ಬಾದಾಮಿಯಲ್ಲಿ ಸ್ಪರ್ಧಿಸಲ್ಲ: ವಿಪಕ್ಷ ನಾಯಕ ಸಿದ್ದರಾಮಯ್ಯ
ಕಾರ್ಯಕರ್ತರು ಒತ್ತಾಯಿಸುತ್ತಿದ್ದರೂ ಮನಸ್ಸು ಒಪ್ಪುತ್ತಿಲ್ಲ
Team Udayavani, Nov 8, 2022, 6:45 AM IST
ಬೆಳಗಾವಿ: ಬಾದಾಮಿ ಕ್ಷೇತ್ರ ಭೌಗೋಳಿಕವಾಗಿ ದೂರ ಇರುವುದರಿಂದ ಅಲ್ಲಿಯ ಜನರಿಗೆ ನ್ಯಾಯ ಒದಗಿಸಲು ಆಗುತ್ತಿಲ್ಲ. ಹೀಗಾಗಿ ಕ್ಷೇತ್ರ ಬಿಡುವ ಚಿಂತನೆ ಮಾಡಿದ್ದೇನೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.
ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಬಾದಾಮಿ ಕ್ಷೇತ್ರದಿಂದಲೇ ಸ್ಪರ್ಧೆಗೆ ಹೆಚ್ಚಿನ ಒತ್ತಡ ಇದೆ. ಸಾವಿರಾರು ಮಹಿಳೆಯರು ಮನೆ ಎದುರು ಪ್ರತಿಭಟನೆ ಮಾಡುವುದಾಗಿ ಹೇಳಿದ್ದಾರೆ. ಅಭಿಮಾನಿಗಳು ಪತ್ರ ಬರೆಯುತ್ತಿದ್ದಾರೆ. ನೀವು ಕ್ಷೇತ್ರಕ್ಕೆ ಭೇಟಿ ನೀಡದಿದ್ದರೂ ನಡೆಯುತ್ತದೆ ಎನ್ನುತ್ತಿದ್ದಾರೆ. ನನಗೆ ಮನಸ್ಸು ಒಪ್ಪುತ್ತಿಲ್ಲ. ಕೋಲಾರ, ಚಾಮರಾಜಪೇಟೆಯಿಂದ ಸ್ಪರ್ಧೆಗೆ ಆಹ್ವಾನ ಬಂದಿದೆ. ವರುಣಾದಿಂದ ಸ್ಪರ್ಧಿಸುವಂತೆ ನಮ್ಮ ಮಗ ಹೇಳುತ್ತಿದ್ದಾನೆ. ಚಾಮರಾಜಪೇಟೆಯಿಂದ ನಿಂತುಕೊಳ್ಳುವಂತೆ ಜಮೀರ್ ಹೇಳುತ್ತಿದ್ದಾನೆ. ಆದರೆ, ನನ್ನ ಸ್ಪರ್ಧೆ ಬಗ್ಗೆ ಪಕ್ಷ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧ. ಯಾವುದೇ ಕ್ಷೇತ್ರ ಇಲ್ಲದಿದ್ದರೂ ಬಹಳಷ್ಟು ಜನರು ನನ್ನನ್ನು ಆಹ್ವಾನಿಸುತ್ತಿದ್ದಾರೆ. ಬಿಜೆಪಿಯವರಿಗೆ ಬುದ್ಧಿ ಇಲ್ಲ ಎಂದರು.
ವೈಯಕ್ತಿಕವಾಗಿ ಸಿ.ಎಂ.ಇಬ್ರಾಹಿಂ ಒಳ್ಳೆಯ ಗೆಳೆಯ. ಆದರೆ ನಮ್ಮನ್ನು ಬಿಟ್ಟು ಜೆಡಿಎಸ್‌ಗೆ ಹೋಗಿ ಅಧ್ಯಕ್ಷರಾಗಿದ್ದಾರೆ. ಅವರು ಭದ್ರಾವತಿಗೆ ಜೆಡಿಎಸ್‌ನಿಂದ ನಿಂತುಕೊಳ್ಳಲಿ. ನಾನು ಎಲ್ಲಿ ನಿಂತುಕೊಳ್ಳಬೇಕು ಅಂತ ಪಕ್ಷ ತೀರ್ಮಾನ ಮಾಡುತ್ತದೆ, ಜೆಡಿಎಸ್ ಅಲ್ಲ. ನಾನು ಒಬ್ಬಂಟಿ ಅಲ್ಲ. ಲಕ್ಷ್ಮೀ ಹೆಬ್ಟಾಳಕರ, ಅಂಜಲಿ ನಿಂಬಾಳಕರ, ಫಿರೋಜ್ ಸೇಠ್ , ಎಂ.ಬಿ.ಪಾಟೀಲ್ ಸೇರಿದಂತೆ ಎಲ್ಲ ಧರ್ಮದವರು, ಜಾತಿಯವರು ನನ್ನ ಜತೆ ಇದ್ದಾರೆ. ಜನಾರ್ದನ ರೆಡ್ಡಿ ಕಾಂಗ್ರೆಸ್‌ಗೆ ಬರುವ ಕುರಿತು ನನ್ನ ಜತೆ ಚರ್ಚಿಸಿಲ್ಲ ಎಂದರು.
ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಸಂಬಂಧ ಐವರು ನ್ಯಾಯಮೂರ್ತಿಗಳು ಕೂಡಿ ಮಾಡಿದ ತೀರ್ಮಾನ ಅಲ್ಲ. ಮೂವರು ನ್ಯಾಯಮೂರ್ತಿಗಳು ಒಂದು ತರಹ, ಇಬ್ಬರು ಒಂದು ತರಹ ತೀರ್ಪು ನೀಡಿದ್ದಾರೆ. ಇದು ನನ್ನ ಅಭಿಪ್ರಾಯ, ನಾನು ಜಡ್ಜ್ಮೆಂಟ್ ಮೇಲೆ ಹೇಳುತ್ತಿಲ್ಲ. ಅವರು ಕಾನೂನು ಪ್ರಕಾರ ತೀರ್ಪು ನೀಡಿದ್ದಾರೆ. ನಾನು ಸಂವಿಧಾನದಲ್ಲಿ ಅರ್ಥ ಮಾಡಿಕೊಂಡ ಪ್ರಕಾರ ಆರ್ಥಿಕವಾಗಿ ಹಿಂದುಳಿದವರಿಗೆ ಮೀಸಲಾತಿ ನೀಡಬೇಕು ಅಂತ ಆರ್ಟಿಕಲ್ 15 ಆಗಲಿ, ಆರ್ಟಿಕಲ್ 16 ಆಗಲಿ ಹೇಳುವುದಿಲ್ಲ. ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿ ಕೊಡಬೇಕು ಅಂತ ಹೇಳುತ್ತದೆ. ಆದೇಶದ ತೀರ್ಪು ಪ್ರತಿ ಬಂದ ಮೇಲೆ ಮಾತನಾಡುತ್ತೇನೆ ಎಂದರು.
ವಿನಯ ಕುಲಕರ್ಣಿಗೆ ಶೀಘ್ರ ಕ್ಲೀನ್‌ಚಿಟ್
ವಿನಯ ಕುಲಕರ್ಣಿ ಕೊಲೆ ಆರೋಪಿ. ಅದ್ಧೂರಿ ಜನ್ಮದಿನ ಮೂಲಕ ಏನು ಸಂದೇಶ ಕೊಡ್ತಿದ್ದಾರೆ ಎಂದು ಪ್ರಶ್ನಿಸುವ ಬಿಜೆಪಿಗೆ ಅಮಿತ್ ಶಾ ಮೇಲೆಯೂ ಕೊಲೆ ಆರೋಪ ಇದೆ. ಅವರು ಗಡಿಪಾರು ಆಗಿದ್ದರು. ಈಗ ಗೃಹ ಸಚಿವರಾಗಿದ್ದಾರೆ ಎಂಬುದು ಗೊತ್ತಿಲ್ಲವೇ? ಅಮಿತ್ ಶಾಗೆ ಕ್ಲೀನ್‌ಚಿಟ್ ಸಿಕ್ಕಂತೆ ವಿನಯ ಕುಲಕರ್ಣಿಗೂ ಕ್ಲೀನ್‌ಚಿಟ್ ಸಿಗುತ್ತದೆ. ಬೇಕಾದಷ್ಟು ಜನರ ಮೇಲೆ ಮರ್ಡರ್ ಕೇಸ್ ಇದೆ, ಎಂಎಲ್‌ಎ ಆಗಿದ್ದಾರೆ, ಎಂಪಿ ಆಗಿದ್ದಾರೆ. ಅಪರಾಧ ಸಾಬೀತಾಗುವರೆಗೂ ಅವರು ಅಮಾಯಕರು. ಅಪರಾಧ ಸಾಬೀತಾಗುವವರೆಗೂ ಎಲ್ಲ ಆರೋಪಿಗಳು ಅಮಾಯಕರು ಎಂದು ಸಿದ್ದರಾಮಯ್ಯ ಹೇಳಿದರು.
ಬೊಮ್ಮಾಯಿ-ಬಿಎಸ್‌ವೈ ಸಂಬಂಧ ಹಳಸಿದೆ
ಸಿದ್ದರಾಮಯ್ಯ-ಡಿಕೆಶಿ ಸಂಬಂಧ ಸರಿ ಇಲ್ಲ ಎಂಬ ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಸಂಬಂಧ ಚೆನ್ನಾಗಿದೆಯಾ ಅಂತಾ ಗೊತ್ತಾ. ಬೊಮ್ಮಾಯಿ, ಯಡಿಯೂರಪ್ಪ ಸಂಬಂಧ ಹಳಸಿ ಹೋಗಿದೆ. ಆದರೆ, ಡಿಕೆಶಿ ನಾನು ಚೆನ್ನಾಗಿದ್ದೇವೆ ಎಂದು ನಸುನಕ್ಕರು.
ಮುಂದಿನ ಸಿಎಂ ಸಿದ್ದರಾಮಯ್ಯ ಎಂಬ ಘೋಷಣೆ
ಇಲ್ಲಿಯ ವಿಮಾನ ನಿಲ್ದಾಣದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಬರುತ್ತಿದ್ದಂತೆ ಮುಂದಿನ ಸಿಎಂ ಸಿದ್ದರಾಮಯ್ಯ ಎಂಬ ಘೋಷಣೆ ಮೊಳಗಿತು. ಸಿದ್ದರಾಮಯ್ಯ ಅಭಿಮಾನಿಗಳು, ಕಾಂಗ್ರೆಸ್ ಕಾರ್ಯಕರ್ತರು ಮುಂದಿನ ಸಿಎಂ ಘೋಷಣೆ ಕೂಗಿದರು. ಮಾಧ್ಯಮ ಗ್ಯಾಲರಿಗೆ ಬರುತ್ತಿದ್ದಂತೆ ಅಭಿಮಾನಿಗಳ ಘೋಷಣೆ ಮೊಳಗಿತು. ಕ್ಯಾಮೆರಾಗಳು ಕಾಣಿಸುತ್ತಿದ್ದಂತೆ ಕಾರ್ಯಕರ್ತರು ಜೋರಾಗಿ ಕೂಗಿದಾಗ, ಸುಮ್ಮನಿರಪ್ಪ ಎಂದು ಅಭಿಮಾನಿಗಳನ್ನು ಸಿದ್ದರಾಮಯ್ಯ ಗದರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudigere; ಕಾಫಿ ಎಸ್ಟೇಟ್ ನಲ್ಲಿ ಕಾಡುಕೋಣ ದಾಳಿ: ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಮೃ*ತ್ಯು
Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ
Naxalites ಶರಣಾಗತಿಯಲ್ಲಿ ಟ್ವಿಸ್ಟ್; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ
Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ
Naxalites; ಶರಣಾಗತಿ ಪ್ಯಾಕೇಜ್ ಬೆಚ್ಚಿಬೀಳಿಸಿದೆ: ಸುನಿಲ್ ಕುಮಾರ್ ತೀವ್ರ ಆಕ್ರೋಶ
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Gangolli: ಮರದ ದಿಮ್ಮಿಗೆ ಡಿಕ್ಕಿ ಹೊಡೆದ ಮೀನುಗಾರಿಕಾ ದೋಣಿ
BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್
Mudigere; ಕಾಫಿ ಎಸ್ಟೇಟ್ ನಲ್ಲಿ ಕಾಡುಕೋಣ ದಾಳಿ: ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಮೃ*ತ್ಯು
Bajpe: ಕೆಂಜಾರು ಹಾಸ್ಟೆಲ್ ಕೊಳಚೆ ನೀರು ಖಾಸಗಿ ಜಾಗಕ್ಕೆ; ಸುತ್ತಮುತ್ತ ದುರ್ವಾಸನೆ
Kaikamba: ದೊಡ್ಡಳಿಕೆ ಅಣೆಕಟ್ಟಿನಿಂದ ಎಡನಾಲೆಗೆ ನೀರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.