ಉದ್ದಿಮೆ ಆರಂಭಿಸಲು ಆರ್ಥಿಕ ನೆರವು


Team Udayavani, Nov 7, 2022, 3:02 PM IST

TDY-8

ಮೈಸೂರು: ಸ್ವಂತ ಉದ್ಯಮ ಆರಂಭಿಸುವ ಅಭಿಲಾಷೆ ಹೊಂದಿರುವವರಿಗೆ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಉತ್ತೇಜನ ನೀಡು ತ್ತಿದ್ದು, ಅಗತ್ಯ ತರಬೇತಿಯೊಂದಿಗೆ ಉದ್ದಿಮೆ ಆರಂಭಿಸಲು ಬೇಕಾದ ಆರ್ಥಿಕ ನೆರವನ್ನೂ ನೀಡುತ್ತಿದೆ.

ಕೇಂದ್ರ, ರಾಜ್ಯ ಸರ್ಕಾರದ ಸಹಯೋಗದಲ್ಲಿ ಪಶು ಪಾಲನಾ ಉದ್ಯಮಶೀಲತಾ ಅಭಿವೃದ್ಧಿ ಕಾರ್ಯ ಕ್ರಮಗಳಿಗೆ ಆರ್ಥಿಕ ನೆರವು ನೀಡಲಾಗುತ್ತಿದ್ದು, ದಸರಾ ವಸ್ತುಪ್ರದರ್ಶನ ಆವರಣದಲ್ಲಿ ತೆರೆದಿರುವ ಪಶುಪಾಲನಾ ಇಲಾಖೆಯ ಮಳಿಗೆಯಲ್ಲಿ ತರಬೇತಿ ನೀಡಲಾಗುತ್ತಿದೆ. ಪ್ರತಿದಿನ ಮಳಿಗೆಗೆ ಭೇಟಿ ನೀಡುವ ಉದ್ಯಮ ಆಕಾಂಕ್ಷಿಗಳಿಗೆ ಅರ್ಥಗಂಟೆ ತರಬೇತಿ ನೀಡುವುದರ ಜತೆಗೆ, ಅಗತ್ಯ ಮಾಹಿತಿಗಳನ್ನು ಒದಗಿಸಲಾಗುತ್ತಿದೆ. ಮಳಿಗೆ ತೆರೆದಾಗಿನಿಂದ ದಿನನಿತ್ಯ ನೂರಾರು ಮಂದಿ ಭೇಟಿ ನೀಡುತ್ತಿದ್ದು, ಉದ್ಯಮದಲ್ಲಿ ಆಸಕ್ತಿ ಇರುವವರು ಯೋಜನೆಗಳ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ.

ಯಾವ್ಯಾವ ಯೋಜನೆ?: ಪಶು ಸಂಗೋಪನೆ ಮೂಲಭೂತ ಸೌಲಭ್ಯಗಳ ಅಭಿವೃದ್ಧಿ ನಿಧಿ, ರಾಷ್ಟ್ರೀಯ ಜಾನುವಾರು ಮಿಷನ್‌ ಯೋಜನೆ, ಪ್ರಧಾನಮಂತ್ರಿಗಳ ಅತಿ ಸಣ್ಣ ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮ ಬದ್ಧಗೊಳಿಸುವಿಕೆ ಯೋಜನೆಯಡಿ ಆರ್ಥಿಕ ನೆರವು ನೀಡಲಾಗುತ್ತಿದೆ. ಹಾಲಿನ ಉತ್ಪನ್ನಗಳ ಸಂಸ್ಕರಣೆ, ಮೌಲ್ಯವರ್ಧನಾ ಘಟಕ ಸ್ಥಾಪನೆ, ಪಾಸ್ಪೇಟ್‌ ಅಮೃದ್ಧ ಸಾವಯವ ಗೊಬ್ಬರ ಉತ್ಪಾದನೆ, ಜೈವಿಕ ಸಂಕುಚಿತ ಸಾರಜನಕ ಅನಿಲ ಉತ್ಪಾದನೆ ಘಟಕ, ಹಸುವಿನ ಸಗಣಿ ಮತ್ತು ಮೂತ್ರಗಳ ಶೇಖರಣೆ ಮತ್ತು ಮೌಲ್ಯವರ್ಧನ ಘಟಕ ಸ್ಥಾಪನೆಗೆ ಯೋಜನಾ ಮೊತ್ತದ ಶೇ.90ರಷ್ಟು ಸಾಲವನ್ನು ಶೇ.3ರ ಬಡ್ಡಿ ದರದಲ್ಲಿ ಪಡೆಯಬಹುದಾಗಿದೆ.

ಆರ್ಥಿಕ ನೆರವು: ಕೇಂದ್ರ ಸರ್ಕಾರ ಸಂಘಟಿತ ವಲಯದಲ್ಲಿನ ರೈತರು, ಉದ್ಯಮಿಗಳನ್ನು ಸಂಘಟಿತ ವಲಯಕ್ಕೆ ಕರೆದೊಯ್ಯುವ ನಿಟ್ಟಿನಲ್ಲಿ ಅವರ ಉದ್ದಿಮೆ ಗಳನ್ನು ಲಾಭದಾಯಕವನ್ನಾಗಿಸಲು ಜಾನುವಾರು ಉತ್ಪನ್ನ ಹೆಚ್ಚಿಸುವುದು, ಉತ್ತಮ ಗುಣಮಟ್ಟದ, ಮೌಲ್ಯವರ್ಧಿತ ಜಾನುವಾರುಗಳ ಉತ್ಪನ್ನಗಳನ್ನು ಒದಗಿಸಿ ಯುವಜನತೆಗೆ ಉದ್ಯೋಗ ಸೃಷ್ಟಿಸುವುದು ಹಾಗೂ ರೈತರ ಆದಾಯ ದ್ವಿಗುಣಗೊಳಿಸಲು ಹಲವು ಯೋಜನೆಗಳಿಗೆ ಆರ್ಥಿಕ ನೆರವು ನೀಡುತ್ತಿದೆ. ರಾಷ್ಟ್ರೀಯ ಜಾನುವಾರು ಮಿಷನ್‌ ಯೋಜನೆಯ ಉದ್ಯಮಶೀಲತೆ ಅಭಿವೃದ್ಧಿ ಕಾರ್ಯಕ್ರಮದಡಿ ಗ್ರಾಮೀಣ ಕೋಳಿ ಸಾಕಾಣಿಕೆ, ಕುರಿ-ಮೇಕೆ ತಳಿ ಸಂವರ್ಧನಾ ಘಟಕ, ಹಂದಿ ತಳಿ ಸಂವರ್ಧನಾ ಘಟಕ, ರಸಮೇವು ಉತ್ಪಾದನಾ ಘಟಕ ನಿರ್ಮಾಣಕ್ಕೆ ಶೇ.50ರಷ್ಟು ಸಹಾಯಧನ ನೀಡಲಾಗುತ್ತದೆ.

ಸಲ್ಲಿಸಬೇಕಾದ ದಾಖಲಾತಿಗಳೇನು?: ಎಲ್ಲಾ ಯೋಜನೆಗಳಿಗೂ ಯೋಜನಾ ವರದಿ, ಭೂ ದಾಖಲೆಗಳು, ಘಟಕ ಸ್ಥಾಪಿಸಲು ಉದ್ದೇಶಿಸಿ ರುವ ಸ್ಥಳದ ಜಿಪಿಎಸ್‌ ಫೋಟೋ, ಪಾನ್‌ಕಾರ್ಡ್‌, ಆಧಾರ್‌ಕಾರ್ಡ್‌, ಚುನಾವಣಾ ಗುರುತಿನ ಚೀಟಿ, 3 ವರ್ಷಗಳ ಆದಾಯ ತೆರಿಗೆ ಪಾವತಿಸಿರುವ ವರದಿ, 6 ತಿಂಗಳ ಬ್ಯಾಂಕ್‌ ವಹಿವಾಟು, ರದ್ದುಪಡಿಸಿದ ಬ್ಯಾಂಕ್‌ ಚೆಕ್‌, ಪಾಸ್‌ಪೋರ್ಟ್‌ ಅಳತೆಯ ಫೋಟೋ, ವಿದ್ಯಾರ್ಹತೆಯ ಪ್ರಮಾಣ ಪತ್ರ, ತರಬೇತಿ ಪ್ರಮಾಣ ಪತ್ರ, ಅನುಭವ ಹೊಂದಿರುವ ಪ್ರಮಾಣಪತ್ರ ಸಲ್ಲಿಸಬೇಕು.

ಪಶುಪಾಲನಾ ಉದ್ಯಮ ಶೀಲತೆ ಯೋಜನೆಯಡಿ ಉದ್ದಿಮೆ ಆರಂಭಿಸುವವರಿಗೆ ವಸ್ತುಪ್ರದರ್ಶನ ಆವರಣದಲ್ಲಿರುವ ಇಲಾಖೆಯ ಮಳಿಗೆಯಲ್ಲಿ ತರಬೇತಿ ನೀಡಲಾಗುತ್ತಿದೆ. ಸಬ್ಸಿಡಿಯೊಂದಿಗೆ ಬ್ಯಾಂಕ್‌ ಸಾಲವನ್ನೂ ಕೊಡಿಸಲಾಗುತ್ತದೆ. ಯುವಕರು, ಸ್ವಂತ ಉದ್ದಿಮೆ ಆರಂಭಿಸಲು ಆಸಕ್ತಿ ಇರುವವರು ಇದರ ಸದುಪಯೋಗ ಪಡೆದುಕೊಳ್ಳಬಹುದು. ● ಡಾ.ಷಡಕ್ಷರಮೂರ್ತಿ, ಉಪ ನಿರ್ದೇಶಕ, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ

-ಸತೀಶ್‌ ದೇಪುರ

ಟಾಪ್ ನ್ಯೂಸ್

supreem

Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್

BGT Series: Indians Should not forget the battle of Pujara at the Gabba

BGT Series: ಚೇತೇಶ್ವರ ಪೂಜಾರ ಅಂದು ತಿಂದ ಪೆಟ್ಟಿನ ನೋವು ಭಾರತೀಯರು ಮರೆಯುವುದುಂಟೇ?

Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ

Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ

ಹೋಟೆಲ್ ಕೊಠಡಿಯಲ್ಲೇ ಹಿರಿಯ ವೈದ್ಯ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Cricket: ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಲ್ಲೇ ಖಚಿತ; ತನ್ನ ನಿರ್ಧಾರ ತಿಳಿಸಿದ ಬಿಸಿಸಿಐ

Cricket: ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಲ್ಲೇ ಖಚಿತ; ತನ್ನ ನಿರ್ಧಾರ ತಿಳಿಸಿದ ಬಿಸಿಸಿಐ

Aligarh ಮುಸ್ಲಿಮ್‌ ವಿವಿ  ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ

Aligarh ಮುಸ್ಲಿಮ್‌ ವಿವಿ  ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ

Rakesh Adiga in Maryade Prashne movie

Rakesh Adiga: ನಾನು ಮಿಡಲ್‌ ಕ್ಲಾಸ್‌ ಹುಡುಗ ಮರ್ಯಾದೆ ಉಳಿಸಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಡಾ ನಿವೇಶನ 50:50 ಹಂಚಿಕೆ ರದ್ದು ತೀರ್ಮಾನ

MUDA; 50:50 ಹಂಚಿಕೆ ರದ್ದು ತೀರ್ಮಾನ; ನ್ಯಾ| ದೇಸಾಯಿ ಆಯೋಗದ ವರದಿ ಬಳಿಕ ನಿವೇಶನ ವಾಪಸ್‌

Loka-SP-Udesh–CM

MUDA Case: ಉತ್ತರ ತಾಳೆಯಾಗದೆ ಇದ್ದರೆ ಮತ್ತೆ ಸಿಎಂ ವಿಚಾರಣೆ: ಲೋಕಾಯುಕ್ತ ಎಸ್ಪಿ ಉದೇಶ್‌

CM-siddu

MUDA Case: ಲೋಕಾಯುಕ್ತ ಪೊಲೀಸರು ಮತ್ತೆ ವಿಚಾರಣೆಗೆ ಬರಲು ಹೇಳಿಲ್ಲ: ಸಿಎಂ ಸಿದ್ದರಾಮಯ್ಯ

2-hunsur

Hunsur: ಗೃಹಿಣಿ ನಾಪತ್ತೆ :ದೂರು ದಾಖಲು; ಪತ್ತೆಗಾಗಿ ಮನವಿ

CM-Siddu-High-Court

MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

supreem

Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್

sirsi

Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ

Yathanaa

Waqf Property: ಸಚಿವ ಜಮೀರ್‌ ಅಶ್ವಮೇಧ ಕುದುರೆ ತಡೆದಿದ್ದೇನೆ: ಶಾಸಕ ಯತ್ನಾಳ್‌

ಐತಿಹಾಸಿಕ ಮುಡಗೇರಿ ಗ್ರಾಮ ನಿರ್ಲಕ್ಷ್ಯ; ಸೋದೆ ಅರಸರ ಕೋಟೆ ಪಳೆಯುಳಿಕೆ

ಐತಿಹಾಸಿಕ ಮುಡಗೇರಿ ಗ್ರಾಮ ನಿರ್ಲಕ್ಷ್ಯ; ಸೋದೆ ಅರಸರ ಕೋಟೆ ಪಳೆಯುಳಿಕೆ

BGT Series: Indians Should not forget the battle of Pujara at the Gabba

BGT Series: ಚೇತೇಶ್ವರ ಪೂಜಾರ ಅಂದು ತಿಂದ ಪೆಟ್ಟಿನ ನೋವು ಭಾರತೀಯರು ಮರೆಯುವುದುಂಟೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.