9 ರಾಜ್ಯಗಳ ಗೃಹ ಕಾರ್ಯದರ್ಶಿಗಳಿಗೆ ಪೌರತ್ವ ನೀಡುವ ಅಧಿಕಾರ
Team Udayavani, Nov 10, 2022, 6:40 AM IST
ನವದೆಹಲಿ: 1955ರ ಪೌರತ್ವ ಕಾಯಿದೆ ಅಡಿಯಲ್ಲಿ ಅಫ್ಘಾನಿಸ್ತಾನ, ಬಾಂಗ್ಲಾದೇಶ ಮತ್ತು ಪಾಕಿಸ್ತಾನದಿಂದ ದೇಶಕ್ಕೆ ಬಂದಿರುವ ಹಿಂದೂಗಳು, ಸಿಖ್ ರು, ಬೌದ್ಧರು, ಜೈನರು, ಪಾರ್ಸಿಗಳು ಮತ್ತು ಕ್ರಿಶ್ಚಿಯನ್ನರಿಗೆ ಭಾರತೀಯ ಪೌರತ್ವವನ್ನು ನೀಡುವ ಅಧಿಕಾರವನ್ನು ಒಂಬತ್ತು ರಾಜ್ಯಗಳ ಗೃಹ ಕಾರ್ಯದರ್ಶಿಗಳು ಮತ್ತು 31 ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ನೀಡಲಾಗಿದೆ.
ಗುಜರಾತ್, ರಾಜಸ್ತಾನ, ಛತ್ತೀಸಗಢ, ಹರಿಯಾಣ, ಪಂಜಾಬ್, ಮಧ್ಯಪ್ರದೇಶ, ಉತ್ತರ ಪ್ರದೇಶ, ದೆಹಲಿ ಮತ್ತು ಮಹಾರಾಷ್ಟ್ರದ ಗೃಹ ಕಾರ್ಯದರ್ಶಿಗಳಿಗೆ ಹಾಗೂ ಈ ರಾಜ್ಯಗಳ 31 ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಅಫ್ಘಾನಿಸ್ತಾನ, ಬಾಂಗ್ಲಾದೇಶ ಮತ್ತು ಪಾಕಿಸ್ತಾನದ ಅಲ್ಪಸಂಖ್ಯಾತರಿಗೆ ಭಾರತೀಯ ಪೌರತ್ವವನ್ನು ನೀಡುವ ಅಧಿಕಾರವನ್ನು ನೀಡಲಾಗಿದೆ.
ಕೇಂದ್ರ ಗೃಹ ಸಚಿವಾಲಯದ 2021-22ರ ವಾರ್ಷಿಕ ವರದಿ ಪ್ರಕಾರ, ಇದುವರೆಗೂ ಅಫ್ಘಾನಿಸ್ತಾನ, ಬಾಂಗ್ಲಾದೇಶ ಮತ್ತು ಪಾಕಿಸ್ತಾನದ 1,414 ಮಂದಿ ಅಲ್ಪಸಂಖ್ಯಾತರಿಗೆ 1955ರ ಪೌರತ್ವ ಕಾಯಿದೆ ಅಡಿಯಲ್ಲಿ ಭಾರತೀಯ ಪೌರತ್ವ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
MUST WATCH
ಹೊಸ ಸೇರ್ಪಡೆ
Udupi; ಗೀತಾರ್ಥ ಚಿಂತನೆ 96 : ವ್ಯಾಮೋಹ ಜಾಲ vs ಜಾಗೃತಾತ್ಮ
Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ
Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್ ರೈ
MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್ದು: ಡಿಕೆಶಿ
Mangaluru: ಎಲ್ಲ ವರ್ಗದ ಜನರ ಸಹಕಾರದಿಂದ ಸಾಮಾಜಿಕ ಸಾಧನೆ: ಕನ್ಯಾನ ಸದಾಶಿವ ಶೆಟ್ಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.