ಚಿತ್ರೀಕರಣಕ್ಕೆ ಹೊರಟ ‘ಸಂಜು’
Team Udayavani, Nov 5, 2022, 5:27 PM IST
ಯತಿರಾಜ್ ನಿರ್ದೇಶನದ “ಸಂಜು’ ಚಿತ್ರದ ಚಿತ್ರೀಕರಣ ಇದೇ ನವೆಂಬರ್ 14ರಿಂದ ಆರಂಭವಾಗಲಿದೆ. ಚಿತ್ರೀಕರಣದ ಆರಂಭಕ್ಕೂ ಮುನ್ನ ಮಾಧ್ಯಮಗಳ ಮುಂದೆ ಬಂದಿದ್ದ ಚಿತ್ರತಂಡ, ಚಿತ್ರದ ವಿಶೇಷತೆಗಳ ಬಗ್ಗೆ ಒಂದಷ್ಟು ಮಾಹಿತಿ ನೀಡಿತು.
ಈ ಹಿಂದೆ “ಆ್ಯಂಗರ್’ ಎಂಬ ಸಿನಿಮಾದಲ್ಲಿ ನಾಯಕನಾಗಿ ಅಭಿನಯಿಸಿದ್ದ, ಜೊತೆಗೆ ರಂಗ ಭೂಮಿ ನಂಟು ಹೊಂದಿರುವ ಮನ್ವೀತ್, “ಸಂಜು’ ಸಿನಿಮಾದಲ್ಲಿ ನಾಯಕನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಸಾತ್ವಿಕಾ ನಾಯಕಿಯಾಗಿ ಜೋಡಿಯಾಗುತ್ತಿದ್ದಾರೆ.
ಉಳಿದಂತೆ ಬಲರಾಜವಾಡಿ, ಯತಿರಾಜ್, ಸಂಗೀತಾ, ಅಪೂರ್ವಾ, ಮಹಾಂತೇಶ್, ಮಿಥಾಲಿ, ನಾಗರತ್ನಮ್ಮ, ಪ್ರಕಾಶ್ ಶೆಣೈ, ಜಯರಾಮ್, ಮೂಗು ಸುರೇಶ್, ಆನಂದಬಾಬು, ಚೇತನ್ ರಾಜ್, ಸಂತು, ಕುರಿ ರಂಗ, ಶಂಕರ್ ಭಟ್, ಕಾತ್ಯಾಯಿನಿ, ಜೂ. ಯೋಗಿಬಾಬು ಮೊದಲಾದವರು ಸಿನಿಮಾದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ.
ಸಿನಿಮಾದ ಬಗ್ಗೆ ಮಾತನಾಡಿದ ನಿರ್ದೇಶಕ ಯತಿರಾಜ್, “ಈ ಸಿನಿಮಾದಲ್ಲಿ ನಾಯಕ ಸಾಮಾನ್ಯ ಜನರ ಪ್ರತಿನಿಧಿಯಾಗಿ ಕಾಣಿಸಿಕೊಳ್ಳುತ್ತಾನೆ. ಆತನ ಬದುಕಿನಲ್ಲೂ ಸಾಕಷ್ಟು ಏರಿಳಿತಗಳ ತಲ್ಲಣಗಳಿವೆ. ತಕ್ಷಣದ ನಿರ್ಧಾರಗಳು ನಮ್ಮ ಬದುಕಿನಲ್ಲಿ ಎಷ್ಟೆಲ್ಲಾ ಪರಿಣಾಮಗಳನ್ನು ಬೀರುತ್ತದೆ ಎಂಬುದು ಸಿನಿಮಾದಲ್ಲಿದೆ. ಪ್ರೀತಿಯ ಚೌಕಟ್ಟಿನೊಳಗೆ ಸಂಬಂಧಗಳ ಪಯಣ. ಈ ಪಯಣದ ದಾರಿಯಲ್ಲಿ ಬದುಕಿನ ಮೌಲ್ಯಗಳ ಅನಾವರಣವಾಗಲಿದೆ’ ಎಂದರು.
ಸಿನಿಮಾಕ್ಕಾಗಿ ನಡೆಸುತ್ತಿರುವ ತಯಾರಿಗಳ ಬಗ್ಗೆ ನಾಯಕ ಮನ್ವೀತ್ ಮಾತನಾಡಿದರೆ, “ಸಿನಿಮಾದಲ್ಲಿ ಸರಸ್ವತಿ ಎಂಬ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದೇನೆ. ಮೊದಲ ಹದಿನೈದು ದೃಶ್ಯಗಳಲ್ಲಿ ನನಗೆ ಮಾತುಗಳಿಲ್ಲ. ಕೇವಲ ಭಾವನೆಗಳನ್ನು ಮಾತ್ರ ವ್ಯಕ್ತಪಡಿಸಬೇಕಿದೆ. ಇದೊಂಥರ ವಿಭಿನ್ನ ಪ್ರಯೋಗ’ ಎಂದು ತಮ್ಮ ಪಾತ್ರ ಪರಿಚಯ ಮಾಡಿಕೊಟ್ಟರು ಸಾತ್ವಿಕಾ.
ಸಂತೋಷ್ ಡಿ. ಎಂ ನಿರ್ಮಿಸುತ್ತಿರುವ “ಸಂಜು’ ಸಿನಿಮಾದ ಬಹುತೇಕ ಚಿತ್ರೀಕರಣ ಮಡಿಕೇರಿ, ವಿರಾಜಪೇಟೆ ಸುತ್ತಮುತ್ತ ನಡೆಯಲಿದೆ. ಚಿತ್ರದ ಎರಡು ಸಾಹಸ ದೃಶ್ಯಗಳಿಗೆ ಥ್ರಿಲ್ಲರ್ ಮಂಜು ಸಾಹಸವಿದ್ದು, ವಿಜಯ್ ಹರಿತ್ಸ ಸಂಗೀತವಿದೆ. ಚಿತ್ರಕ್ಕೆ ವಿದ್ಯಾ ನಾಗೇಶ್ ಛಾಯಾಗ್ರಹಣವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Waqf ಗೆಜೆಟ್ ನೋಟಿಫಿಕೇಶನ್ ನಲ್ಲಿ ಬಿಜೆಪಿ ಪಾಲಿದೆ: ಎಚ್.ಕೆ. ಪಾಟೀಲ್ ಕಿಡಿ
Waqf ವಿಷಯ ಮುಗಿದು ಹೋಗಿದೆ.. ಬಿಜೆಪಿಯವರಿಂದ ಗೊಂದಲ: ಲಕ್ಷ್ಮಣ ಸವದಿ
Dandeli: ಅಪರಿಚಿತ ವಾಹನ ಡಿಕ್ಕಿ; ಕರು ಸಾವು
Covid ಗಿಂತ ಬಿಜೆಪಿ ಭ್ರಷ್ಟಾಚಾರದಿಂದ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ: ಖಂಡ್ರೆ
Delhi: ಕ್ಷುಲ್ಲಕ ಕಾರಣಕ್ಕೆ 19ರ ಯುವಕನ ಗುಂಡಿಕ್ಕಿ ಹ*ತ್ಯೆಗೈದ ಅಪ್ರಾಪ್ತರು!!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.