ಕೆಪಿಸಿಸಿಯವರು ಸತೀಶ್ ಜಾರಕಿಹೊಳಿ ಮೇಲೆ ಶಿಸ್ತುಕ್ರಮ ಜರುಗಿಸಲಿ: ಬಿಎಸ್ ವೈ
Team Udayavani, Nov 9, 2022, 1:30 PM IST
ಬೆಂಗಳೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ತಕ್ಷಣವೇ ಕ್ಷಮಾಪಣೆ ಕೇಳಬೇಕೆಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಒತ್ತಾಯಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸತೀಶ್ ಜಾರಕಿಹೊಳಿ ಹೇಳಿಕೆಯನ್ನು ಒಪ್ಪಲು ಸಾಧ್ಯವಿಲ್ಲ. ಅವರ ಪಕ್ಷದವರೇ ಒಪ್ಪಿಕೊಳ್ಳುತ್ತಿಲ್ಲ. ಹೇಳಿದ್ದನ್ನು ಮತ್ತೆ ಸಮರ್ಥಿಸಿಕೊಳ್ಳುವುದು ಎಷ್ಟರ ಮಟ್ಟಿಗೆ ಸರಿ ಎಂದರು.
ಸತೀಶ್ ಜಾರಕಿಹೊಳಿ ಕೂಡಲೇ ಬೇಷರತ್ ಕ್ಷಮೆಯಾಚಿಸಬೇಕು. ಒಂದು ವೇಳೆ ತಾವು ಹೇಳಿದ್ದೇ ಸರಿ ಎನ್ನುವುದಾದರೆ ಕೆಪಿಸಿಸಿಯವರು ಅವರ ಮೇಲೆ ಶಿಸ್ತುಕ್ರಮ ಜರುಗಿಸಲಿ. ಒಂದು ಧರ್ಮದ ಮತಕ್ಕಾಗಿ ಇನ್ನೊಂದು ಧರ್ಮವನ್ನು ಹಿಯಾಳಿಸುವುದು ಸರಿಯಲ್ಲ ಎಂದು ಆಕ್ಷೇಪಿಸಿದರು.
ಹಿಂದೂಗಳಿಗೆ ಅಪಮಾನ ಮಾಡುವ ಕೆಲಸವನ್ನು ಅವರು ಮಾಡಿದ್ದಾರೆ. ತಕ್ಷಣವೇ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ಜನರೇ ಪಾಠ ಕಲಿಸುತ್ತಾರೆ ಎಂದು ಎಚ್ಚರಿಕೆ ನೀಡಿದರು.
ಇದನ್ನೂ ಓದಿ: ಸತೀಶ್ ಜಾರಕಿಹೊಳಿಗೆ ಜನ ತಕ್ಕ ಉತ್ತರವನ್ನು ನೀಡುತ್ತಾರೆ: ಬಿ.ಸಿ.ಪಾಟೀಲ್
ಪಕ್ಷದ ಕೇಂದ್ರ ಚುನಾವಣಾ ಸಮಿತಿ ಸಭೆ ಇರುವುದರಿಂದ ದೆಹಲಿಗೆ ತೆರಳುತ್ತಿದ್ದೇನೆ. ಟಿಕೆಟ್ ಹಂಚಿಕೆ ಸಂಬಂಧ ಸಭೆ ನಡೆಯಲಿದೆ. ಇಂಥ ಸಂದರ್ಭದಲ್ಲಿ ಕರ್ನಾಟಕದ ರಾಜಕೀಯ ಬೆಳವಣಿಗೆಗಳ ಬಗ್ಗೆ ಮಾತುಕತೆ ನಡೆಯುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಸಚಿವ ಸಂಪುಟ ವಿಸ್ತರಣೆ ಹಾಗೂ ಪಕ್ಷದ ನಾಯಕರನ್ನು ಭೇಟಿ ಮಾಡುವ ಕುರಿತು ಮಾತನಾಡಿದ ಅವರು, ಕರ್ನಾಟಕದ ವಿಷಯ ಬಂದಾಗ ಮುಖ್ಯಮಂತ್ರಿಗಳು, ಪಕ್ಷದ ರಾಜ್ಯಾಧ್ಯಕ್ಷರು, ರಾಜ್ಯ ಉಸ್ತುವಾರಿಗಳಿದ್ದಾಗ ಚರ್ಚೆಗೆ ಬರುತ್ತದೆ ಎಂದು ಹೇಳಿದರು.
ಮಾಜಿ ಸಚಿವ ರಮೇಶ್ ಜಾರಕಿಹೊಳಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಾರೆ ಎಂಬ ಮಾಧ್ಯಮದವರ ಪ್ರಶ್ನೆಗೆ ನನಗೆ ಗೊತ್ತಿಲ್ಲದ ಯಾವುದೇ ವಿಷಯಗಳ ಬಗ್ಗೆ ಮಾತನಾಡುವುದಿಲ್ಲ ಎಂದು ಯಡಿಯೂರಪ್ಪ ಸ್ಪಷ್ಟನೆ ಕೊಟ್ಟರು.
ತಮ್ಮ ಪುತ್ರ ಬಿ.ವೈ.ವಿಜಯೇಂದ್ರ ಅವರು ವರುಣಾದಿಂದ ಸ್ಪರ್ಧಿಸುತ್ತಾರ ಎಂಬ ಮಾಧ್ಯಮದವರ ಪ್ರಶ್ನೆಗೆ ನಾನು ಶಿಕಾರಿಪುರದಿಂದ ಸ್ಪರ್ಧಿಸಬೇಕೆಂದು ಸೂಚಿಸಿದ್ದೇನೆ. ಅಂತಿಮವಾಗಿ ಯಾರಿಗೆ ಟಿಕೆಟ್ ನೀಡಬೇಕು ಎಂಬುದನ್ನು ಹೈಕಮಾಂಡ್ ನಿರ್ಧರಿಸುತ್ತದೆ. ಅವರು ತೆಗೆದುಕೊಳ್ಳುವ ನಿರ್ಧಾರಕ್ಕೆ ಎಲ್ಲರೂ ಬದ್ದವಾಗಿರಬೇಕಾಗುತ್ತದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Congress Government: ಮೇಲ್ಮನೆ ನಾಮನಿರ್ದೇಶನ: ಕಾಂಗ್ರೆಸ್‌ನಲ್ಲಿ ಲಾಬಿ ಆರಂಭ
Congress; ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ: ಯತೀಂದ್ರ ಸಿದ್ದರಾಮಯ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.