ಉಮೇಶ್‌ ರೆಡ್ಡಿ ಗಲ್ಲು ಶಿಕ್ಷೆಯನ್ನು ಜೀವಾವಧಿಗಿಳಿಸಿದ ಸುಪ್ರೀಂ ಕೋರ್ಟ್‌

10 ವರ್ಷ ಜೈಲಿನ ಕತ್ತಲ ಕೋಣೆಯಲ್ಲಿ ಇರಿಸಿದ್ದಕ್ಕೆ ಕೋರ್ಟ್‌ ಅಸಮಾಧಾನ

Team Udayavani, Nov 5, 2022, 7:40 AM IST

ಉಮೇಶ್‌ ರೆಡ್ಡಿ ಗಲ್ಲು ಶಿಕ್ಷೆಯನ್ನು ಜೀವಾವಧಿಗಿಳಿಸಿದ ಸುಪ್ರೀಂ ಕೋರ್ಟ್‌

ನವದೆಹಲಿ: ವಿಕೃತ ಕಾಮಿ ಉಮೇಶ್‌ ರೆಡ್ಡಿಯ (ಬಿ.ಎ.ಉಮೇಶ್‌) ಮರಣದಂಡನೆಯನ್ನು ಜೀವಾವಧಿ ಶಿಕ್ಷೆಗೆ ಇಳಿಸಿ ಸುಪ್ರೀಂಕೋರ್ಟ್‌ ಶುಕ್ರವಾರ ತೀರ್ಪು ನೀಡಿದೆ.

“ಬರೋಬ್ಬರಿ 10 ವರ್ಷಗಳ ಕಾಲ ಬೆಳಗಾವಿ ಜೈಲಿನಲ್ಲಿ ಆತನನ್ನು ಏಕಾಂತ ಬಂಧನದಲ್ಲಿ ಇಟ್ಟಿದ್ದು ಕಾನೂನಿನ ಸ್ಪಷ್ಟ ಉಲ್ಲಂಘನೆ. ಇದು ಆತನ ಕ್ಷೇಮಾಭಿವೃದ್ಧಿಯ ಮೇಲೆ ಪ್ರತಿಕೂಲ ಪರಿಣಾಮವನ್ನು ಬೀರಿದೆ’ ಎಂದು ಅಭಿಪ್ರಾಯಪಟ್ಟಿರುವ ಸುಪ್ರೀಂ ಕೋರ್ಟ್‌, ಆತನಿಗೆ ವಿಧಿಸಲಾಗಿದ್ದ ಗಲ್ಲುಶಿಕ್ಷೆಯನ್ನು ಜೀವಾವಧಿ ಶಿಕ್ಷೆಗೆ ಇಳಿಸಿದೆ.

ಆದರೆ, ಉಮೇಶ್‌ ರೆಡ್ಡಿ ಕನಿಷ್ಠ 30 ವರ್ಷಗಳ ಶಿಕ್ಷೆಯನ್ನು ಅನುಭವಿಸಲೇಬೇಕು ಎಂದೂ ಹೇಳಿದೆ.

ಮಹಿಳೆಯೊಬ್ಬರ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ದೋಷಿ ಎಂದು ಸಾಬೀತಾದ ಉಮೇಶ್‌ ರೆಡ್ಡಿಗೆ 2006ರಲ್ಲಿ ವಿಚಾರಣಾ ನ್ಯಾಯಾಲಯವು ಗಲ್ಲು ಶಿಕ್ಷೆಯನ್ನು ವಿಧಿಸಿತ್ತು. ನಂತರ 2011ರಲ್ಲಿ ಆತನ ಮರಣದಂಡನೆಯನ್ನು ಸುಪ್ರೀಂ ಕೋರ್ಟ್‌ ಎತ್ತಿಹಿಡಿದಿತ್ತು. ಆತ ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯನ್ನು 2013ರ ಮೇ 12ರಂದು ರಾಷ್ಟ್ರಪತಿಗಳು ವಜಾ ಮಾಡಿದ್ದರು. ಅದನ್ನು ಪ್ರಶ್ನಿಸಿ ಉಮೇಶ್‌ ರೆಡ್ಡಿ ಕರ್ನಾಟಕ ಹೈಕೋರ್ಟ್‌ ಮೆಟ್ಟಿಲೇರಿದ್ದ. ಆದರೆ, ಆತ ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು ಹೈಕೋರ್ಟ್‌ ವಜಾ ಮಾಡಿದ ಕಾರಣ, ಮತ್ತೆ ಆತ ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದ.

2006ರಿಂದ 2016ರವರೆಗೆ ಅಂದರೆ 10 ವರ್ಷ ಕಾಲ ತನ್ನನ್ನು ಬೆಳಗಾವಿಯ ಜೈಲಿನ ಕತ್ತಲ ಕೋಣೆಯಲ್ಲಿ ಇಡಲಾಗಿತ್ತು ಎಂದು ಆತ ತಿಳಿಸಿದ್ದು, ಅದನ್ನು ಗಮನಿಸಿದ ನ್ಯಾಯಾಲಯ, “ಇದು ಕಾನೂನಿನ ಸ್ಪಷ್ಟ ಉಲ್ಲಂಘನೆ’ ಎಂದು ಹೇಳಿದ್ದಲ್ಲದೇ, ಆತನ ಗಲ್ಲುಶಿಕ್ಷೆಯನ್ನು ಜೀವಾವಧಿಗೆ ಇಳಿಸಿದೆ.

ಟಾಪ್ ನ್ಯೂಸ್

10

ODI: ಶ್ರೀಲಂಕಾ ಬ್ಯಾಟಿಂಗ್‌ ಕುಸಿತ; ನ್ಯೂಜಿಲ್ಯಾಂಡ್‌ಗೆ ಸುಲಭ ಜಯ

Yathanaa

BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್‌

7

‌RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್‌ ಕುಮಾರ್

Byrathi–CM

Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ

1-wewq

Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು

1-gambhir

Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ

Cheluvaraya-swamy

Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

‌RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್‌ ಕುಮಾರ್

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು;

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು

Delhi; Roads should be like Priyanka Gandhi’s cheeks: BJP leader’s statement criticized

Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ

Gujarat: ಕೋಸ್ಟ್‌ ಗಾರ್ಡ್‌ ಹೆಲಿಕಾಪ್ಟರ್‌ ಪತನ; ಮೂವರು ಮೃ*ತ್ಯು

Gujarat: ಕೋಸ್ಟ್‌ ಗಾರ್ಡ್‌ ಹೆಲಿಕಾಪ್ಟರ್‌ ಪತನ; ಮೂವರು ಮೃ*ತ್ಯು

Oyo Rooms: ಮದುವೆಯಾಗದ ಜೋಡಿಗೆ ಇನ್ಮುಂದೆ ʼಓಯೋʼ ರೂಮ್‌ ಸಿಗೋದು ಕಷ್ಟ – ವರದಿ

Oyo Rooms: ಮದುವೆಯಾಗದ ಜೋಡಿಗೆ ಇನ್ಮುಂದೆ ʼಓಯೋʼ ರೂಮ್‌ ಸಿಗೋದು ಕಷ್ಟ – ವರದಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

6

Manipal: ಅಪಾಯಕಾರಿ ರೀತಿಯಲ್ಲಿ ಬೈಕ್‌ ಚಾಲನೆ; ಪ್ರಕರಣ ದಾಖಲು

10

ODI: ಶ್ರೀಲಂಕಾ ಬ್ಯಾಟಿಂಗ್‌ ಕುಸಿತ; ನ್ಯೂಜಿಲ್ಯಾಂಡ್‌ಗೆ ಸುಲಭ ಜಯ

Yathanaa

BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್‌

de

Kundapura: ಗುಲ್ವಾಡಿ; ಗಾಯಾಳು ಸಾವು

7

‌RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್‌ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.