ನಾಳೆಯಿಂದ – ಗುರುವಾರದವರೆಗೆ ಅಪ್ಪು ʼಗಂಧದ ಗುಡಿʼ ರಿಯಾಯಿತಿ ದರದಲ್ಲಿ ಪ್ರದರ್ಶನ
Team Udayavani, Nov 6, 2022, 7:50 PM IST
ಬೆಂಗಳೂರು: ಅಮೋಘ ವರ್ಷ ನಿರ್ದೇಶನದ ಅಪ್ಪು ಅಭಿನಯದ ʼಗಂಧದ ಗುಡಿʼ ಸಾಕ್ಷ್ಯ ಚಿತ್ರ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಸಿನಿರಂಗ, ಪ್ರೇಕ್ಷಕರು ಸಾಕ್ಷ್ಯ ಚಿತ್ರವನ್ನು ನೋಡಿ ಮೆಚ್ಚಿಕೊಂಡಿದ್ದಾರೆ.
ನಮ್ಮ ನಾಡಿನ ಜೀವ ವೈವಿಧ್ಯತೆಯನ್ನು ಸಾರುವ ʼಗಂಧದ ಗುಡಿʼಯನ್ನು ಎಲ್ಲರೂ ನೋಡಬೇಕು ಮಕ್ಕಳಿಗೆ ಉಚಿತವಾಗಿ ಸಾಕ್ಷ್ಯ ಚಿತ್ರವನ್ನು ತೋರಿಸಬೇಕೆನ್ನುವ ಕೂಗು ಕೇಳಿ ಬಂದಿತ್ತು. ಈ ಮಾತಿಗೆ ಸ್ವತಃ ಅಪ್ಪು ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರು ಸ್ಪಂದಿಸಿದ್ದಾರೆ.
ಈ ಬಗ್ಗೆ ಟ್ವೀಟ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ಗಂಧದಗುಡಿ ಅಪ್ಪು ರವರ ಒಂದು ಕನಸು ಕರ್ನಾಟಕದ ವನ್ಯ ಸಂಪತ್ತು ಹಾಗೂ ಪ್ರಕೃತಿ ಸೌಂದರ್ಯವನ್ನು ಕನ್ನಡಿಗರಿಗೆ ಪರಿಚಯಿಸುವ ಅವರ ಹಂಬಲ ಈ ಸಿನಿಮಾ ರೂಪಗೊಳ್ಳಲು ಕಾರಣ, ಅಪ್ಪು ಅವರ ಉದ್ದೇಶ ಈ ಸಿನಿಮಾ ಎಲ್ಲ ಕನ್ನಡಿಗರು ನೋಡಬೇಕೆಂಬುದು ಅದರಲ್ಲೂ ಮಕ್ಕಳು ನೋಡಬೇಕೆಂಬುದು, ಈ ಸಲುವಾಗಿ ನಾನು ಹಾಗೂ ಚಿತ್ರ ತಂಡ ಎಲ್ಲರೊಡನೆ ಚರ್ಚಿಸಿ ವಿತರಕರ ಹಾಗೂ ಪ್ರದರ್ಶಕರ ಸಹಕಾರದೊಂದಿಗೆ ನಮ್ಮ ಚಿತ್ರ ಗಂಧದಗುಡಿಯನ್ನು 07-11-2022 ಸೋಮವಾರದಿಂದ 10-11-2022 ಗುರುವಾರದವರೆಗೂ ಸಿಂಗಲ್ ಥೀಯೇಟರ್ ಗಳಲ್ಲಿ 56/- ರೂ.ಗಳಿಗೆ ಹಾಗೂ ಮಲ್ಟಿಫ್ಲೆಕ್ಸ್ ಗಳಲ್ಲಿ 112/- ರೂ ಗಳಿಗೆ ಕರ್ನಾಟಕ ರಾಜ್ಯಾದ್ಯಂತ ದಿನದ ಎಲ್ಲಾ ಆಟಗಳು ಪ್ರದರ್ಶನ ಮಾಡಬೇಕೆಂದು ನಿರ್ಧಾರ ಮಾಡಿದ್ದೇವೆ. ನಮ್ಮ ಮಕ್ಕಳ ನಾಳೆಗಳಿಗಾಗಿ ಕಾಡನ್ನು ಸಂರಕ್ಷಿಸೋಣ, ಗಂಧದಗುಡಿ ಯನ್ನು ತೋರಿಸೋಣ ಎಂದಿದ್ದಾರೆ.
ಸದ್ಯ ʼಗಂಧದ ಗುಡಿʼ ಎಲ್ಲೆಡೆ ಭರ್ಜರಿ ಪ್ರದರ್ಶನ ಕಾಣುತ್ತಿದೆ.
ನಾಡಿನ ಜನತೆಯಲ್ಲಿ ನನ್ನ ಒಂದು ಮನವಿ…
An appeal to all the people of the state.#GGKids #GGMovie #GandhadaGudi #DrPuneethRajkumar pic.twitter.com/tf01Kt2Alu
— Ashwini Puneeth Rajkumar (@Ashwini_PRK) November 6, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.