ಆಟೋಚಾಲಕರೇ ಸುವ್ಯವಸ್ಥೆ ಕಾಪಾಡಲು ಸಹಕರಿಸಿ


Team Udayavani, Nov 5, 2022, 4:37 PM IST

tdy-14

ಕೋಲಾರ: ಸಮಾಜದಲ್ಲಿ ಕಾನೂನು ಸುವ್ಯವಸ್ಥೆಯ ನಿರ್ವಹಣೆಯಲ್ಲಿ ಪೊಲೀಸ್‌ ಇಲಾಖೆಯೊಂದಿಗೆ ಆಟೋ ಚಾಲಕರ ಸಹಕಾರ ಅಗತ್ಯವಾಗಿದ್ದು, ಅಪರಾಧಗಳು ಗಮನಕ್ಕೆ ಬಂದಾಗ ಪೊಲೀಸರಿಗೆ ಮಾಹಿತಿ ರವಾನಿಸಿ ಸಹಕಾರ ನೀಡಿ ಎಂದು ಜಿಲ್ಲಾ ಪೋಲೀಸ್‌ ವರಿಷ್ಠಾಧಿಕಾರಿ ಡಿ ದೇವರಾಜ್‌ ಸಲಹೆ ನೀಡಿದರು.

ನಗರದ ಪತ್ರಕರ್ತರ ಭವನದಲ್ಲಿ ಜಯಚಾಮ ರಾಜೇಂದ್ರ ಒಡೆಯರ್‌ ಕನ್ನಡಿಗರ ಸಂಘದಿಂದ ಆಟೋ ಚಾಲಕರಿಗೆ ಸಮವಸ್ತ್ರ ವಿತರಿಸಿ ಮಾತನಾಡಿದರು. ಪ್ರತಿಯೊಂದು ಗಲ್ಲಿಗಲ್ಲಿಯಲ್ಲಿ ಏನು ನಡೆಯುತ್ತಿದೆ ಎಂಬ ವಿದ್ಯಮಾನಗಳ ಬಗ್ಗೆ ಆಟೋ ಚಾಲಕರಿಗೆ ಅರಿವು ಇರುತ್ತದೆ. ಪೋಲೀಸ್‌ ಇಲಾಖೆಗೆ ನೀಡುವ ಮಾಹಿತಿಯೇ ಸಾಕಷ್ಟು ಸಂದರ್ಭದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಸಾಧ್ಯವಾಗುತ್ತದೆ ಎಂದರು.

ಸರಕಾರ ನೀಡಿರುವ ಖಾಕಿ ಸಮವಸ್ತ್ರವು ಜಾತಿ, ಧರ್ಮ, ಭೇದ, ಬಡವ ಶ್ರೀಮಂತ ಎನ್ನದೇ ಎಲ್ಲರನ್ನೂ ಸಮಾನ ಎಂಬುದನ್ನು ಸೂಚಿಸುತ್ತದೆ. ಸಮಾಜದಲ್ಲಿನ ಶೇ.80 ಆಟೋ ಚಾಲಕರು ಬದುಕಿಗಾಗಿ ವೃತ್ತಿ ಮಾಡಿದರೆ ಒಂದಿಷ್ಟು ಜನ ಶೋಕಿಗಾಗಿ ವೃತ್ತಿ ಮಾಡತ್ತಿದ್ದಾರೆ ಯಾರೇ ಬಂದರೂ ಪ್ರೀತಿಯಿಂದ ಗೌರವದಿಂದ ಮಾತಾಡಿಸಬೇಕು ಆಟೋ ಚಾಲಕರ ಮಕ್ಕಳು ಆಟೋ ಚಾಲಕರಾಗುವುದು ಬೇಡ ಎಂದರು.

ಭಾರತ ಸೇವಾದಳ ಜಿಲ್ಲಾ ಅಧ್ಯಕ್ಷ ಪತ್ರಕರ್ತ ಕೆ.ಎಸ್‌ ಗಣೇಶ್‌ ಮಾತನಾಡಿ, ಆಟೋ ಚಾಲಕರಿಗೂ ಕನ್ನಡ ಭಾಷೆಗೆ ಅವಿನಾಭಾವ ಸಂಬಂಧವಿದೆ ತಮ್ಮ ಆಟೋಗಳ ಮೇಲೆ ಕನ್ನಡ ಪ್ರೇಮದ ವಾಕ್ಯಗಳನ್ನು ಬರೆದಿರುತ್ತಾರೆ ಖಾಕಿ ಸಮವಸ್ತ್ರ ಪೋಲೀಸರಿಗೆ ಕಾನೂನು ಸುವ್ಯವಸ್ಥೆಗೆ, ಸೆ„ನಿಕರಿಗೆ ದೇಶದ ರಕ್ಷಣೆಗೆ ಹಾಗೂ ಆಟೋ ಚಾಲಕರಿಗೆ ಊರಿನ ಗೌರವ ಘನತೆಯನ್ನು ಎತ್ತಿ ತೋರಿಸಲಿಕ್ಕೆ ಎಂದರು.

ಹಿರಿಯ ಪತ್ರಕರ್ತ ರಾಜೇಂದ್ರ ಸಿಂಹ ಮಾತನಾಡಿ, ಆಟೋ ಚಾಲಕರನ್ನು ಗುರುತಿಸುವುದು ಕಡಿಮೆ ಸುಮಾರು ಆಟೋಗಳಿಗೆ ಪರವಾನಗಿ ಇಲ್ಲ, ಚಾಲಕರಿಗೆ ಕಾನೂನು ತೊಂದರೆ ಯಾಗದಂತೆ ಅದಾಲತ್‌ ರೀತಿಯಲ್ಲಿ ದಾಖಲೆಗಳನ್ನು ಒದಗಿಸುವ ಮೂಲಕ ಪೋಲೀಸ್‌ ಇಲಾಖೆ ನೆರವಾಗಬೇಕು ಕೆಲವು ಕಡೆ ಶಿಬಿರಗಳನ್ನು ನಡೆಸುವ ಮೂಲಕ ಆಟೋ ಚಾಲಕರಿಗೆ ಚಾಲನೆಯ ಅರಿವು ಮೂಡಿಸಬೇಕು ಮಾದರಿ ಆಟೋ ನಿಲ್ದಾಣಗಳ ಕಡೆ ಹೆಚ್ಚಿನ ಗಮನಹರಿಸಬೇಕು ಎಂದರು.

ಎಸ್ಪಿ ದೇವರಾಜ್‌ ಸ್ವತಃ ಆಟೋ ಚಾಲನೆ ಮಾಡುವ ಮೂಲಕ ಗಮನ ಸೆಳೆದರು ಜಯಚಾಮರಾಜೇಂದ್ರ ಒಡೆಯರ್‌ ಕನ್ನಡಿಗರ ಸಂಘದ ಕೆ.ಜಯದೇವ್‌, ಪತ್ರಕರ್ತರ ಸಂಘದ ಜಿಲ್ಲಾ ಖಜಾಂಚಿ ಎ.ಜಿ ಸುರೇಶ್‌ ಕುಮಾರ್‌ ಮತ್ತಿತರರಿದ್ದರು.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kolar: ಬಾಲಕಿ ಮೇಲೆ  ಅತ್ಯಾ*ಚಾರ: ಅಪರಾಧಿಗೆ 20 ವರ್ಷ ಶಿಕ್ಷೆ

Kolar: ಬಾಲಕಿ ಮೇಲೆ  ಅತ್ಯಾ*ಚಾರ: ಅಪರಾಧಿಗೆ 20 ವರ್ಷ ಶಿಕ್ಷೆ

Sriramulu

BJP President Post: ಅವಕಾಶ ಸಿಕ್ಕಿದರೆ ರಾಜ್ಯಾಧ್ಯಕ್ಷ ಆಗಲು ಸಿದ್ಧ: ಶ್ರೀರಾಮುಲು

Kolar: ನಶೆಯಲ್ಲಿ ರೈಲು ನಿಲ್ದಾಣಕ್ಕೆ ಕಾರು ನುಗ್ಗಿಸಿದ!

Kolar: ನಶೆಯಲ್ಲಿ ರೈಲು ನಿಲ್ದಾಣಕ್ಕೆ ಕಾರು ನುಗ್ಗಿಸಿದ!

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.