![Lalu](https://www.udayavani.com/wp-content/uploads/2025/02/Lalu-2-415x282.jpg)
![Lalu](https://www.udayavani.com/wp-content/uploads/2025/02/Lalu-2-415x282.jpg)
Team Udayavani, Nov 6, 2022, 9:33 PM IST
ಶ್ರೀನಗರ: ಗುಜರಾತ್ ಮತ್ತು ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮಾತ್ರ ಭಾರತೀಯ ಜನತಾ ಪಕ್ಷಕ್ಕೆ ಸವಾಲು ಹಾಕಬಲ್ಲದು, ಆದರೆ ಆಮ್ ಆದ್ಮಿ ಪಕ್ಷವು ಕೇವಲ ಪಕ್ಷವಾಗಿದೆ ಎಂದು ಮಾಜಿ ಕಾಂಗ್ರೆಸ್ ನಾಯಕ,ಡೆಮಾಕ್ರಟಿಕ್ ಆಜಾದ್ ಪಕ್ಷದ ಸ್ಥಾಪಕ ಗುಲಾಂ ನಬಿ ಆಜಾದ್ ಅವರು ಭಾನುವಾರ ಹೇಳಿಕೆ ನೀಡಿದ್ದಾರೆ.
ಕಾಂಗ್ರೆಸ್ ಪಕ್ಷದೊಂದಿಗೆ ದಶಕಗಳ ಕಾಲದ ಒಡನಾಟವನ್ನು ತೊರೆದ ತಿಂಗಳ ನಂತರ, ಆಜಾದ್ ”ನಾನು ಜಾತ್ಯತೀತತೆಯ ನೀತಿಯ ವಿರುದ್ಧವಲ್ಲ, ಅದರ ದುರ್ಬಲ ಪಕ್ಷದ ವ್ಯವಸ್ಥೆಗೆ ವಿರುದ್ಧವಾಗಿದ್ದೇನೆ” ಎಂದು ಹೇಳಿದ್ದಾರೆ.
ಶ್ರೀನಗರದಲ್ಲಿ ಎಎನ್‌ಐ ಜೊತೆ ಮಾತನಾಡಿ “ನಾನು ಕಾಂಗ್ರೆಸ್‌ನಿಂದ ಬೇರ್ಪಟ್ಟಿದ್ದರೂ, ಅವರ ಜಾತ್ಯತೀತ ನೀತಿಯ ವಿರುದ್ಧ ನಾನು ಇರಲಿಲ್ಲ. ಇದು ಪಕ್ಷದ ವ್ಯವಸ್ಥೆ ದುರ್ಬಲಗೊಳ್ಳುತ್ತಿರುವುದಕ್ಕೆ ಕಾರಣ.ಗುಜರಾತ್ ಮತ್ತು ಹಿಮಾಚಲ ಪ್ರದೇಶದ ವಿಧಾನಸಭಾ ಚುನಾವಣೆಗಳಲ್ಲಿ ಕಾಂಗ್ರೆಸ್ ಇನ್ನೂ ಉತ್ತಮ ಪ್ರದರ್ಶನ ನೀಡಬೇಕೆಂದು ನಾನು ಬಯಸುತ್ತೇನೆ” ಎಂದರು.
ಆಮ್ ಆದ್ಮಿ ಪಕ್ಷದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಆಜಾದ್, ”ಈ ರಾಜ್ಯಗಳಲ್ಲಿ ಆಮ್ ಆದ್ಮಿ ಪಕ್ಷವು ಏನನ್ನೂ ಮಾಡಲು ಸಾಧ್ಯವಿಲ್ಲ, ಅವರು ಪಂಜಾಬ್‌ನಲ್ಲಿ ವಿಫಲರಾಗಿದ್ದಾರೆ ಮತ್ತು ಪಂಜಾಬ್‌ನ ಜನರು ಮತ್ತೆ ಅವರಿಗೆ ಮತ ಹಾಕುವುದಿಲ್ಲ ಎಂದರು. ಎಎಪಿ ಕೇವಲ ದೆಹಲಿಯ ಪಕ್ಷವಾಗಿದೆ. ಪಂಜಾಬ್ ಅನ್ನು ಸಮರ್ಥವಾಗಿ ನಡೆಸಲು ಸಾಧ್ಯವಿಲ್ಲ, ಕಾಂಗ್ರೆಸ್ ಮಾತ್ರ ಗುಜರಾತ್ ಮತ್ತು ಹಿಮಾಚಲ ಪ್ರದೇಶದಲ್ಲಿ ಬಿಜೆಪಿಗೆ ಸವಾಲು ಹಾಕುತ್ತದೆ ಏಕೆಂದರೆ ಅವರು ಎಲ್ಲರನ್ನೂ ಒಳಗೊಳ್ಳುವ ನೀತಿಯನ್ನು ಹೊಂದಿದ್ದಾರೆ” ಎಂದರು.
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
You seem to have an Ad Blocker on.
To continue reading, please turn it off or whitelist Udayavani.