ಹೊಸಬರ ‘ವಿಧಿ 370’ಯಲ್ಲಿ ಜಮ್ಮು-ಕಾಶ್ಮೀರದ ನೈಜ ಚಿತ್ರಣ

Team Udayavani, Nov 6, 2022, 4:32 PM IST

art

ಶಶಿಕುಮಾರ್‌, ಶೃತಿ, ಶಿವರಾಮ್‌, ಪ್ರೊ. ದೊಡ್ಡರಂಗೇಗೌಡ, ಗಣೇಶ್‌ ರಾವ್‌ ಕೇಸರ್‌ರ್ಕರ್‌, ಕಿಲ್ಲರ್‌ ವೆಂಕಟೇಶ್‌, ಅವಿನಾಶ್‌ ಮೊದಲಾದ ಕಲಾವಿದರು ಮುಖ್ಯಭೂಮಿಕೆಯಲ್ಲಿ ಅಭಿನಯಿಸಿರುವ “ಆರ್ಟಿಕಲ್‌ (ವಿಧಿ) 370′ ಸಿನಿಮಾ ತೆರೆಗೆ ಬರಲು ಸಿದ್ಧವಾಗಿದೆ.

ಈಗಾಗಲೇ ಭರದಿಂದ ಸಿನಿಮಾದ ಪ್ರಚಾರ ಕಾರ್ಯಗಳಲ್ಲಿ ನಿರತವಾಗಿರುವ ಚಿತ್ರತಂಡ, ಇದೇ ನವೆಂಬರ್‌ 25ಕ್ಕೆ “ಆರ್ಟಿಕಲ್‌ 370′ ಸಿನಿಮಾವನ್ನು ತೆರೆಗೆ ತರುವ ಯೋಜನೆ ಹಾಕಿಕೊಂಡಿದೆ.

“ಲೈರಾ ಎಂಟರ್‌ಟೈನರ್‌’ ಬ್ಯಾನರ್‌ನಲ್ಲಿ ಭರತ್‌ ಗೌಡ ಮತ್ತು ಸಿ. ರಮೇಶ್‌ ನಿರ್ಮಿಸಿರುವ “ಆರ್ಟಿಕಲ್‌ 370′ ಚಿತ್ರಕ್ಕೆ ಕೆ. ಶಂಕರ್‌ ಕಥೆ, ಚಿತ್ರಕಥೆ, ಸಾಹಿತ್ಯ ಬರೆದು ನಿರ್ದೇಶನ ಮಾಡಿದ್ದಾರೆ. ಚಿತ್ರದ ಹಾಡುಗಳಿಗೆ ವಿನು ಮನಸು ಸಂಗೀತ ಸಂಯೋಜಿಸಿದ್ದು, ಸುಬ್ರಮಣಿ ಮತ್ತು ಸೌಮ್ಯ ಭಟ್‌ ಹಾಡುಗಳಿಗೆ ಧ್ವನಿಯಾಗಿದ್ದಾರೆ. ಚಿತ್ರಕ್ಕೆ ರವಿ ಚಂದ್ರು ಸೊಂಡೆಕೊಪ್ಪ ಛಾಯಾಗ್ರಹಣ, ಸಂಜೀವ ರೆಡ್ಡಿ ಸಂಕಲನ, ವೇಲು ಸಾಹಸವಿದೆ.

“ಆರ್ಟಿಕಲ್‌ 370′ ಸಿನಿಮಾದ ಬಿಡುಗಡೆಯ ಬಗ್ಗೆ ಮಾತನಾಡುವ ನಿರ್ದೇಶಕ ಕೆ. ಶಂಕರ್‌, “ಕಳೆದ ಎರಡು ತಿಂಗಳಿನಿಂದ “ಆರ್ಟಿಕಲ್‌ 370′ ಸಿನಿಮಾದ ಪ್ರಚಾರ ಕಾರ್ಯಗಳು ನಡೆಯುತ್ತಿದೆ. ಈಗಾಗಲೇ ಬಿಡುಗಡೆಯಾಗಿ ರುವ ನಮ್ಮ ಸಿನಿಮಾದ ಮೋಶನ್‌ ಪೋಸ್ಟರ್‌ಗೆ ಸಿನಿಪ್ರಿಯರಿಂದ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ. ಸಿನಿಮಾದ ಆಡಿಯೋ ರೈಟ್ಸ್‌ ಕೂಡ ಒಳ್ಳೆಯ ಮೊತ್ತಕ್ಕೆ ಸೇಲ್‌ ಆಗಿದೆ.

ತಮಿಳು, ತೆಲುಗಿನಿಂದಲೂ ಸಿನಿಮಾದ ಡಬ್ಬಿಂಗ್‌ ರೈಟ್ಸ್‌ಗೆ ಬೇಡಿಕೆ ಬರುತ್ತಿದೆ. ಇದೇ ನ. 25ಕ್ಕೆ ರಾಜ್ಯಾದ್ಯಂತ ಸುಮಾರು 100ಕ್ಕೂ ಹೆಚ್ಚಿನ ಕೇಂದ್ರಗಳಲ್ಲಿ ಸಿನಿಮಾ ಬಿಡುಗಡೆಗೆ ತಯಾರಿ ಮಾಡಿಕೊಂಡಿದ್ದೇವೆ’ ಎಂದು ಮಾಹಿತಿ ನೀಡಿದ್ದಾರೆ.

ಸದ್ಯ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ (ಆರ್ಟಿಕಲ್‌ 370) ವನ್ನು ರದ್ದುಗೊಳಿಸಿರುವ ಕೇಂದ್ರ ಸರ್ಕಾರ ಅದನ್ನು ಕೇಂದ್ರಾಡಳಿತ ಪ್ರದೇಶವಾಗಿ ಘೋಷಿಸಿದೆ. “ಆರ್ಟಿಕಲ್‌ 370′ ರದ್ದಾದ ನಂತರ ಜಮ್ಮು ಮತ್ತು ಕಾಶ್ಮೀರ ಈಗ ಹೇಗಿದೆ ಎಂಬುದನ್ನು ಈಗ “ಆರ್ಟಿಕಲ್‌ 370′ ಸಿನಿಮಾದ ಮೂಲಕ ತೆರೆಮೇಲೆ ಹೇಳುತ್ತಿದೆ ಚಿತ್ರತಂಡ.

ಸುಮಾರು 100 ದಿನಗಳ ಕಾಲ ಜಮ್ಮು ಮತ್ತು ಕಾಶ್ಮೀರ, ಶ್ರೀನಗರ, ಪೆಹಲ್‌ಗಾಂ, ಗುಲ್‌ವುರ್ಗ್‌, ನಾಡಿಮರ್ಗ್‌, ಮಡಿಕೇರಿ, ಚಿಕ್ಕಮಗಳೂರು, ಶ್ರವಣಬೆಳಗೊಳ, ರಾಮನಗರ ಸೇರಿದಂತೆ ಅನೇಕ ಕಡೆಗಳಲ್ಲಿ “ಆರ್ಟಿಕಲ್‌ 370′ ಸಿನಿಮಾದ ಚಿತ್ರೀಕರಣ ಮಾಡಲಾಗಿದೆ. ನೈಜ ಘಟನೆಗಳನ್ನು ಆಧರಿಸಿ ತೆರೆಗೆ ಬರುತ್ತಿರುವ “ಆರ್ಟಿಕಲ್‌ 360′ ಸಿನಿಮಾವನ್ನು ಸೈನಿಕರಿಗೆ, ಕಾಶ್ಮೀರಿ ಪಂಡಿತರಿಗೆ ಅರ್ಪಣೆ ಮಾಡುತ್ತಿದ್ದೇವೆ ಎಂಬುದು ಚಿತ್ರತಂಡದ ಮಾತು.

ಟಾಪ್ ನ್ಯೂಸ್

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Kannada Cinema: ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Vishnuvardhan: ನಟ ವಿಷ್ಣುವರ್ಧನ್‌ ಸಮಾಧಿ ದರ್ಶನ ವೇಳೆ ಗೊಂದಲ

Vishnuvardhan: ನಟ ವಿಷ್ಣುವರ್ಧನ್‌ ಸಮಾಧಿ ದರ್ಶನ ವೇಳೆ ಗೊಂದಲ

Kiccha sudeep: ಫೈರ್‌ ಸಂಸ್ಥೆ ಬಗ್ಗೆ ನನಗೆ ಗೊತ್ತಿಲ್ಲ; ನಟ ಸುದೀಪ್‌

Kiccha sudeep: ಫೈರ್‌ ಸಂಸ್ಥೆ ಬಗ್ಗೆ ನನಗೆ ಗೊತ್ತಿಲ್ಲ; ನಟ ಸುದೀಪ್‌

UI Movie: ತಲೆಯ ಹುಳ ತೆಗೆಯುವ ಸಿನಿಮಾ…: ಯು-ಐ ಬಗ್ಗೆ ಉಪ್ಪಿ ಮಾತು

UI Movie: ತಲೆಯ ಹುಳ ತೆಗೆಯುವ ಸಿನಿಮಾ…: ಯು-ಐ ಬಗ್ಗೆ ಉಪ್ಪಿ ಮಾತು

Gagana Kusuma: ಗಗನ ಕುಸುಮ ಟ್ರೇಲರ್‌ ಬಂತು

Gagana Kusuma: ಗಗನ ಕುಸುಮ ಟ್ರೇಲರ್‌ ಬಂತು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

1-japp

Japan ಆ್ಯನಿಮೇಟೆಡ್‌ ರಾಮಾಯಣ ಅ.18ಕ್ಕೆ ಮರು ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.