗ್ಗೆ ಹುಣಸೂರಿನ ನ್ಯಾಯಾಲಯಕ್ಕೆ ಹಾಜರಾಗಿ ಸ್ವಗ್ರಾಮಕ್ಕೆ ಬೈಕಿನಲ್ಲಿ ವಾಪಸ್ ತೆರಳುತ್ತಿದ್ದ ವೆಂಕಟೇಶ್ ನನ್ನು ಅಡ್ಡಗಟ್ಟಿದ ಆರೋಪಿಗಳು ಮಚ್ಚಿನಿಂದ ಮನಸೋ ಇಚ್ಚೆ ಹಲ್ಲೆ ನಡೆಸಿದ್ದಾರೆ, ದಾರಿಹೋಕರು ಹಲ್ಲೆಕೋರರನ್ನು ತಡೆಯಲೆತ್ನಿಸಿದರಾದರೂ ಅವರ ಕಡೆ ಮಚ್ಚು ಬೀಸಿದ್ದರಿಂದ ಹೆದರಿ ದೂರ ಓಡಿ ಹೋಗಿದ್ದಾರೆ ಹಲ್ಲೆಗೊಳಗಾದ ವೆಂಕಟೇಶ್ ತೀವ್ರ ರಕ್ತ ಸ್ರಾವವಾಗಿ ಕುಸಿದು ಬೀಳುತ್ತಿದ್ದಂತೆ, ಸಾರ್ವಜನಿಕರೆದುರೇ ಆರೋಪಿಗಳು ಸ್ಕೂಟರ್‌ನಲ್ಲಿ ಪರಾರಿಯಾಗಿದ್ದಾರೆ.
ಮಾರ್ಗದಲ್ಲಿ ಚಲಿಸುತ್ತಿದ್ದ ಸಾರ್ವಜನಿಕರು ಗಾಯಾಳುವನ್ನು ಹುಣಸೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಪೊಲೀಸರಿಗೆ ಮಾಹಿತಿ ನೀಡಿದ ಮೇರೆಗೆ ಹುಣಸೂರು ನಗರ ಠಾಣೆ ಇನ್ಸ್ಪೆಕ್ಟರ್ ಶ್ರೀನಿವಾಸ್ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಆರೋಪಿಗಳು ಮಚ್ಚಿನಿಂದ ಹಲ್ಲೆ ನಡೆಸುತ್ತಿರುವುದನ್ನು ಕೆಲವರು ಮೊಬೈಲ್ ಮೂಲಕ ಸೆರೆಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA; 50:50 ಹಂಚಿಕೆ ರದ್ದು ತೀರ್ಮಾನ; ನ್ಯಾ| ದೇಸಾಯಿ ಆಯೋಗದ ವರದಿ ಬಳಿಕ ನಿವೇಶನ ವಾಪಸ್
MUDA Case: ಉತ್ತರ ತಾಳೆಯಾಗದೆ ಇದ್ದರೆ ಮತ್ತೆ ಸಿಎಂ ವಿಚಾರಣೆ: ಲೋಕಾಯುಕ್ತ ಎಸ್ಪಿ ಉದೇಶ್
MUDA Case: ಲೋಕಾಯುಕ್ತ ಪೊಲೀಸರು ಮತ್ತೆ ವಿಚಾರಣೆಗೆ ಬರಲು ಹೇಳಿಲ್ಲ: ಸಿಎಂ ಸಿದ್ದರಾಮಯ್ಯ
Hunsur: ಗೃಹಿಣಿ ನಾಪತ್ತೆ :ದೂರು ದಾಖಲು; ಪತ್ತೆಗಾಗಿ ಮನವಿ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ
MUST WATCH
ಹೊಸ ಸೇರ್ಪಡೆ
Mangalore: ಪ್ರಯಾಣಿಕರಿಗಾಗಿ ಸಿಗ್ನಲ್‌ಗಳಲ್ಲೇ ಬಸ್ ನಿಲುಗಡೆ; ಅನಾಹುತಕ್ಕೆ ಎಡೆ
Cricket: ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಲ್ಲೇ ಖಚಿತ; ತನ್ನ ನಿರ್ಧಾರ ತಿಳಿಸಿದ ಬಿಸಿಸಿಐ
Mangaluru: ನಿಷ್ಪ್ರಯೋಜಕವಾಗಿದೆ ಸ್ಥಳ ಸೂಚನ ಫಲಕಗಳು
Aligarh ಮುಸ್ಲಿಮ್ ವಿವಿ ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ
Baikampady: ಇಲ್ಲಿ ಅಜ್ಜಿಯರೂ ರೈಲಿನಡಿ ನುಸುಳಿಯೇ ಹಳಿ ದಾಟಬೇಕು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.