ಜನಸಂಕಲ್ಪ ಯಾತ್ರೆ ಪುನರಾರಂಭ; ಉಡುಪಿ ಜಿಲ್ಲೆಗೂ ಬರಲಿದ್ದಾರೆ ಸಿಎಂ
Team Udayavani, Nov 7, 2022, 6:25 AM IST
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಜೋಡಿ ನೇತೃತ್ವದ ಎರಡನೇ ಹಂತದ ಜನಸಂಕಲ್ಪ ಯಾತ್ರೆ ಸೋಮವಾರದಿಂದ ಪುನರಾರಂಭಗೊಳ್ಳಲಿದೆ. ಉಡುಪಿ, ಗದಗ, ಹಾವೇರಿ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಜನಸಂಕಲ್ಪ ಯಾತ್ರೆ ನಡೆಯಲಿದೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವ ರಾಜ ಬೊಮ್ಮಾಯಿ, ಸೋಮವಾರದಿಂದ ಎರಡನೇ ಹಂತದ ಜನಸಂಕಲ್ಪ ಯಾತ್ರೆ ಆರಂಭಗೊಳ್ಳಲಿದೆ. ಸತತ ಮೂರು ದಿನ ಕಾರ್ಯಕ್ರಮಗಳಿವೆ.
ಡಿಸೆಂಬರ್‌ವರೆಗೆ ಜನಸಂಕಲ್ಪ ಯಾತ್ರೆ ಮುಂದುವರಿಯಲಿದೆ. ಅಭೂತಪೂರ್ವ ಬೆಂಬಲ ಎಲ್ಲೆಡೆ ದೊರೆಯುತ್ತಿದೆ. ಈ ಬಾರಿ ಮುಂಬಯಿ ಕರ್ನಾಟಕದಲ್ಲಿ ಪ್ರವಾಸ ಮಾಡುತ್ತಿದ್ದು, ಇದು ನಮ್ಮ ಮುಂದಿನ ವಿಜಯಕ್ಕೆ ಪುಷ್ಟಿ ನೀಡುತ್ತಿದೆ ಎಂದರು.
ಎಸ್ಸಿ-ಎಸ್ಟಿ ಸಮಾವೇಶ
ನವೆಂಬರ್ 20ರಂದು ಬಳ್ಳಾರಿಯಲ್ಲಿ ಎಸ್.ಟಿ. ಮೋರ್ಚಾ ಹಾಗೂ ನ. 30ರಂದು ಮೈಸೂರಿನಲ್ಲಿ ಎಸ್.ಸಿ. ಮೋರ್ಚಾ ಸಮಾವೇಶ ಹಮ್ಮಿಕೊಳ್ಳಲಾಗುವುದು ಎಂದು ಇದೇ ವೇಳೆ ಸಿಎಂ ತಿಳಿಸಿದರು.
ನ. 11ಕ್ಕೆ ಪ್ರಧಾನಿ ಭೇಟಿ
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ನವೆಂಬರ್ 11ರಂದು ರಾಜ್ಯಕ್ಕೆ ಆಗಮಿಸಲಿದ್ದು, ಮೂರು ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ವಂದೇ ಭಾರತ್ – ಚೆನ್ನೈ- ಮೈಸೂರು- ಬೆಂಗಳೂರು ರೈಲನ್ನು ಉದ್ಘಾಟಿಸಲಿದ್ದಾರೆ. ಇದು ಬಹಳ ದಿನಗಳ ನಮ್ಮ ಬೇಡಿಕೆಯಾದ ಹೈಸ್ಪೀಡ್ ರೈಲನ್ನು ಪ್ರಧಾನಿಗಳು ಈಡೇರಿಸುತ್ತಿದ್ದಾರೆ. ಜತೆಗೆ ಕೆಂಪೇಗೌಡ ಅಂತಾರಾಷ್ಟ್ರೀಯ ನಿಲ್ದಾಣದಲ್ಲಿ ಟರ್ಮಿನಲ್ ಉದ್ಘಾಟಿಸಲಿದ್ದಾರೆ.
ಬೆಂಗಳೂರಿಗೆ ಆಗಮಿಸುವ ಅಂತರರಾಷ್ಟ್ರೀಯ ಪ್ರಯಾಣಿಕರ ಸಂಖ್ಯೆ ದೊಡ್ಡ ಪ್ರಮಾಣದಲ್ಲಿ ಇದ್ದು, 25 ಲಕ್ಷ ಜನರನ್ನು ನಿಭಾಯಿಸುವ ಸಾಮರ್ಥ್ಯವುಳ್ಳ, ನೂರು ಕೌಂಟರ್‌ಗಳುಳ್ಳ ಅಂತಾರಾrಷ್ಟ್ರೀಯ ಟರ್ಮಿನಲ್ ಉದ್ಘಾಟನೆಯಾಗುತ್ತಿದೆ.
ಎರಡೂ ಟರ್ಮಿನಲ್ ಕೂಡಿದರೆ, ದಿಲ್ಲಿಯ ಅನಂತರ ದೇಶದ ಅತೀ ದೊಡ್ಡ ವಿಮಾನ ನಿಲ್ದಾಣವಾಗಲಿದೆ. ಕರ್ನಾಟಕ ಮತ್ತು ಬೆಂಗಳೂರಿನ ಅಭಿವೃದ್ಧಿಗೆ ಪೂರಕವಾಗಲಿದೆ.
ಪ್ರವಾಸೋದ್ಯಮ, ಕೈಗಾರಿಕೆ, ಐ.ಟಿ., ಬಿ.ಟಿ., ಆರ್.ಆ್ಯಂಡ್ ಡಿ ವಲಯಗಳಿಗೂ ದೊಡ್ಡ ಅನುಕೂಲ ವಾಗಲಿದೆ ಇದೇ ವೇಳೆ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.
ಕೆಂಪೇಗೌಡರ ಪ್ರತಿಮೆಯೂ ಅನಾವರಣ
ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಪ್ರತಿಮೆ ಅನಾವರಣವಾಗುತ್ತಿದೆ. ಕೆಂಪೇಗೌಡರು ವಿಕಾಸ ಪುರುಷರು. ಹೀಗಾಗಿ ಪ್ರತಿಮೆಗೆ ಪ್ರಗತಿಯ ಪ್ರತಿಮೆ ಎಂದು ಹೆಸರಿಡಲಾಗಿದೆ. ಇಡೀ ದೇಶವನ್ನು ಪ್ರಗತಿಯತ್ತ ಕೊಂಡೊಯ್ಯುತ್ತಿರುವ ಪ್ರಧಾನಿಗಳಿಂದ ಇದು ಉದ್ಘಾಟನೆಯಾಗುತ್ತಿರುವುದು ಅತ್ಯಂತ ಯೋಗ್ಯವಾಗಿದೆ. ಅನಂತರ ಸಾರ್ವಜನಿಕ ಕಾರ್ಯಕ್ರಮವಿರಲಿದೆ ಎಂದು ಸಿಎಂ ಹೇಳಿದರು.ರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್ ಯಡಿಯೂರಪ್ಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್
Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ
Renukaswamy Case: ದರ್ಶನ್ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್ ಯಡಿಯೂರಪ್ಪ
Kannada: ಕನ್ನಡ ನಾಡಲ್ಲಿ ಪ್ರತಿದಿನವೂ ನಿತ್ಯೋತ್ಸವವಿರಲಿ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.