ಉಡುಪಿ ಜಿಲ್ಲೆಗೆ ಪ್ರತ್ಯೇಕ ಹಾಲು ಒಕ್ಕೂಟದ ಬೇಡಿಕೆ: ಬಿಜೆಪಿ
Team Udayavani, Nov 4, 2022, 6:57 AM IST
ಉಡುಪಿ: ಜಿಲ್ಲಾ ಬಿಜೆಪಿ ವತಿಯಿಂದ ನ. 7ರಂದು ಕಾಪುವಿನಲ್ಲಿ ನಡೆಯಲಿರುವ ಜನಸಂಕಲ್ಪ ಸಮಾವೇಶದಲ್ಲಿ 20 ಸಾವಿರ ಜನ ಸೇರಲಿದ್ದಾರೆ. ಬೈಂದೂರಿನಲ್ಲಿ ನಡೆಯಲಿರುವ ವಿವಿಧ ಯೋಜನೆಗಳ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ 25 ಸಾವಿರ ಫಲಾನುಭವಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
ಈ ಎರಡೂ ಕಾರ್ಯಕ್ರಮಗಳಲ್ಲೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭಾಗವಹಿಸ ಲಿದ್ದಾರೆ. ಬೆಳಗ್ಗೆ 11 ಗಂಟೆಗೆ ಕಾಪು ಬಸ್ ನಿಲ್ದಾಣದಲ್ಲಿ ಜನಸಂಕಲ್ಪ ಸಮಾವೇಶ ನಡೆಯಲಿದೆ. ಸಂಜೆ 4ಕ್ಕೆ ಬೈಂದೂರು ತಾಲೂಕಿನ ಮುಳ್ಳಿಕಟ್ಟೆಯಲ್ಲಿ ನಡೆ ಯುವ ಫಲಾನುಭವಿಗಳ ಸಮಾವೇಶ ಹಾಗೂ 1,270 ಕೋ.ರೂ.ಗಳ ವಿವಿಧ ಯೋಜನೆಗೆ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಪಾಲ್ಗೊಳ್ಳಲಿದ್ದಾರೆ ಎಂದರು.
ಜಿಲ್ಲೆಗೊಂದು ವಿ.ವಿ.ಗೆ ಆಗ್ರಹ : ಕೆಎಂಎಫ್ ಮಂಗಳೂರು ಒಕ್ಕೂಟ ವನ್ನು ಪ್ರತ್ಯೇಕಿಸಿ ಉಡುಪಿಗೆ ಪ್ರತ್ಯೇಕ ಒಕ್ಕೂಟ ರಚನೆ ಮಾಡು ವಂತೆ ಮುಖ್ಯಮಂತ್ರಿಯನ್ನು ಆಗ್ರಹಿಸಲಿದ್ದೇವೆ. ಉಡುಪಿ ಜಿಲ್ಲೆ ಯಲ್ಲಿ ಸಾಕಷ್ಟು ಕಾಲೇಜುಗಳು ಇರುವುದರಿಂದ ಹಾಗೂ ಶೈಕ್ಷಣಿಕವಾಗಿ ಮುಂದಿರುವುದರಿಂದ ಜಿಲ್ಲೆಗೊಂದು ವಿಶ್ವವಿದ್ಯಾನಿಲಯವನ್ನು ಘೋಷಿಸು ವಂತೆಯೂ ಬೇಡಿಕೆ ಇಡಲಿದ್ದೇವೆ. ಡಿಸಿಸಿ ಬ್ಯಾಂಕ್‌ಗಳು ಅಪೆಕ್ಸ್ ಬ್ಯಾಂಕ್‌ನೊಂದಿಗೆ ವಿಲೀನಗೊಳಿಸುವ ಪ್ರಕ್ರಿಯೆಯನ್ನು ಕೇಂದ್ರ ಸರಕಾರ ನಡೆಸುತ್ತಿರುವುದರಿಂದ ಪ್ರತ್ಯೇಕ ಡಿಸಿಸಿ ಬ್ಯಾಂಕ್ ಬೇಡಿಕೆಯನ್ನು ಮಂಡಿಸುವ ಪ್ರಮೇಯ ಬರುವುದಿಲ್ಲ ಎಂದರು.
ಜನಸಂಕಲ್ಪ ಕಾರ್ಯಕ್ರಮದಲ್ಲಿ ಪಕ್ಷಕ್ಕೆ ಹೊಸಬರ ಸೇರ್ಪಡೆಯೂ ನಡೆಯಲಿದೆ. ಪಕ್ಷದ ತಣ್ತೀ ಸಿದ್ಧಾಂತ ಗಳನ್ನು ಒಪ್ಪಿಕೊಂಡು ಬಂದವರನ್ನು ಸ್ವಾಗತಿಸುತ್ತೇವೆ ಎಂದರು.
ನ. 5ರ ಬೆಳಗ್ಗೆ 11ಕ್ಕೆ ಮಣಿಪಾಲದ ಕಂಟ್ರಿಇನ್ ಹೊಟೇಲ್‌ನಲ್ಲಿ ಜಿಲ್ಲಾ ಕಾರ್ಯಕಾರಿಣಿ ನಡೆಯಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ, ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ವಿ. ಸುನಿಲ್ ಕುಮಾರ್ ಭಾಗವಹಿಸಲಿದ್ದಾರೆ ಎಂದರು.
ಜಿಲ್ಲಾ ವಕ್ತಾರ ರಾಘವೇಂದ್ರ ಕಿಣಿ, ಸಹ ವಕ್ತಾರ ಶಿವಕುಮಾರ ಅಂಬಲಪಾಡಿ, ಉಪಾಧ್ಯಕ್ಷ ಸುಪ್ರಸಾದ್ ಶೆಟ್ಟಿ, ಕಾರ್ಯದರ್ಶಿ ಗುರುಪ್ರಸಾದ್, ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಶೆಟ್ಟಿ, ಅಲ್ಪಸಂಖ್ಯಾಕರ ಮೋರ್ಚಾದ ಅಧ್ಯಕ್ಷ ದಾವುದ್ ಅಬೂಬಕ್ಕರ್, ಮಾಧ್ಯಮ ಪ್ರಕೋಷ್ಠದ ಸಂಚಾಲಕ ಶ್ರೀನಿಧಿ ಹೆಗ್ಡೆ, ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್ ಉಪಸ್ಥಿತರಿದ್ದರು.
ಚುನಾವಣೆ ಸಮೀಪಿಸುತ್ತಿದ್ದಂತೆ ವಿನಯ ಕುಮಾರ್ ಸೊರಕೆ ವರ್ತನೆ ಬದಲಾಗು ತ್ತದೆ. ಕಾಪು ಕ್ಷೇತ್ರದಲ್ಲಿ ಎಲ್ಲವನ್ನೂ ತಾನೇ ಮಾಡಿದ್ದು ಎನ್ನುವ ತಪ್ಪು ಕಲ್ಪನೆಯಿಂದ ಅವರು ಹೊರಬರಬೇಕು. ಗೋ ಹಂತಕರಿಗೆ ಶಿಕ್ಷೆಯಾಗಬೇಕು ಎಂದು ಬಹಿರಂಗ ವಾಗಿ ಮಾತನಾಡುವ ಧೈರ್ಯ ಅವರಿಗಿದೆಯೇ? ಎಸ್‌ಡಿಪಿಐ ಜತೆ ಅವರ ಒಳ ಒಪ್ಪಂದ, ಸಿಎಎ ವಿರೋಧಿಸಿರುವುದು ಎಲ್ಲರಿಗೂ ತಿಳಿದಿದೆ ಎಂದು ಸುರೇಶ್ ಹೇಳಿದರು.
ಕಾಪು ಕ್ಷೇತ್ರದಲ್ಲಿ ಹಾಲಿ ಶಾಸಕರಿಗೆ ಟಿಕೆಟ್ ಬೇಡ ಎನ್ನುವ ಕೆಲವರ ಅಭಿಪ್ರಾಯ ನನ್ನ ಗಮನಕ್ಕೂ ಬಂದಿದೆ. ಇದರ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನಿಸುತ್ತಾರೆ. ಆ ಕ್ಷೇತ್ರದಲ್ಲಿ ನಾನು ಕೂಡ ಕೆಲಸ ಮಾಡಿದ್ದು, ಆಕಾಂಕ್ಷಿಯಾಗಿರಬಹುದು. ಅಂತಿಮವಾಗಿ ಪಕ್ಷ ಏನು ತೀರ್ಮಾನ ತೆಗೆದುಕೊಳ್ಳಲಿದೆಯೋ ಅದರಂತೆ ನಾವು ಕಾರ್ಯನಿರ್ವಹಿಸಲಿದ್ದೇವೆ. – ಕುಯಿಲಾಡಿ ಸುರೇಶ್ ನಾಯಕ್, ಬಿಜೆಪಿ ಜಿಲ್ಲಾಧ್ಯಕ್ಷ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.