ಗೋವಾದ ಯುವಕರನ್ನು ಕಳ್ಳಸಾಗಣೆ ಮಾಡಲಾಗುತ್ತಿದೆ : ಸಿಎಂ ಸಾವಂತ್
Team Udayavani, Nov 4, 2022, 3:49 PM IST
ಪಣಜಿ: ಕೆಲವು ಗೋವಾದ ಯುವಕರನ್ನು ಕೆಲಸದ ಹೆಸರಿನಲ್ಲಿ ಬೇರೆ ದೇಶಗಳಿಗೆ ಕರೆದೊಯ್ಯಲಾಗುತ್ತದೆ, ಆದರೆ ವಾಸ್ತವದಲ್ಲಿ ಅವರನ್ನು ಕಳ್ಳಸಾಗಣೆ ಮಾಡಲಾಗುತ್ತದೆ, ಏಜೆಂಟರ ಮೂಲಕ ವಿದೇಶದಲ್ಲಿ ಕೆಲಸ ಕೊಡಿಸುವುದಾಗಿ ಲಕ್ಷಗಟ್ಟಲೆ ಹಣ ಕೊಟ್ಟಿರುವುದಾಗಿ ಕೆಲವರು ನನ್ನ ಬಳಿ ಬಂದಿದ್ದಾರೆ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಮಾಹಿತಿ ನೀಡಿದ್ದಾರೆ.
ಪಣಜಿಯಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿ, ಕೆಲವು ಜನರು ಏಜೆಂಟರ ಮೂಲಕ ವಿದೇಶದಲ್ಲಿ ಉದ್ಯೋಗ ಪಡೆಯಲು ಲಕ್ಷಗಟ್ಟಲೆ ರೂಪಾಯಿಗಳನ್ನು ಪಾವತಿಸುತ್ತಾರೆ. ಪೊಲೀಸರು ಇಂತಹ ಪ್ರಕರಣಗಳಲ್ಲಿ ಸಕ್ರಿಯರಾಗಿರಬೇಕು ಮತ್ತು ಯಾರಾದರೂ ದೂರು ನೀಡುವವರೆಗೆ ಕಾಯಬೇಡಿ ಎಂದು ಮುಖ್ಯಮಂತ್ರಿ ಪ್ರಮೋದ ಸಾವಂತ್ ಸೂಚನೆ ನೀಡಿದರು.
ವೇಶ್ಯಾವಾಟಿಕೆಗಾಗಿಯೂ ಮಹಿಳೆಯರ ಕಳ್ಳಸಾಗಾಟ ನಡೆಯುತ್ತಿದೆ. ಇಂತಹ ಘಟಕನೆಯನ್ನು ನಾವು ಸಹಿಸುವುದಿಲ್ಲ. ಇಂತಹ ಪ್ರಕರಣವನ್ನು ಬೇಧಿಸಲು ಮತ್ತು ಇಂತಹ ಘಟನೆ ನಡೆಯದಂತೆ ತಡೆಯಲು ಸಂಬಂಧಿತ ಇಲಾಖೆಯನ್ನು ಸಜ್ಜುಗೊಳಿಸಲಾಗುತ್ತಿದೆ. ಲೈಂಗಿಕ ವಿಷಯಗಳಿಗಾಗಿ ಹೆಣ್ಣುಮಕ್ಕಳ ಮೇಲೆ ನಡೆಯುವ ದೌರ್ಜನ್ಯ ಅತ್ಯಂತ ಕೆಟ್ಟ ರೂಪಗಳಲ್ಲಿ ಒಂದಾಗಿದೆ. ರಾಜ್ಯ ಸರ್ಕಾರ ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ದೇಶೀಯ ಮತ್ತು ವಿದೇಶಿಗಳಿಗೆ ಹೆಣ್ಣುಮಕ್ಕಳ ಕಳ್ಳಸಾಗಾಟ ನಿಲ್ಲಿಸಲು ಕ್ರಮ ಕೈಗೊಳ್ಳುತ್ತದೆ ಎಂದು ಮುಖ್ಯಮಂತ್ರಿ ಸಾವಂತ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.