ಉಡುಪಿ : 10 ಸೆಂಟ್ಸ್ ವರೆಗಿನ ಭೂ ಪರಿವರ್ತನೆ ಅಧಿಕಾರ ಡಿಸಿಗೆ
Team Udayavani, Nov 6, 2022, 4:01 PM IST
ಉಡುಪಿ : ಪಿಟಿಸಿಎಲ್ ಕಾಯ್ದೆ ವ್ಯಾಪ್ತಿಗೆ ಒಳಪಡುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಮಂಜೂರಾದ ಜಮೀನಿನ ಕನ್ವರ್ಷನ್ ಸರಕಾರದ ಮಟ್ಟದಲ್ಲಿ ಆಗಬೇಕಿತ್ತು. ಇದೀಗ ಸರಕಾರ ರಾಜ್ಯಾದ್ಯಂತ ಎಸ್ಸಿ, ಎಸ್ಟಿ ಅವರಿಗೆ 10 ಸೆಂಟ್ಸ್/4 ಗುಂಟೆ ವರೆಗೆ ಸ್ವಂತ ವಾಸದ ಉದ್ದೇಶಕ್ಕೆ ಮನೆ ನಿರ್ಮಿಸಲು ಜಿಲ್ಲಾಧಿಕಾರಿ ಹಂತದಲ್ಲಿಯೇ ಭೂ ಪರಿವರ್ತನೆಗೆ ಅವಕಾಶ ನೀಡಿ ಸರಕಾರ ಆದೇಶ ಹೊರಡಿಸಿದೆ ಎಂದು ಶಾಸಕ ಕೆ. ರಘುಪತಿ ಭಟ್ ತಿಳಿಸಿದ್ದಾರೆ.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯದವರು ಪಿಟಿಸಿಎಲ್ ಕಾಯ್ದೆ ವ್ಯಾಪ್ತಿಗೆ ಒಳಪಡುವ ಜಮೀನುಗಳಲ್ಲಿ ಸ್ವಂತ ವಾಸ್ತವ್ಯದ ಉದ್ದೇಶಕ್ಕಾಗಿ ಭೂ ಪರಿವರ್ತನೆ ಮಾಡಲು ಅರ್ಜಿ ಸಲ್ಲಿಸಿದ್ದಲ್ಲಿ ಈ ಪ್ರಕ್ರಿಯೆಗಳು ಸರಕಾರದ ಹಂತದಲ್ಲಿ ವಿಳಂಬವಾಗಿ ಸಂಕಷ್ಟಕ್ಕೆ ಒಳಗಾಗುತ್ತಿದ್ದರು. ಸರಕಾರದ ಈ ಆದೇಶದಿಂದಾಗಿ ಎಸ್ಸಿ, ಎಸ್ಟಿ ಸಮುದಾಯದವರಿಗೆ ವಿಳಂಬವಾಗದೆ ಮನೆ ಕಟ್ಟಿಕೊಳ್ಳಲು ಅನುಕೂಲವಾಗುತ್ತದೆ. ಆದರೆ ಮಾರಾಟ ಮಾಡುವಂತಿಲ್ಲ. ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆಗೆ ಕಂದಾಯ ಸಚಿವ ಆರ್. ಅಶೋಕ್ ಕೊಕ್ಕರ್ಣೆಗೆ ಆಗಮಿಸಿದ್ದಾಗ ಈ ಬಗ್ಗೆ ಅವರ ಗಮನಕ್ಕೆ ತರಲಾಗಿದ್ದು, ವಿಧಾನಸಭೆಯಲ್ಲಿಯೂ ಇದನ್ನು ಪ್ರಸ್ತಾವ ಮಾಡಲಾಗಿತ್ತು ಎಂದು ಶಾಸಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಸ್ಕೂಟರಿಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ
Mangaluru: ಗುತ್ತಿಗೆದಾರ ಸಚಿನ್ ಪ್ರಕರಣ; ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್
Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.