‘ನಾನು ಹೇಳಿದ್ದರಲ್ಲಿ ತಪ್ಪೇನೂ ಇಲ್ಲ’: ‘ಹಿಂದೂ’ ಹೇಳಿಕೆ ಬಗ್ಗೆ ಸತೀಶ್ ಜಾರಕಿಹೊಳಿ
Team Udayavani, Nov 8, 2022, 12:54 PM IST
ಬೆಂಗಳೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ‘ಹಿಂದೂ’ ಪದದ ಮೂಲದ ಬಗ್ಗೆ ಅವರು ಮಾಡಿದ ಹೇಳಿಕೆ ಭಾರೀ ವಿವಾದಕ್ಕೆ ಕಾರಣವಾಗಿದೆ. ಜಾರಕಿಹೊಳಿ ಹೇಳಿಕೆಗೆ ಭಾರೀ ವಿರೋಧ ವ್ಯಕ್ತವಾಗುತ್ತಿದೆ.
ನಿಪ್ಪಾಣಿಯಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಸತೀಶ್ ಅವರು ಈ ಹೇಳಿಕೆ ನೀಡಿದ್ದರು. ಇದೀಗ ಈ ಬಗ್ಗೆ ಸ್ಪಷ್ಟನೆ ನೀಡಿರುವ ಅವರು, ನಾನು ಹೇಳಿದ್ದರಲ್ಲಿ ತಪ್ಪೇನೂ ಇಲ್ಲ. ಈ ಪರ್ಷಿಯನ್ ಪದ (ಹಿಂದೂ) ಹೇಗೆ ಬಂದಿತು ಎಂಬುದರ ಬಗ್ಗೆ ನೂರಾರು ದಾಖಲೆಗಳಿವೆ. ಸ್ವಾಮಿ ದಯಾನಂದ ಸರಸ್ವತಿ ಅವರ ‘ಸತ್ಯಾರ್ಥ ಪ್ರಕಾಶ’, ಡಾ.ಜಿ.ಎಸ್.ಪಾಟೀಲ್ ಅವರ ‘ಬಸವ ಭಾರತ’ ಮತ್ತು ಬಾಲಗಂಗಾಧರ ತಿಲಕರ ‘ಕೇಸರಿ’ ಪತ್ರಿಕೆಗಳಲ್ಲಿಯೂ ಈ ಬಗ್ಗೆ ಉಲ್ಲೇಖವಿದೆ. ಇವು ಕೇವಲ 3-4 ಉದಾಹರಣೆಗಳಾಗಿವೆ, ವಿಕಿಪೀಡಿಯಾ ಅಥವಾ ಯಾವುದೇ ವೆಬ್ ಸೈಟ್ ನಲ್ಲಿ ಇಂತಹ ಅನೇಕ ಲೇಖನಗಳು ಲಭ್ಯವಿವೆ, ನೀವು ಅದನ್ನು ಓದಬೇಕು”ಎಂದು ವೀಡಿಯೊ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ:ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು; ಐವರು ಗಂಭೀರ
ರವಿವಾರ ರಾತ್ರಿ ನಿಪ್ಪಾಣಿಯ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಅವರು, “ಹಿಂದೂ ಎಂಬ ಪದವು ಎಲ್ಲಿಂದ ಹುಟ್ಟಿತು? ಅದು ನಮ್ಮದೇ? ಇದು ಪರ್ಷಿಯನ್, ಇರಾನ್, ಇರಾಕ್, ಉಜ್ಬೇಕಿಸ್ತಾನ್, ಕಜಕಿಸ್ತಾನ್ ಪ್ರದೇಶದಿಂದ ಬಂದಿದೆ. ಹಿಂದೂ ಪದಕ್ಕೂ ಭಾರತಕ್ಕೂ ಏನು ಸಂಬಂಧ? ಹಾಗಾದರೆ ನೀವು ಅದನ್ನು ಹೇಗೆ ಒಪ್ಪಿಕೊಳ್ಳುತ್ತೀರಿ? ಇದರ ಚರ್ಚೆಯಾಗಲಿ” ಎಂದು ಹೇಳಿದ್ದರು. ಅಲ್ಲದೆ ‘ಹಿಂದೂ ಶಬ್ದದ ಅರ್ಥ ತಿಳಿದರೆ ನಿಮಗೆ ನಾಚಿಕೆಯಾಗುತ್ತದೆ” ಎಂದೂ ಹೇಳಿದ್ದರು.
ಸತೀಶ್ ಜಾರಕಿಹೊಳಿ ಹೇಳಿಕೆಗೆ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಕೂಡಾ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಟ್ವೀಟ್ ಮಾಡಿದ ಅವರು, “ಸತೀಶ್ ಜಾರಕಿಹೊಳಿ ಅವರ ಹೇಳಿಕೆಯು ಅತ್ಯಂತ ದುರದೃಷ್ಟಕರ. ನಾವು ಇದನ್ನು ಖಂಡಿಸುತ್ತೇವೆ” ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Covid Scam: ತನಿಖೆಗೆ ಎಸ್‌ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ
Police FIR: ಎಫ್ಐಆರ್ ದಾಖಲಿಸಿ ನನ್ನ ವಿರುದ್ಧ ಸರ್ಕಾರದಿಂದ ದ್ವೇಷ ಸಾಧನೆ: ಎಚ್‌ಡಿಕೆ
Waqf: ಕಾಂಗ್ರೆಸ್ ನಾಯಕರಿಂದಲೇ 2.70 ಲಕ್ಷ ಕೋಟಿ ಮೌಲ್ಯದ ವಕ್ಫ್ ಆಸ್ತಿ ಕಬಳಿಕೆ: ಯತ್ನಾಳ್
MUST WATCH
ಹೊಸ ಸೇರ್ಪಡೆ
US Polls: ಕಮಲಾ ಗೆಲುವಿಗಾಗಿ ಪೂರ್ವಿಕರ ಗ್ರಾಮದಲ್ಲಿ ಅರ್ಚನೆ, ಅಭಿಷೇಕ!
Bharat Brand: ಭಾರತ್ ಬ್ರ್ಯಾಂಡ್-2ಗೆ ಚಾಲನೆ: 30ಕ್ಕೆ ಗೋಧಿ ಹಿಟ್ಟು, ಕೆ.ಜಿ.ಅಕ್ಕಿಗೆ 34
US Polls; ಟ್ರಂಪ್‌ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.